Karnataka High court: ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ್ ಭಟ್​ಗೆ ಬಿಗ್ ರಿಲೀಫ್

ರಾಘವೇಶ್ವರ ಶ್ರೀ ಮತ್ತು ಕಲ್ಲಡ್ಕ ಪ್ರಭಾಕರ್ ಭಟ್

ರಾಘವೇಶ್ವರ ಶ್ರೀ ಮತ್ತು ಕಲ್ಲಡ್ಕ ಪ್ರಭಾಕರ್ ಭಟ್

ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಹೇಳಬೇಕು. ನೀವು ಸ್ವಾಮೀಜಿ ಪರ ನಿಲ್ಲಬೇಕು ಎಂದು ಸ್ವಾಮೀಜಿ ಕಡೆಯವರು ದೂರವಾಣಿ ಮೂಲಕ ಒತ್ತಡ ಹಾಕಿದ್ದ ಆರೋಪ ಕೇಳಿ ಬಂದಿತ್ತು.

  • News18 Kannada
  • 3-MIN READ
  • Last Updated :
  • Karnataka, India
  • Share this:

ಬೆಂಗಳೂರು: ರಾಘವೇಶ್ವರ ಶ್ರೀ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ (Karnataka High court) ಮಹತ್ವದ ಆದೇಶ ನೀಡಿದೆ. ಪುತ್ತೂರಿನ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ (Shyamprasad Case) ಪ್ರಕರಣದಲ್ಲಿ ರಾಘವೇಶ್ವರ ಶ್ರೀ (Raghaveshwar Sri) ಹಾಗೂ ಆರ್​​ಎಸ್​​​ಎಸ್ ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ (Kalldka Prabhakar Bhat) ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ ರಾಮಚಂದ್ರಾಪುರ ಮಠದ (Ramachandrapur Mutt) ಭಕ್ತ ಎನ್ನಲಾಗಿದ್ದ ಶ್ಯಾಮಪ್ರಸಾದ್ ಶಾಸ್ತ್ರಿ ಎಂಬವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.


2014ರಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಮಚಂದ್ರಾಪುರ ಮಠದವರ ಬೆದರಿಕೆಗಳೇ ಈ ಘಟನೆಗೆ ಕಾರಣ ಎಂದು ಮೃತರ ಪತ್ನಿ ದೂರಿದ್ದರು.


ಆತ್ಮಹತ್ಯೆಗೆ ಪ್ರಚೋದನೆ ಆರೋಪ


ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸ್ವಾಮೀಜಿ ಪರ ವಹಿಸುವಂತೆ ಒತ್ತಡ ಹಾಕಿದ್ದ ಕೇಸ್ ಸಂಬಂಧ ಆರೋಪಪಟ್ಟಿಯನ್ನ ಹೈಕೋರ್ಟ್ ರದ್ದುಪಡಿಸಿದೆ. ಸಂತ್ರಸ್ತೆಯ ಪತಿಯ ತಮ್ಮ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪವಿತ್ತು.


big relief to raghaveshwar sri and kalldaka prabhakar bhat gvtv mrq
ರಾಘವೇಶ್ವರ ಶ್ರೀ


ದೋಷಾರೋಪ ಪಟ್ಟಿ ರದ್ದು


ಈ ಸಂಬಂಧ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್‌ ರದ್ದುಪಡಿಸಿದೆ.


ಈ ಹಿಂದೆ ಪುತ್ತೂರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿ ಕ್ರಿಮಿನಲ್ ಅರ್ಜಿಗಳನ್ನ ಸಲ್ಲಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ರದ್ದುಗೊಳಿಸಿ ಆದೇಶಿಸಿದೆ.


big relief to raghaveshwar sri and kalldaka prabhakar bhat gvtv mrq
ಕಲ್ಲಡ್ಕ ಪ್ರಭಾಕರ್ ಭಟ್


ದೋಷಾರೋಪ ಪಟ್ಟಿಗೆ ಆಕ್ಷೇಪ


ಶ್ರೀಗಳ ಪರ ವಕೀಲ ಪಿ.ಎನ್‌.ಮನಮೋಹನ್‌ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದ ಮಂಡಿಸಿ, ಅರ್ಜಿದಾರರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಹತಾಶ ಮನೋಭಾವದಿಂದ ಆತ್ಮಹತ್ಯೆಗೆ ಶರಣಾದಂತಿದೆ. ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರುಗಳ ಉಲ್ಲೇಖವೇ ಇಲ್ಲ.


ಅಂತೆಯೇ, ತನಿಖಾಧಿಕಾರಿಗಳು ಶ್ಯಾಮ್‌ ಪ್ರಸಾದ್ ಶಾಸ್ತ್ರಿ ಮೃತಪಟ್ಟ ಒಂದು ತಿಂಗಳ ನಂತರ ಸುಳ್ಳು ಹೇಳಿಕೆ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದ್ರು.


ಏನಿದು ಪ್ರಕರಣ?


ಇನ್ನು ಪ್ರಕರಣದ ಹಿನ್ನೆಲೆ ನೋಡುವುದಾದರೆ, ರಾಮಕಥಾ ಗಾಯಕಿಯ ಪತಿ ದಿವಾಕರ ಶಾಸ್ತ್ರಿ ಅವರ ಖಾಸಾ ತಮ್ಮನಾದ ಶ್ಯಾಮ್‌ ಪ್ರಸಾದ್ ಶಾಸ್ತ್ರಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014, ಸೆಪ್ಟೆಂಬರ್ 1 ರಂದು ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದರು.


ಇದನ್ನೂ ಓದಿ:  Tumakuru: ಜೆಡಿಎಸ್ ತೊರೆದು ಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಿದವರಿಗೆ ಥಳಿತ! ಗಲಾಟೆಯಲ್ಲಿ ಕಾರ್ಯಕರ್ತರಿಗೆ ಗಾಯ




ಶ್ಯಾಮ್‌ ಪ್ರಸಾದ್ ಶಾಸ್ತ್ರಿ ಅವರ ಪತ್ನಿ ಸಂಧ್ಯಾಲಕ್ಷ್ಮಿ ದೂರು


ಆಗ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಹೇಳಬೇಕು. ನೀವು ಸ್ವಾಮೀಜಿ ಪರ ನಿಲ್ಲಬೇಕು ಎಂದು ಸ್ವಾಮೀಜಿ ಕಡೆಯವರು ದೂರವಾಣಿ ಮೂಲಕ ಒತ್ತಡ ಹಾಕಿದ್ದರು. ಈ ಒತ್ತಡ ಹೇರುವ ಹಿಂದೆ ಕಲ್ಲಡ್ಕ ಪ್ರಭಾಕರ ಭಟ್‌ ಮತ್ತಿತರರು ಇದ್ದರು ಎಂದು ಆರೋಪಿಸಿ ಶ್ಯಾಮ್‌ ಪ್ರಸಾದ್ ಶಾಸ್ತ್ರಿ ಅವರ ಪತ್ನಿ ಸಂಧ್ಯಾಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದರು.


ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪುತ್ತೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

top videos
    First published: