ಕಳೆದ ಏಳೆಂಟು ತಿಂಗಳಿನಿಂದ ಶಾಂತವಾಗಿದ್ದ ಧರ್ಮ ದಂಗಲ್ (Dharam Danagal) ಚುನಾವಣೆ (Assembly Election 2023) ಸಮೀಪಿಸುತ್ತಿದ್ದಂತೆ ಮತ್ತೆ ಮುನ್ನಲೆಗೆ ಬಂದಿದೆ. ಕರಾವಳಿ ಭಾಗದಿಂದ (Coastal Karnataka) ಆರಂಭವಾದ ಈ ದಂಗಲ್ ರಾಜ್ಯದ ಬಹುತೇಕ ಭಾಗಗಳಿಗೆ ಕಾಲಿಡುತ್ತಿದೆ. ಕಳೆದ ವಾರ ನಡೆದ ಕಡಲೆಕಾಯಿ ಪರಿಷೆಯಲ್ಲಿ (Kadlekai Parishe) ಹಿಂದೂಯೇತರರು ಸಹ ವ್ಯಾಪಾರ ಮಾಡಿದ್ದರು. ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು (Hindu Organization) ದತ್ತಿ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಹಿಂದೂಯೇತರ ವ್ಯಾಪಾರಿಗಳಿಗೆ (Non Hindu Traders) ಹಿಂದೂ ದೇವಸ್ಥಾನದ ಜಾತ್ರೆಯಲ್ಲಿ (Fairs) ಅನುಮತಿ ನೀಡದಂತೆ ಮನವಿ ಮಾಡಿಕೊಂಡಿದ್ದವು. ಜಾತ್ರಾ ಮಹೋತ್ಸವಗಳು ನಡೆಯುವ ಸಂದರ್ಭದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸುವ ಅವಕಾಶ ನೀಡುವಂತೆ ಆಗ್ರಹ ಮಾಡಲಾಗಿತ್ತು.
ಇದೇ ತಿಂಗಳು ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subrahamnya) ನಡೆಯುವ ಚಂಪಾಕ ಷಷ್ಠಿ ಆಚರಣೆಯಲ್ಕಿಯೂ ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಭಜರಂಗದಳದಿಂದ ಬಿಬಿಎಂಪಿ ಆಯುಕ್ತರಿಗೆ ಮನವಿ
ಈಗ ಧರ್ಮ ದಂಗಲ್ ಬೆಂಗಳೂರಿಗೆ ಕಾಲಿಟ್ಟಿದೆ. ವಿವಿ ಪುರಂ ಸುಬ್ರಹ್ಮಣ್ಯ ಜಾತ್ರೆಗೆ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು. ಅನ್ಯ ಧರ್ಮೀಯರಿಗೆ ಅವಕಾಶ ನೀಡಬಾರದು ಎಂದು ಬಿಬಎಂಪಿ ಮತ್ತು ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತಿದೆ.
ಈ ಸಂಬಂಧ ಭಜಗರಂಗದಳದಿಂದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ದಕ್ಷಿಣ ಉಪ ಪೋಲಿಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ವ್ಯಾಪಾರದ ಹೆಸರಲ್ಲಿ ಜಿಹಾದ್ ಮಾಡುತ್ತಾರೆ. ಅವರ ಉರುಸುಗಳಲ್ಲಿ ಹಿಂದೂಗಳಿಗೆ ಅವಕಾಶ ಕೊಡೋದಿಲ್ಲ. ಈ ಹಿನ್ನೆಲೆ ನೀವು ಅವಕಾಶ ನೀಡಬಾರದು ಎಂದು ಭಜರಂಗದಳ ಮನವಿ ಮಾಡಿಕೊಂಡಿದೆ.
ಹಿಂದೂ ಸಂಘಟನೆಗಳ ಪತ್ರದಲ್ಲಿ ಏನಿದೆ?
ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿಯ ವಿವಿ ಪುರಂನಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಬೆಳ್ಳಿ ತೇರು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆವ ಅನುಮತಿ ನೀಡಬಾರದು.
ಹಿಂದೂಗಳ ಧಾರ್ಮಿಕ ಭಾವನೆಗೆ ಬೆಲೆ ಕೊಡದೇ ಇರುವುದು, ದೇಶದ ಕಾನೂನಿಗೆ ಬೆಲೆ ಕೊಡದೇ ಇರುವುದು, ಮೂರ್ತಿ ಪೂಜೆಯನ್ನು ನಂಬದೇ ಇರುವುದು, ವ್ಯಾಪಾರದ ಹೆಸರಿನಲ್ಲಿ ಜಿಹಾದ್ ಮಾಡುವುದು, ಹಿಂದೂಗಳ ದೇವರುಗಳನ್ನು ಸಾಮಾಜಿಕ ಜಾಲತಾಣದಲ್ಲಿ ವಿಕೃತಗೊಳಿಸುವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು.
ಮುಸ್ಲಿಮರ ಉರುಸುಗಳಲ್ಲಿ ಹಿಂದೂಗಳಿಗೆ ಅವಕಾಶ ಇಲ್ಲ
ಮುಸ್ಲಿಮರ ಉರುಸುಗಳಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಅವಕಾಶ ನೀಡದಿರುವುದು ನಮ್ಮ ಗಮನಕ್ಕೆ ತಲಾಗಿದೆ ಎಂದು ಹೇಳಿದ್ದಾರೆ.
ಇಲ್ಲಿ ಹಿಂದೂಯೇತರರು ವ್ಯವಹರಿಸಲು ಅನರ್ಹರರು
ನಾವು ಪೂಜಿಸುವ ಗೋವನ್ನು ಕಡಿದು ತಿನ್ನುವವರಿಗೆ ಪದೇ ಪದೇ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಮ್ಮ ಆಚರಣೆಗಳಲ್ಲಿ ನಂಬಿಕೆ ಇಲ್ಲದವರಿಗೆ ಹಿಂದೂ ಹಬ್ಬದಲ್ಲಿ ವ್ಯಾಪಾರ ಮಾಡಲು ಯಾವ ಅರ್ಹತೆ ಕೂಡ ಇಲ್ಲ.
ಆದ್ದರಿಂದ ಈ ಅಂಶಗಳನ್ನು ಗಮನಿಸಿ ಹಿಂದೂಯೇತರರಿಗೆ ಬೆಳ್ಳಿ ತೇರಿನ ಸಂದರ್ಭದಲ್ಲಿ ವ್ಯಾಪಾರ ಕೈ ಅವಕಾಶ ಮಾಡಿಕೊಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ
ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು. 2002ರ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆಯಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ ಎಂದು ಹಿಂದೂ ಸಂಘಟನೆಗಳು ಹೇಳಿವೆ.
ಇದನ್ನೂ ಓದಿ: Mangaluru Blast: ಮಂಗಳೂರು ಬ್ಲಾಸ್ಟ್ ಕೇಸಲ್ಲಿ ಸಾಕ್ಷ್ಯ ಸಂಗ್ರಹವೇ ಸವಾಲು
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ಜಾತ್ರಾ ಮಹೋತ್ಸವಗಳು ಶುರುವಾಗಲಿರುವ ಹಿನ್ನೆಲೆ ಹಿಂದೂ ಸಂಘಟನೆಗಳು ಮನವಿಯನ್ನು ಸಲ್ಲಿಸಲು ಆರಂಭಿಸಿವೆ ಎಂದು ತಿಳಿದು ಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ