Bengaluru Weather: ಬೆಂಗಳೂರಿನಲ್ಲಿ ಬುಧವಾರ ಅಬ್ಬರಿಸಿದ ವರುಣ; ಎಷ್ಟು ದಿನ ಮಳೆ ಮುಂದುವರಿಯಲಿದೆ ಗೊತ್ತಾ?

ಬೆಂಗಳೂರಿನಲ್ಲಿ ಇನ್ನೂ ಕೆಲ ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಕೆಲ ದಿನ ಸಂಜೆ ಹಾಗೂ ರಾತ್ರಿ ವೇಳೆಗೆ ಮಳೆ ಆಗುವ ಸಾಧ್ಯತೆ ಇದೆ ಎಂಬುದು ಹವಾಮಾನ ಇಲಾಖೆಯ ಎಚ್ಚರಿಕೆ.

  • Share this:
    ಬೆಂಗಳೂರು (ಸೆಪ್ಟೆಂಬರ್​ 10): ಬುಧವಾರ ರಾತ್ರಿ ವರುಣ ಆರ್ಭಟಿಸಿದ್ದಾನೆ.  ಸಂಜೆ ವೇಳೆಗೆ ಆರಂಭವಾದ ಮಳೆ ಮುಂಜಾನೆವರೆಗೂ ಮುಂದುವರಿದೇ ಇತ್ತು.  ರಾತ್ರಿ 6ಗಂಟೆ ಸುಮಾರಿಗೆ ಮಳೆ ಸುರಿಯಲು ಆರಂಭವಾಗಿತ್ತು. ನಂತರ 10 ಗಂಟೆವರೆಗೂ ಮಳೆ ಮುಂದುವರಿದೇ ಇತ್ತು. ನಂತರ ಕೊಂಚ ತಗ್ಗಿದ್ದ ಮಳೆ ಮತ್ತೆ ಅಬ್ಬರಿಸಿದೆ.  ಮೆಜೆಸ್ಟಿಕ್, ನಾಗರಬಾವಿ ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

    ಸತತವಾಗಿ ಸುರಿದ ಭಾರೀ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು ಮನೆಗೆ ತೆರಳಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಲವಾರು ಮನೆಗಳು ಜಲಾವೃತವಾಗಿವೆ. ಬಸವನಗುಡಿ, ರಾಜಾಜಿನಗರ, ಮಲ್ಲೇಶ್ವರ, ಗಿರಿನಗರ, ರಾಜರಾಜೇಶ್ವರಿ ನಗರ, ಯಶವಂತಪುರ, ಕತ್ರಿಗುಪ್ಪೆ, ಬನಶಂಕರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಚರಂಡಿ ತುಂಬಿ ಹರಿದು ರಸ್ತೆಗಳು ನದಿಗಳಂತೆ ಮಾರ್ಪಾಟಾಗಿತ್ತು. ಹೀಗಾಗಿ ಹಲವೆಡೆ ಟ್ರಾಫಿಕ್ ಸಮಸ್ಯೆ ಸಹ ಉಂಟಾಗಿತ್ತು. ಪರಿಣಾಮ ಮನೆಗೆ ತಲುಪಲು ಸಾಧ್ಯವಾಗದೆ ಸವಾರರು ಪರದಾಡಿದ್ದಾರೆ.

      ಇಂದು ಮುದುವರಿಯಲಿದೆ ಮಳೆ: 

    ಬೆಂಗಳೂರಿನಲ್ಲಿ ಇನ್ನೂ ಕೆಲ ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಕೆಲ ದಿನ ಸಂಜೆ ಹಾಗೂ ರಾತ್ರಿ ವೇಳೆಗೆ ಮಳೆ ಆಗುವ ಸಾಧ್ಯತೆ ಇದೆ ಎಂಬುದು ಹವಾಮಾನ ಇಲಾಖೆಯ ಎಚ್ಚರಿಕೆ. ಹೀಗಾಗಿ ಕಚೇರಿಗೆ ಬೈಕ್​ನಲ್ಲಿ ತೆರಳುವವರು ಈ ಬಗ್ಗೆ ಕೊಂಚ ಗಮನಸವಹಿಸಬೇಕು.

    ಈ ಸಮಯದಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ನಿಮಗೆ ಸಾಮಾನ್ಯ ಜ್ವರ ಕಾಣಿಸಿಕೊಂಡರೂ ಅದು ಕೊರೋನಾ ಇರಬಹುದೇ ಎನ್ನುವ ಆಲೋಚನೆ ಕಾಡುತ್ತದೆ. ಹೀಗಾಗಿ, ಆ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳಿತು.
    Published by:Rajesh Duggumane
    First published: