• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • HD Revanna: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ರಾ ಭವಾನಿ ರೇವಣ್ಣ? ಸ್ಪಷ್ಟನೆ ನೀಡಿದ ಮಾಜಿ ಸಚಿವ

HD Revanna: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ರಾ ಭವಾನಿ ರೇವಣ್ಣ? ಸ್ಪಷ್ಟನೆ ನೀಡಿದ ಮಾಜಿ ಸಚಿವ

ಮಾಜಿ ಸಚಿವ ರೇವಣ್ಣ, ಭವಾನಿ ರೇವಣ್ಣ

ಮಾಜಿ ಸಚಿವ ರೇವಣ್ಣ, ಭವಾನಿ ರೇವಣ್ಣ

Bhavani Revanna: ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ ಈ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾವ್ಯಾರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಭವಾನಿ ರೇವಣ್ಣ ಅವರಿಗೆ ನೀಡುವಂತೆ ಕೇಳಿಲ್ಲ ಎಂದು ಹೇಳಿದರು.

  • Share this:

ಬೆಂಗಳೂರು: ಭವಾನಿ ರೇವಣ್ಣ (Bhavani Revanna) ಅವರು ಜೆಡಿಎಸ್ ರಾಜ್ಯಾಧ್ಯಕ್ಷ (JDS State President) ಸ್ಥಾನ ಕೇಳಿಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (Former Minister HD Revanna) ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಭವಾನಿ ರೇವಣ್ಣ ಒಲವು ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಅದರೆ ಕೊನೆ ಕ್ಷಣದಲ್ಲಿ ಸ್ವರೂಪ್ ಅವರಿಗೆ ಟಿಕೆಟ್ ನೀಡಲಾಯ್ತು. ಚುನಾವಣೆಯಲ್ಲಿ ಪ್ರೀತಂಗೌಡ (Preetham Gowda) ವಿರುದ್ಧ ಸ್ವರೂಪ್ ಗೆದ್ದು ಹಾಸನ ಕ್ಷೇತ್ರವನ್ನು (Hassan Assembly Constituency) ಮತ್ತೆ ದಳದ ತೆಕ್ಕೆಗೆ ತೆಗೆದುಕೊಂಡರು. ಚುನಾವಣೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಭವಾನಿ ರೇವಣ್ಣ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಕೂಗು ಕೇಳಿ ಬಂದಿತ್ತು.


ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ ಈ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾವ್ಯಾರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಭವಾನಿ ರೇವಣ್ಣ ಅವರಿಗೆ ನೀಡುವಂತೆ ಕೇಳಿಲ್ಲ ಎಂದು ಹೇಳಿದರು.


ಇದೆಲ್ಲಾ ಗಾಳಿ ಸುದ್ದಿ. ಹೆಚ್ ಡಿ ಕುಮಾರಸ್ವಾಮಿ ಅವರು ಶಾಸಕಾಂಗ ನಾಯಕರಾಗಿ ಮತ್ತು ಸಿಎಂ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಗಾಳಿಸುದ್ದಿಗೆ ಸ್ಪಷ್ಟನೆ ನೀಡಿದರು.


bhavani revanna asked for the post of jds state president the former minister hd revanna clarified mrq
ಭವಾನಿ ರೇವಣ್ಣ


ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದ ಶಾಸಕ


ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಮೈಸೂರು‌ ಜಿಲ್ಲೆಯ ಮೂವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ‌ ಕೊಡಬೇಕು ಎಂಬುದು ನನ್ನ ಆಗ್ರಹ. ಆದರೆ ನಮ್ಮ ಪಕ್ಷದ ಹಿರಿಯ ಶಾಸಕರಾಗಿರುವ ಮಹದೇವಪ್ಪ, ತನ್ವೀರ್ ಸೇಠ್, ವೆಂಕಟೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಹೇಳಿದ್ದಾರೆ.




ಇದನ್ನೂ ಓದಿ:  Cabinet Expansion: ಖರ್ಗೆ ಸೂತ್ರದಡಿಯಲ್ಲಿಯೇ ಸಂಪುಟ ರಚನೆ? ಈ ಎರಡು ಸಮುದಾಯಗಳಿಗೆ ಅಗ್ರಸ್ಥಾನ!


ನಾಯಕತ್ವ ಬದಲಾವಣೆ ವಿಚಾರ, ಅಧಿಕಾರ ಹಂಚಿಕೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಏನು ಮಾತುಕತೆ ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಮುಂದಿನ ಇಪ್ಪತ್ತು ವರ್ಷ ಕಾಲ ನಮ್ಮ ಪಕ್ಷದ ಸರ್ಕಾರವೇ ಇರುತ್ತದೆ. ಗ್ಯಾರಂಟಿ ಯೋಜನೆಗಳನ್ನು ಖಂಡಿತವಾಗಿಯೂ ಜಾರಿಗೊಳಿಸುತ್ತೇವೆ ಎಂದು ಹರೀಶ್ ಗೌಡ ಹೇಳಿದರು.

top videos
    First published: