Bharath Bandh: ಸೆಕ್ಷನ್ 144​​ ನಡುವೆಯೂ ವಿಧಾನಸೌಧದ ಬಳಿ ಕಪ್ಪು ಬಾವುಟ ಹಿಡಿದು ಕಾಂಗ್ರೆಸ್​ ನಾಯಕರ ಪ್ರತಿಭಟನೆ

ಪೊಲೀಸರು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ವಿಧಾನಸೌಧದ ಆವರಣದಲ್ಲಿ 144 ಸೆಕ್ಷನ್ ಜಾರಿತಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸ್​ ಸಿಬ್ಬಂದಿ ಗಾಂಧಿ ಪ್ರತಿಮೆ ಬಳಿ ಪೋಸ್ಟರ್​ ಅಂಟಿಸಿ ಮಾಹಿತಿ ನೀಡಿದ್ದರು.

ಸಿದ್ದರಾಮಯ್ಯ

ಸಿದ್ದರಾಮಯ್ಯ

 • Share this:
  ಬೆಂಗಳೂರು(ಡಿ.08): ಇಂದು ದೇಶಾದ್ಯಂತ ಭಾರತ್​ ಬಂದ್​ಗೆ ಕರೆ ನೀಡಿದ್ದು, ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್​ ನಾಯಕರು ಕೂಡ ಭಾರತ್​ ಬಂದ್​ಗೆ ಬೆಂಬಲ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್​ ನಾಯಕರು ರೈತ ಮಸೂದೆ ಕಾಯ್ದೆ ವಿರೋಧಿಸಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಕೂತು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹಮದ್, ಕೆ ಜೆ ಜಾಜ್೯ , ರಾಮಲಿಂಗಾ ರೆಡ್ಡಿ, ಮಾಜಿ ಡಿಸಿಎಂ ಪರಮೇಶ್ವರ್, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್, ನಾರಾಯಣಸ್ವಾಮಿ, ಯು.ಬಿ.ವೆಂಕಟೇಶ್ ಇನ್ನೂ ಮೊದಲಾದವರು ಪಾಲ್ಗೊಂಡಿದ್ದಾರೆ.

  KGF Chapter 2: ಕೆಜಿಎಫ್​ ಚಾಪ್ಟರ್ 2 ವಿಲನ್​ ಬಗ್ಗೆ ಯಶ್​ ಕೊಟ್ಟ ಅಪ್ಡೇಟ್​ ಇಲ್ಲಿದೆ..!

  ಪೊಲೀಸರು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ವಿಧಾನಸೌಧದ ಆವರಣದಲ್ಲಿ 144 ಸೆಕ್ಷನ್ ಜಾರಿತಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸ್​ ಸಿಬ್ಬಂದಿ ಗಾಂಧಿ ಪ್ರತಿಮೆ ಬಳಿ ಪೋಸ್ಟರ್​ ಅಂಟಿಸಿ ಮಾಹಿತಿ ನೀಡಿದ್ದರು. ಆದರೆ ಪೊಲೀಸ್ ಇಲಾಖೆಯ ಆದೇಶವನ್ನು ನೋಡಿಯೂ ಸಹ ಕಾಂಗ್ರೆಸ್​ ಕಾರ್ಯಕರ್ತರು ವಿಧಾನಸೌಧದ ಆವರಣಕ್ಕೆ ಆಗಮಿಸಲು ಶುರು ಮಾಡಿದರು. ಗಾಂಧಿ ಪ್ರತಿಮೆ ಬಳಿ ಸೇರಿದ ಕೈ ಕಾರ್ಯಕರ್ತರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು.

  ವಿಧಾನಸೌಧದ ಆವರಣದಲ್ಲಿ  ಸೆಕ್ಷನ್ 144 ಜಾರಿಯಿದ್ದರೂ ಸಹ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೈ ನಾಯಕರು ರೈತ ವಿರೋಧಿ ಬಿಜೆಪಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
  Published by:Latha CG
  First published: