• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bhaskar Rao: ಇಂದು ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್‌ AAP ಸೇರ್ಪಡೆ

Bhaskar Rao: ಇಂದು ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್‌ AAP ಸೇರ್ಪಡೆ

ಭಾಸ್ಕರ್ ರಾವ್

ಭಾಸ್ಕರ್ ರಾವ್

ಇಂದು ಬೆಳಿಗ್ಗೆ ಮತ್ತೊಮ್ಮೆ ಅರವಿಂದ ಕೇಜ್ರಿವಾಲ್ ಮತ್ತು ಭಾಸ್ಕರ್ ರಾವ್ ಅವರ ನಡುವೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ. ಬಳಿಕ ಮಧ್ಯಾಹ್ನ 1 ಗಂಟೆಗೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಭಾಸ್ಕರ್ ರಾವ್ ಆಪ್ ಸೇರ್ಪಡೆ ಆಗಲಿದ್ದಾರೆ.

  • Share this:

ನವದೆಹಲಿ, ಏ. 4: ಇತ್ತೀಚೆಗೆ ಗಡಿ ರಾಜ್ಯ ಪಂಜಾಬ್‌ ನಲ್ಲಿ (Border State Punjab) ಅಧಿಕಾರ ಗಳಿಸಿದ ಬಳಿಕ ಭಾರೀ ಹುಮ್ಮಸ್ಸಿನಲ್ಲಿರುವ ಆಮ್ ಆದ್ಮಿ ಪಕ್ಷ (Aam Admi Party) ಈಗ ಕರ್ನಾಟಕದಲ್ಲೂ (Karnataka) ನೆಲೆಯೂರಲು ಪ್ರಯತ್ನಿಸುತ್ತಿದೆ. ಈಗಾಗಲೇ ಹಲವಾರು ನಾಯಕರ ಸಂಪರ್ಕ ಮಾಡಿದೆ. ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Chief Minister Of Delhi And Aam Admi Party National Convener Aravind Kejriwal) ನೇತೃತ್ವದಲ್ಲಿ ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao)  ಪಕ್ಷ ಸೇರುತ್ತಿದ್ದಾರೆ.


ಕೇಜ್ರಿವಾಲ್ ಜೊತೆ ಫೈನಲ್ ಮಾತುಕತೆ ಬಳಿಕ ಪಕ್ಷ ಸೇರ್ಪಡೆ


ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ  ಈಗಾಗಲೇ ಹಲವು ಸುತ್ತಿನ ಮಾತುಕತೆಗಳಾಗಿವೆ. ಇಂದು ಬೆಳಗ್ಗೆ ಮತ್ತೊಮ್ಮೆ ಅರವಿಂದ್ ಕೇಜ್ರಿವಾಲ್ ಮತ್ತು ಭಾಸ್ಕರ್ ರಾವ್ ಅವರ ನಡುವೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ.


ಬಳಿಕ ಮಧ್ಯಾಹ್ನ 1 ಗಂಟೆಗೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಅರವಿಂದ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ.


ಇದನ್ನೂ ಓದಿ: Koppala: ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ, ಸಂಬಂಧಿಕರಿಂದ ಆಸ್ಪತ್ರೆಯ ಕಿಟಕಿ, ಬಾಗಿಲು ಪುಡಿ ಪುಡಿ


ಭಾಸ್ಕರ್ ರಾವ್ ಗೆ ಹೆಚ್ಚಿನ ಜವಾಬ್ದಾರಿ ನೀಡುವ ಸಾಧ್ಯತೆ


ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ತಯಾರಿ ನಡೆಸಿದೆ. ಅಲ್ಲದೆ 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೂ ಸಿದ್ದವಾಗುತ್ತಿದೆ. ಅನೇಕ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಮಾತುಕತೆಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಇಂದು ಪಕ್ಷ ಸೇರ್ಪಡೆಗೊಳ್ಳುತ್ತಿದ್ದಂತೆ ಅವರಿಗೆ  ಹೆಚ್ಚಿನ ಜವಾಬ್ದಾರಿ ನೀಡುವ ಸಾಧ್ಯತೆ ಇದು ಎಂದು ಆಮ್ ಆದ್ಮಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.


ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದ ಭಾಸ್ಕರ್ ರಾವ್


ಭಾಸ್ಕರ್ ರಾವ್ ಅವರು ರಾಜಕಾರಣ ಪ್ರವೇಶ ಮಾಡುತ್ತಾರೆ. ಕಾಂಗ್ರೆಸ್ ಸೇರಿ ಬಸವನಗುಡಿ ವಿಧಾನಸಭಾ ಕ್ಷೇತ್ರ ಅಥವಾ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹುರಿಯಾಳಾಗುತ್ತಾರೆ ಎಂಬ ದಟ್ಟ ವದಂತಿ ಇತ್ತು. ಕಡೆಗೆ ಅವರು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತಿದ್ದಾರೆ‌.


ಈ ಹಿನ್ನೆಲೆಯಲ್ಲಿ ಪ್ರಸ್ತುತ ರೈಲ್ವೇ ಇಲಾಖೆಯ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಕಳೆದ ವಾರ ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದರು.‌‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ/ಐಜಿಪಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.‌‌


ಸ್ವಯಂ ನಿವೃತ್ತಿ ಕೋರಿ 16 ಸೆಪ್ಟೆಂಬರ್ 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಆರು ತಿಂಗಳಾದರೂ ಗೃಹ ಸಚಿವಾಲಯದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆ್ಯಕ್ಟ್ 16(2)ನಡಿ ಸೇವೆಗೆ ಗುಡ್ ಬೈ ಹೇಳಿದ್ದಾರೆ.


ಇದನ್ನೂ ಓದಿ: Bengaluru: PUBG ಆಟಕ್ಕಾಗಿ ರೈಲ್ವೇ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ 12 ವರ್ಷದ ಬಾಲಕ


ಆಲ್ ಇಂಡಿಯಾ ಸರ್ವಿಸ್ ಆ್ಯಕ್ಟ್ 16(2) ಪ್ರಕಾರ ಸಂಬಂಧಿಸಿದ ಅಧಿಕಾರಿಗೆ 50 ವರ್ಷ ವಯಸ್ಸು ದಾಟಿರಬೇಕು. 20 ವರ್ಷ ಸೇವೆ ಪೂರ್ಣಗೊಳಿಸಿರಬೇಕು‌. ನಿವೃತ್ತಿಗೆ ಮನವಿ ಸಲ್ಲಿಸುವಾಗ ಅಮಾನತ್ತಿನಲ್ಲಿರಬಾರದು. ಹಾಗಾಗಿ ಕಳೆದ ವಾರ ಅಧಿಕೃತವಾಗಿ ಸೇವೆಗೆ‌ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್ ಇಂದು‌ ಆಮ್ ಆದ್ಮಿ ಪಕ್ಷ ಸೇರುತ್ತಿದ್ದಾರೆ.

top videos
    First published: