HOME » NEWS » State » BIDAR SEDITION CASE STUDENTS WERE COUNSELLED BY POLICE NOT INTERROGATED STATE TELLS KARNATAKA HC MAK

ದೇಶದ್ರೋಹ ಪ್ರಕರಣದಲ್ಲಿ ಬೀದರ್​ ಶಾಲಾ ಮಕ್ಕಳನ್ನು ವಿಚಾರಣೆ ನಡೆಸಲಾಗಿಲ್ಲ; ಹೈಕೋರ್ಟ್​ಗೆ ಸ್ಪಷ್ಟೀಕರಣ ನೀಡಿದ ಸರ್ಕಾರ

ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರುದ್ಧ ಶಾಹಿನ್ ಶಾಲೆಯಲ್ಲಿ ನಾಟಕ ನಡೆಸಲಾಗಿತ್ತು ಎಂಬ ಆರೋಪದ ಮೇಲೆ ಕಳೆದ ತಿಂಗಳು ಶಾಲೆಯ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳ ಪೋಷಕರ ಮೇಲೆ ದೇಶದ್ರೋಹ ಪ್ರಕರಣ ದಾಖಲು ಮಾಡಿದ್ದ ಪೊಲೀಸರು ಅವರನ್ನು ಬಂಧನಕ್ಕೊಳಪಡಿಸಿದ್ದರು.

MAshok Kumar | news18-kannada
Updated:February 19, 2020, 10:17 PM IST
ದೇಶದ್ರೋಹ ಪ್ರಕರಣದಲ್ಲಿ ಬೀದರ್​ ಶಾಲಾ ಮಕ್ಕಳನ್ನು ವಿಚಾರಣೆ ನಡೆಸಲಾಗಿಲ್ಲ; ಹೈಕೋರ್ಟ್​ಗೆ ಸ್ಪಷ್ಟೀಕರಣ ನೀಡಿದ ಸರ್ಕಾರ
ಪೊಲೀಸರು ಶಾಹಿನ್ ಶಾಲಾ ಮಕ್ಕಳನ್ನು ವಿಚಾರಣೆ ನಡೆಸುತ್ತಿರುವ ಪೋಟೋ.
  • Share this:
ಬೆಂಗಳೂರು: ಬೀದರ್ ಶಾಹಿನ್ ಶಾಲೆಯ ಹದಿನೇಳು ವಿದ್ಯಾರ್ಥಿಗಳಿಗೆ ಪೊಲೀಸರು "ಸಲಹೆ" ನೀಡಿದ್ದಾರೆ ವಿನಃ ಬಾಲಾಪರಾಧಿ ನ್ಯಾಯ ಕಾಯ್ದೆಯ ನಿಬಂಧನೆಗಳ ಪ್ರಕಾರ ವಿಚಾರಣೆ ನಡೆಸಿಲ್ಲ, ಅಥವಾ ಪ್ರಶ್ನಿಸಲಾಗಿಲ್ಲ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್​ಗೆ ತಿಳಿಸಿದೆ.

ರಾಜ್ಯದ ವರದಿಯನ್ನು ಸಲ್ಲಿಸಿರುವ ಅಡ್ವೊಕೇಟ್ ಜನರಲ್ (ಎಜಿ) ಪ್ರಭುಲಿಂಗ್ ನವದ್ಗಿ ಅವರು ಅರ್ಜಿದಾರರು ಕೇವಲ ಪತ್ರಿಕೆ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ವಾದಿಸಿದರು. ಅಲ್ಲದೆ, ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಅಲ್ಲದೆ, ಸಿಎಎ ವಿರೋಧಿ ನಾಟಕದಲ್ಲಿ ಭಾಗವಹಿಸಿದ 7 ವಿದ್ಯಾರ್ಥಿಗಳು, ಅದನ್ನು ವೀಕ್ಷಿಸಿದ 10 ವಿದ್ಯಾರ್ಥಿಗಳು ಸೇರಿದಂತೆ 17 ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರುದ್ಧ ಶಾಹಿನ್ ಶಾಲೆಯಲ್ಲಿ ನಾಟಕ ನಡೆಸಲಾಗಿತ್ತು ಎಂಬ ಆರೋಪದ ಮೇಲೆ ಕಳೆದ ತಿಂಗಳು ಶಾಲೆಯ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳ ಪೋಷಕರ ಮೇಲೆ ದೇಶದ್ರೋಹ ಪ್ರಕರಣ ದಾಖಲು ಮಾಡಿದ್ದ ಪೊಲೀಸರು ಅವರನ್ನು ಬಂಧನಕ್ಕೊಳಪಡಿಸಿದ್ದರು. ಅಲ್ಲದೆ, ಶಾಲಾ ಮಕ್ಕಳನ್ನು ವಿಚಾರಣೆಗೊಳಪಡಿಸಿದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಈ ನಡೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಕುರಿತು ಇಂದು ಹೈಕೋರ್ಟ್​ಗೆ ಮಾಹಿತಿ ನೀಡಿರುವ ಸರ್ಕಾರ, “ಕೌನ್ಸೆಲಿಂಗ್ ಸಮಯದಲ್ಲಿ ಪೊಲೀಸರು ಸಿವಿಲ್ ಬಟ್ಟೆಯನ್ನು ಧರಿಸಿದ್ದರು. ಅರ್ಜಿದಾರರು ಆರೋಪಿಸಿರುವಂತೆ ಯಾವುದೇ ಶಸ್ತ್ರಾಸ್ತ್ರ ಅಥವಾ ಬಂದೂಕನ್ನು ತೆಗೆದುಕೊಂಡು ಹೋಗಿರಲಿಲ್ಲ. ಮಕ್ಕಳ ರಕ್ಷಣಾ ಅಧಿಕಾರಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಏಕರೂಪ ಸಲಹೆ ನೀಡಲಾಗಿತ್ತೆ ವಿನಃ ಯಾವುದೇ ವಿಚಾರಣೆ ನಡೆಸಿರಲಿಲ್ಲ. ಎಲ್ಲಿಯೂ ಬಾಲಾಪರಾಧಿ ನ್ಯಾಯ ಕಾಯ್ದೆ ಮತ್ತು ನಿಯಮವನ್ನು ಉಲ್ಲಂಘಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ, “ವಿದ್ಯಾರ್ಥಿಗಳಿಗೆ ಸಲಹೆ ನೀಡಲು ಪೊಲೀಸರಿಗೆ ತರಬೇತಿ ನೀಡಲಾಗಿದೆಯೇ? ಎಂದು ರಾಜ್ಯವನ್ನು ಪ್ರಶ್ನಿಸಿದರು. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್. 09ಕ್ಕೆ ಮುಂದೂಡಿದರು.

ಇದನ್ನೂ ಓದಿ : ರಾಮ ಮಂದಿರ ಟ್ರಸ್ಟ್​ಗೆ ಪದಾಧಿಕಾರಿಗಳ ಆಯ್ಕೆ, ಪ್ರಧಾನಿ ಮಾಜಿ ಮುಖ್ಯ ಕಾರ್ಯದರ್ಶಿ ಮೇಲ್ವಿಚಾರಣೆಯಲ್ಲಿ ದೇಗುಲ ನಿರ್ಮಾಣ
First published: February 19, 2020, 10:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories