ಭಾರತ್​ ಬಂದ್​; ಬೆಂಗಳೂರಿನಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ? ಯಾವೆಲ್ಲ ಸೌಕರ್ಯ ಲಭ್ಯವಿದೆ? ಇಲ್ಲಿದೆ ಮಾಹಿತಿ...

Bharat Bandh Updates: ದೇಶವ್ಯಾಪಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ. ಇಂದು ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗುತ್ತಿದ್ದು, 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

news18-kannada
Updated:January 8, 2020, 8:37 AM IST
ಭಾರತ್​ ಬಂದ್​; ಬೆಂಗಳೂರಿನಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ? ಯಾವೆಲ್ಲ ಸೌಕರ್ಯ ಲಭ್ಯವಿದೆ? ಇಲ್ಲಿದೆ ಮಾಹಿತಿ...
ಬಿಎಂಟಿಸಿ ಬಸ್​ಗಳು
  • Share this:
ಬೆಂಗಳೂರು (ಜ. 8): ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಭಾರತ್​ ಬಂದ್​ಗೆ ಕರೆನೀಡಿವೆ. ರಾಜ್ಯಾದ್ಯಂತ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ? ಯಾವೆಲ್ಲ ಸೌಲಭ್ಯಗಳಿಗೆ ಬಂದ್​ನ ಬಿಸಿ ತಟ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಕ್ರಮಗಳಿಗೆ ವಿರೋಧ, ಕನಷ್ಠ ವೇತನ 21 ಸಾವಿರದಿಂದ 24 ಸಾವಿರ ರೂ. ಏರಿಕೆಗೆ ಆಗ್ರಹ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಿಂಪಡೆದುಕೊಳ್ಳಲು ಆಗ್ರಹ, 10 ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿ 4 ಅತಿದೊಡ್ಡ ಬ್ಯಾಂಕ್​ಗಳಾಗಿ ಪರಿವರ್ತಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಭಾರತ ಬಂದ್​ಗೆ ಕರೆ ನೀಡಲಾಗಿದೆ.

ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ್​ ಬಂದ್​ಗೆ ಬಿಎಂಟಿಸಿ, ಕೆಎಸ್​ಆರ್​ಟಿಸಿಗಳು ಬೆಂಬಲ ನೀಡಿಲ್ಲ. ಬಸ್​ಗಳು ಎಂದಿನಂತೆ ಸಂಚರಿಸುತ್ತಿದ್ದು, ಎಲ್ಲ ಅಂಗಡಿಗಳೂ ತೆರೆದಿವೆ. ಎಂದಿನಂತೆ ಆಟೋ ಮತ್ತು ಟ್ಯಾಕ್ಸಿ ಸೇವೆ ಮುಂದುವರೆದಿದೆ. ಮೆಜೆಸ್ಟಿಕ್ ಸುತ್ತ- ಮುತ್ತ ಬಿಗಿ ಬಂದೋಬಸ್ತ್ ವಹಿಸಲಾಗಿದ್ದು, ರೈಲು ಸಂಚಾರದಲ್ಲೂ ವ್ಯತ್ಯಯವಾಗಿಲ್ಲ.
ಬೆಂಗಳೂರಿನಲ್ಲಿ ಮೆಟ್ರೋ ಸಂಚಾರಕ್ಕೂ ಬಂದ್​ನ ಬಿಸಿ ತಟ್ಟಿಲ್ಲ. ಎಂದಿನಂತೆ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ಬೆಳಗ್ಗೆಯಿಂದಲೇ ಮೆಟ್ರೋ ರೈಲಿನ ಮೂಲಕ ಪ್ರಯಾಣಿಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸಂಚಾರ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ನಿಲ್ದಾಣಗಳ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕೆ.ಆರ್. ಮಾರುಕಟ್ಟೆ, ಯಶವಂತಪುರದ ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದ ವ್ಯಾಪಾರ ಕಡಿಮೆಯಾಗಿದ್ದು, ಬಂದ್​ನ ಭಯದಿಂದ ಗ್ರಾಹಕರು ಕಡಿಮೆ ಸಂಖ್ಯೆಯಲ್ಲಿ ಮಾರುಕಟ್ಟೆಯತ್ತ ಬರುತ್ತಿದ್ದಾರೆ. ಬಸ್​ಗಳ ಪ್ರಯಾಣಿಕರ ಸಂಖ್ಯೆಯಲ್ಲೂ ಇಳಿಮುಖವಾಗಿದ್ದು, ಇದ್ದಕ್ಕಿದ್ದಂತೆ ಬಸ್ ಸಂಚಾರ ಸ್ಥಗಿತಗೊಳಿಸಬಹುದು ಎಂಬ ಕಾರಣಕ್ಕೆ ಗ್ರಾಹಕರು ಬಸ್​ಗಳ ಮೇಲೆ ಅವಲಂಬಿತರಾಗಿಲ್ಲ.

ಇದನ್ನೂ ಓದಿ: ಇಂದು ಭಾರತ ಬಂದ್; ಎಂದಿನಂತೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಕಾರ್ಯನಿರ್ವಹಣೆ; ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ

ಕಾರ್ಮಿಕ ಸಂಘಟನೆಗಳು, ಕೇಂದ್ರ-ರಾಜ್ಯ ಸರ್ಕಾರಿ ನೌಕರರು, ಬ್ಯಾಂಕ್ ನೌಕರರು, ಎಲ್​ಐಸಿ ನೌಕರರು, ಸಹಕಾರಿ ಬ್ಯಾಂಕ್ ನೌಕರರು, ಸರ್ಕಾರಿ ಶಿಕ್ಷಕರು ಹಾಗೂ ಸಂಘಟಿತ ವಲಯದ ಕಾರ್ಮಿಕರು ಬಂದ್​ಗೆ ಬೆಂಬಲ ನೀಡಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಹಲವು ನಿಬಂಧನೆಗಳೊಂದಿಗೆ ಬಂದ್​ಗೆ ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಯಾವುದೇ ಅಂಗಡಿ ಮುಗ್ಗಟ್ಟು ಬಂದ್ ಮಾಡಿಸುವಂತಿಲ್ಲ. ಬಲವಂತವಾಗಿ ಅಥವಾ ಮನವಿ ಮಾಡಿ ಕೂಡ ಬಂದ್ ಮಾಡಿಸುವಂತಿಲ್ಲ. ಅವರಾಗೇ ಒಪ್ಪಿ ಬೆಂಬಲ ಸೂಚಿಸಿದರೆ ಪರವಾಗಿಲ್ಲ. ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ಕೊಟ್ಟಿದ್ದಾರೆ.ಇದನ್ನೂ ಓದಿ: ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರದು; ಸಿಎಂ ಬಿ.ಎಸ್.ಯಡಿಯೂರಪ್ಪ

ದೇಶವ್ಯಾಪಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ. ಇಂದು ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗುತ್ತಿದ್ದು, 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ರಾಜಭವನ, ವಿಧಾನಸೌಧಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ವಿವಿಧ ಕಾರ್ಮಿಕ ಸಂಘಗಳ ಸಂಘಟಕರಿಗೆ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ, ಅಹಿತಕರ ಘಟನೆ ನಡೆದರೆ, ಕಲ್ಲು ತೂರಾಟ ನಡೆದರೆ ಆಯೋಜಕರೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ನಿಗದಿಪಡಿಸಿರುವ ಜಾಗದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು. ಎಲ್ಲಿಯೂ ಮೆರವಣಿಗೆ, ಜಾಥಾ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಈ ಕುರಿತು 15 ಲಕ್ಷ ಬಾಂಡ್ ಬರೆಸಿಕೊಂಡು ಧರಣಿಗೆ ಅನುಮತಿ ನೀಡಲಾಗಿದೆ.
Published by: Sushma Chakre
First published: January 8, 2020, 8:37 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading