ಬೆಂಗಳೂರು(ಡಿ.08): ಕೃಷಿ ಮಸೂದೆ ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದ್ದು, ವಿವಿಧ ರೈತ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕದಲ್ಲಿಯೂ ಪ್ರತಿಭಟನೆಯ ಬಿಸಿ ಜೋರಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಂದಿನ ಭಾರತ್ ಬಂದ್ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಭಾರತ್ ಬಂದ್ ಎಲ್ಲಿಯೂ ಯಶಸ್ವಿಯಾಗಿಲ್ಲ, ಬೆಂಗಳೂರಿನಲ್ಲಿಯೂ ಯಶಸ್ವಿಯಾಗಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರೈತಪರವಾದ ಸರ್ಕಾರ ನಮ್ಮದು . ರೈತ ಪರವಾದ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಭಾರತ ಬಂದ್ ಎಲ್ಲೂ ಯಶಸ್ವಿಯಾಗಿಲ್ಲ. ಬೆಂಗಳೂರಿನಲ್ಲೂ ಯಶಸ್ವಿಯಾಗಲ್ಲ. ವಾಸ್ತವಿಕ ಅಂಶಗಳನ್ನು ಗಮನಿಸಬೇಕು ರಾಜಕೀಯ ಕಾರಣಕ್ಕಾಗಿ ಬಂದ್ಗೆ ಕರೆ ನೀಡುವುದು ಸರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ; ಮಾಜಿ ಸಿಎಂ ಸಿದ್ದರಾಮಯ್ಯ
ಇನ್ನು, ಕೈ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್ ಮುಳುಗಿ ಹೋಗುತ್ತಿರುವ ಹಡಗು. ಅವರು ಕಪ್ಪು-ಬಿಳಿ ಯಾವ ಬಣ್ಣದ ಪಟ್ಟಿಯನ್ನಾದರೂ ಧರಿಸಲಿ, ಅವರನ್ನು ಯಾರು ಕೇಳುತ್ತಾರೆ ಎಂದು ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಸಿಎಂ ವ್ಯಂಗ್ಯ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ