HOME » NEWS » State » BHOOMI POOJA FOR AKHILA BHARATA SAHITYA SAMMELANA DECLARATION OF ONE MONTH SALARY ASSISTANCE FROM MLAS HK

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವೇದಿಕೆಗೆ ಭೂಮಿ ಪೂಜೆ - ಶಾಸಕರಿಂದ ಒಂದು ತಿಂಗಳ ವೇತನದ ನೆರವು ಘೋಷಣೆ

ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಒಂದು ತಿಂಗಳ ವೇತನವಾದ 1 ಲಕ್ಷ ರೂಪಾಯಿಗಳನ್ನು ಚೆಕ್ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಹಸ್ತಾಂತರಿಸಿದ್ದಾರೆ.

news18-kannada
Updated:January 17, 2020, 8:14 PM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವೇದಿಕೆಗೆ ಭೂಮಿ ಪೂಜೆ - ಶಾಸಕರಿಂದ ಒಂದು ತಿಂಗಳ ವೇತನದ ನೆರವು ಘೋಷಣೆ
ಜಿಲ್ಲಾಧಿಕಾರಿಗಳು ಒಂದು ತಿಂಗಳದ ವೇತನದ ಚೆಕ್​​​​ನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಹಸ್ತಾಂತರಿಸಿದರು.
  • Share this:
ಕಲಬುರ್ಗಿ (ಜ.17) : ಫೆಬ್ರವರಿ ತಿಂಗಳಲ್ಲಿ ಕಲಬುರ್ಗಿಯಲ್ಲಿ ನಡೆಯಲಿರುವ ಅಖಿಲ ಭಾರತ ಸಮ್ಮೇಳನದ ಮುಖ್ಯ ವೇದಿಕೆಗೆ ಭೂಮಿ ಪೂಜೆ ನೆವೇರಿಸಲಾಯಿತು. ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಭೂಮಿ ಪೂಜೆ ನೆರವೇರಿಸಿ, ಸಮ್ಮೇಳನ ಕಾರ್ಯಗಳಿಗೆ ಚಾಲನೆ ನೀಡಿದರು.

ಮೂವತ್ತು ಎಕರೆ ಪ್ರದೇಶದ ವ್ಯಾಪ್ತಿಯಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಕಲಬುರ್ಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಆಯೋಜಿಸಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭಗೊಂಡಿದೆ. ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನದ ಮುಖ್ಯ ವೇದಿಕೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬಿ.ಶರತ್, ಸಮ್ಮೇಳನ ಇನ್ನೂ ಐದು ದಿನ ಬಾಕಿ ಇರುವಾಗಲೇ ಮುಖ್ಯ ವೇದಿಕೆ ರೆಡಿ ಮಾಡಿಕೊಡಲಾಗುವುದು. ಸಮ್ಮೇಳನಕ್ಕೆ 14 ಕೋಟಿ ರೂಪಾಯಿ ಅಂದಾಜು ವೆಚ್ಚದ ಲೆಕ್ಕ ಹಾಕಲಾಗಿದ್ದು, ರಾಜ್ಯ ಸರ್ಕಾರವೂ ಸೂಕ್ತ ನೆರವು ನೀಡುತ್ತಿದೆ. ಜೊತೆಗೆ ರಾಜ್ಯ ಸರ್ಕಾರಿ ನೌಕರರು, ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸಮ್ಮೇಳನ ಸಿದ್ಧತೆ ಕೈಗೊಂಡಿರೋದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯದ 30 ಎಕರೆ ಪ್ರದೇಶದಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ವೇದಿಕೆಗೆ ಕವಿರಾಜ ಮಾರ್ಗ ಕರ್ತೃ ಶ್ರೀವಿಜಯನ ಹೆಸರಿಡಲಾಗಿದ್ದು, ರಾಷ್ಟ್ರಕೂಟರ ಕೋಟೆ ಮಾದರಿಯಲ್ಲಿಯೇ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ಮುಖ್ಯ ವೇದಿಕೆಯಲ್ಲಿ 30 ಸಾವಿರ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಎರಡು ಕಡೆ ಸಮಾನಾಂತರ ಗೋಷ್ಠಿಗೆ ವೇದಿಕೆ ಸಿದ್ಧಪಡಿಸುತ್ತಿರೋದಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯಿಂದ 1 ತಿಂಗಳ ವೇತನದ ನೆರವು

ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಒಂದು ತಿಂಗಳ ವೇತನವಾದ 1 ಲಕ್ಷ ರೂಪಾಯಿಗಳನ್ನು ಚೆಕ್ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಹಸ್ತಾಂತರಿಸಿದ್ದಾರೆ.  ಜಿಲ್ಲಾಧಿಕಾರಿಗಳ ಪ್ರೇರಣೆಯಿಂದ ಕೆಲ ಶಾಲೆಗಳ ಆಡಳಿತ ಮಂಡಳಿಗಳೂ ಸಾಹಿತ್ಯ ಸಮ್ಮೇಳನಕ್ಕೆ ನೆರವಿನ ಹಸ್ತ ಚಾಚಿವೆ.

ಶಾಸಕರಿಂದ ತಿಂಗಳ ವೇತನ ಘೋಷಣೆಕಲಬುರ್ಗಿ ಜಿಲ್ಲೆಯ ಜನಪ್ರತಿನಿಧಿಗಳೂ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆ ನೀಡಲು ಮುಂದಾಗಿದ್ದಾರೆ. ಜಿಲ್ಲೆಯ ಒಂಬತ್ತು ಶಾಸಕರು, ಐವರು ವಿಧಾನ ಪರಿಷತ್ ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನವನ್ನು ಸಾಹಿತ್ಯ ಸಮ್ಮೇಳನಕ್ಕೆ ನೀಡಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ : ನ್ಯಾಯಮೂರ್ತಿಗಳಿಗೆ ಕರ್ನಾಟಕ ಸರ್ಕಾರ ಲಂಚ ಕೊಟ್ಟು ವರದಿ ಮೇಲೆ ಪರಿಣಾಮ ಬೀರಿದೆ ; ಠಾಕೂರು ವಿವಾದಾತ್ಮಕ ಹೇಳಿಕೆ

ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮತ್ತಿತರರು ಭೂಮಿ ಪೂಜೆ ಕಾರ್ಯಕ್ರಮದಲ್ಲಿಯೇ ತಮ್ಮ ನಿರ್ಧಾರ ಪ್ರಕಟಿಸಿದರು. ಉಳಿದವರೂ ಅವರನ್ನೇ ಅನುಸರಿಸಿದ್ದು, ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ನೆರವು ಹರಿದು ಬರುಂವತಾಗಿದೆ.
Youtube Video
First published: January 17, 2020, 7:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories