ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗೆ ಧನ್ಯವಾದ ಹೇಳಿದ ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಎತ್ತಂಗಡಿ ಮಾಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ 1990ರ ಬ್ಯಾಚ್​ನ ಐಪಿಎಸ್ ಅಧಿಕಾರಿ ಹಾಗೂ ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಅವರನ್ನು ನೇಮಿಸಿದೆ.

ಭಾಸ್ಕರ್ ರಾವ್

ಭಾಸ್ಕರ್ ರಾವ್

 • Share this:
  ಬೆಂಗಳೂರು; ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಬೆಂಗಳೂರು ಪೊಲೀಸರನ್ನು ಉದ್ದೇಶಿಸಿ ಮಾತನಾಡಿ, ಧನ್ಯವಾದ ಅರ್ಪಿಸಿದ್ದಾರೆ.

  ವೈರ್ ಲೆಸ್ ಮೂಲಕ ನಗರದ ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಭಾಸ್ಕರ್ ರಾವ್, ಸಿಎಎ ಮತ್ತು ಎನ್​ಆರ್​ಸಿ ಪ್ರತಿಭಟನೆ ವೇಳೆ ಸಾಕಷ್ಟು ಶ್ರಮ ವಹಿಸಿದ್ದೀರಿ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪ್ರಯತ್ನ ಪಟ್ಟಿದ್ದಿರಿ. ನಂತರ ಕೋವಿಡ್ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಕೊರೊನಾ ನಿಯಂತ್ರಣಕ್ಕೆ ಶ್ರಮ ಹಾಕಿದ್ದೀರಿ. ಸೋಂಕು ತಗುಲಿದ ವೇಳೆ ನೀವು ದಕ್ಷವಾಗಿ ಕೆಲಸ ಮಾಡಿದ್ದೀರಿ. ಅಸ್ಪತ್ರೆಯಲ್ಲಿ ಇರುವ ಸಿಬ್ಬಂದಿ ಅದಷ್ಟು ಬೇಗ ಗುಣಮುಖರಾಗಿ ಹೊರಗೆ ಬನ್ನಿ. ನಿಮ್ಮ ಮಕ್ಕಳು ಮತ್ತು ಕುಟುಂಬಕ್ಕೆ ಆದ್ಯತೆ ಕೊಡಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

  ಒಂದು ವರ್ಷ ಬೆಂಗಳೂರು ಕಮಿಷನರ್ ಆಗಿ ಕೆಲಸ ಮಾಡಿದ್ದು ತೃಪ್ತಿಕರವಾಗಿದೆ. ನಿಮ್ಮೆಲ್ಲರ ಸಹಕಾರ ಖುಷಿ ನೀಡಿದೆ. ಬೆಂಗಳೂರು ಪೊಲೀಸ್ ಇಲಾಖೆ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯುವಂತೆ ಮಾಡಿ ಎಂದು ಹೇಳಿದರು. ಇದೇ ವೇಳೆ ವೈರ್​​ಲೆಸ್​ನಲ್ಲಿ ನಿರ್ಗಮಿತ ಪೊಲೀಸ್ ಆಯುಕ್ತರಿಗೆ ಸಿಬ್ಬಂದಿ ಧನ್ಯವಾದ ಹೇಳಿದರು. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿದೆ. ನೀವು ಸಿಬ್ಬಂದಿ ಆರೋಗ್ಯದ ಬಗ್ಗೆ ಇಟ್ಟ ಕಾಳಜಿ ಮತ್ತು ಹಲವರ ಜೀವ ಉಳಿಸಿದ್ದೀರಿ ಎಂದು ಸಿಬ್ಬಂದಿ ಧನ್ಯವಾದ ಹೇಳಿದರು.

  ಇದನ್ನು ಓದಿ: Kamal Pant: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ; ನೂತನ ಕಮಿಷನರ್ ಆಗಿ ಕಮಲ್ ಪಂಥ್ ನೇಮಕ

  ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿದಿನ 2 ಸಾವಿರಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಎತ್ತಂಗಡಿ ಮಾಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ 1990ರ ಬ್ಯಾಚ್​ನ ಐಪಿಎಸ್ ಅಧಿಕಾರಿ ಹಾಗೂ ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಅವರನ್ನು ನೇಮಿಸಿದೆ.
  Published by:HR Ramesh
  First published: