HOME » NEWS » State » BENGALURU VIOLENCE COMMISSIONER KAMAL PANT SAYS 144 SECTION IMPOSED CITY AS RIOTS GNR

Bangalore Riots: ಬೆಂಗಳೂರು ಗಲಭೆ: ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಕರ್ಫ್ಯೂ; ನಗರದಾದ್ಯಂತ 144 ಸೆಕ್ಷನ್​​​ ಜಾರಿ

ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್‌ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

news18-kannada
Updated:August 12, 2020, 8:33 AM IST
Bangalore Riots: ಬೆಂಗಳೂರು ಗಲಭೆ: ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಕರ್ಫ್ಯೂ; ನಗರದಾದ್ಯಂತ 144 ಸೆಕ್ಷನ್​​​ ಜಾರಿ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
  • Share this:
ಬೆಂಗಳೂರು(ಆ.12): ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್‌ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.

ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್​ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್​​ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್‌ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್‌ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮಂಗಳವಾರ ತಡರಾತ್ರಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಗುಂಡು ಹಾರಿಸಿದ್ದರು. ಪೊಲೀಸರು ಗುಂಡಿಗೆ ಮೂವರು ಬಲಿಯಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆಗಲಭೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್‌ ತುಕಡಿಯ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಗಲಭೆಯಲ್ಲಿ ಡಿಸಿಪಿ ವಾಹನವೂ ಧ್ವಂಸ ಆಗಿತ್ತು. ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿಯವರ ಕಾವಲ್‌ ಭೈರಸಂದ್ರ ನಿವಾಸದ ನೆಲಮಹಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
Published by: Ganesh Nachikethu
First published: August 12, 2020, 8:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories