Ramesh Jarkiholi: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮಹತ್ವದ ತಿರುವು; ಸೆಕ್ಸ್​ ವಿಡಿಯೋದಲ್ಲಿರುವುದು ನಾನೇ ಎಂದ ಸಾಹುಕಾರ್!

Ramesh Jarkiholi Sex Scandal: ಅಶ್ಲೀಲ ವಿಡಿಯೋದಲ್ಲಿರುವುದು ನಾನಲ್ಲ, ಯಾರೋ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಪೊಲೀಸರ ಮುಂದೆ ವಾದಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ತನಿಖಾಧಿಕಾರಿಗಳ ಎದುರು ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಮೇಶ್​ ಜಾರಕಿಹೊಳಿ.

ರಮೇಶ್​ ಜಾರಕಿಹೊಳಿ.

  • Share this:
    ಬೆಂಗಳೂರು (ಮೇ 25): ಕರ್ನಾಟಕದ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗೆ ಸೆಕ್ಸ್​ ನಡೆಸುತ್ತಿದ್ದ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಆ ವಿಡಿಯೋದಲ್ಲಿರುವುದು ನಾನಲ್ಲ, ಯಾರೋ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಪೊಲೀಸರ ಮುಂದೆ ವಾದಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ತನಿಖಾಧಿಕಾರಿಗಳ ಎದುರು ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಉತ್ತರ ಕರ್ನಾಟಕದ ಯುವತಿಯೊಬ್ಬಳ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ರಮೇಶ್ ಜಾರಕಿಹೊಳಿಯವರ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಪೊಲೀಸರಿಗೆ ನೀಡಿದ್ದರು. ರಮೇಶ್ ಜಾರಕಿಹೊಳಿ ಆ ಯುವತಿಯನ್ನು ಹೆದರಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ವಿಷಯವನ್ನು ಯಾರಿಗೂ ಹೇಳದಂತೆ ಆಕೆಗೆ ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿತ್ತು. ಬಳಿಕ, ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸಲಾಗಿತ್ತು.

    ಆ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದ್ದು, ತನಿಖಾಧಿಕಾರಿಗಳ ಮುಂದೆ ರಮೇಶ್ ಜಾರಕಿಹೊಳಿ ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿರುವ ರಮೇಶ್ ಜಾರಕಿಹೊಳಿ, ನನಗೆ ಆ ಯುವತಿಯ ಪರಿಚಯವಿದೆ. ಆಕೆಯ ಒಪ್ಪಿಗೆಯ ಬಳಿಕವೇ ನಾವಿಬ್ಬರೂ ಲೈಂಗಿಕ ಕ್ರಿಯೆ ನಡೆಸಿದ್ದೆವು. ಇದು ಒಮ್ಮತದ ಲೈಂಗಿಕ ಕ್ರಿಯೆ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: Ramesh Jarkiholi: ಬಂಧನದ ಭೀತಿಯಿಂದ ರಮೇಶ್ ಜಾರಕಿಹೊಳಿ ಮುಂಬೈಗೆ ಶಿಫ್ಟ್​; ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ

    ಗ್ರಾಫಿಕ್ಸ್​ ಬಳಸಿ ವಿಡಿಯೋವನ್ನು ತಿರುಚಲಾಗಿದೆ. ಆ ವಿಡಿಯೋದಲ್ಲಿರುವುದು ನಾನಲ್ಲ. ನನಗೂ ಆ ಸಿಡಿಗೂ ಸಂಬಂಧವಿಲ್ಲ. ಆ ಯುವತಿ ಯಾರೆಂದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ, ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಇದರ ಹಿಂದೆ ಅನೇಕ ಪ್ರಭಾವಿಗಳ ಕೈವಾಡವಿದೆ. ತನಿಖೆಯ ನಂತರ ಅವರು ಯಾರೆಂದು ಗೊತ್ತಾಗಲಿದೆ ಎಂದು ರಮೇಶ್ ಜಾರಕಿಹೊಳಿ ಈ ಮೊದಲು ಎಸ್​ಐಟಿ ಅಧಿಕಾರಿಗಳ ಮುಂದೆ ಹೇಳಿದ್ದರು. ಆದರೆ, ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿರುವ ರಮೇಶ್ ಜಾರಕಿಹೊಳಿ, ಅದು ಒಪ್ಪಿತ ಲೈಂಗಿಕ ಕ್ರಿಯೆ. ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆ ಯುವತಿಯ ಅನುಮತಿ ಪಡೆದು ಲೈಂಗಿಕ ಕ್ರಿಯೆ ನಡೆಸಿದ್ದು, ಇದನ್ನು ಯಾರೋ ದುರುದ್ದೇಶದಿಂದ ವಿಡಿಯೋ ಮಾಡಿಕೊಂಡಿದ್ದಾರೆ. ಅದನ್ನು ನನ್ನ ರಾಜಕೀಯ ಜೀವನವನ್ನು ಮುಗಿಸಲು ಬಳಸಿದ್ದಾರೆ. ಆ ಯುವತಿ ಯಾವುದೋ ಒಂದು ಪ್ರಾಜೆಕ್ಟ್ ವಿಚಾರವಾಗಿ ನನ್ನನ್ನು ಭೇಟಿ ಮಾಡಲು ಬಂದಿದ್ದಳು ಎಂದು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಪ್ರಭಾವಿ ರಾಜಕಾರಣಿಯ ಕೈವಾಡ; ಬಾಲಚಂದ್ರ ಜಾರಕಿಹೊಳಿ ಆರೋಪ

    ಈ ಮೂಲಕ ಬೆಳಗಾವಿ ಸಾಹುಕಾರ್ ಅಶ್ಲೀಲ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾಧಿಕಾರಿ ಎಂ. ಸಿ. ಕವಿತಾ ಎದುರು ವಿಚಾರಣೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ರಮೇಶ್ ಜಾರಕಿಹೊಳಿ ಅವರನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ನನಗೆ ಗೊತ್ತಿಲ್ಲದಂತೆ ನನ್ನ ಖಾಸಗಿ ಕ್ಷಣಗಳ ವಿಡಿಯೋ ಮಾಡಿಕೊಂಡು ಬ್ಲಾಕ್​ಮೇಲ್ ಮಾಡಲಾಗುತ್ತಿದೆ. ಒಮ್ಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಇದರಲ್ಲಿ ನನ್ನ ತಪ್ಪೇನೂ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ.

    ಸಿಡಿಯಲ್ಲಿದ್ದ ಯುವತಿ ಕೂಡ ಆರಂಭದಲ್ಲಿ ಅದು ನಕಲಿ ಎಂದು ಹೇಳಿದ್ದರು. ಬಳಿಕ, ನಿಗೂಢ ಸ್ಥಳದಿಂದ ನ್ಯಾಯಾಧೀಶರ ಎದುರೇ ಪ್ರತ್ಯಕ್ಷವಾಗಿದ್ದ ಅವರು ಕೆಲಸದ ಆಮಿಷವೊಡ್ಡಿ ನನ್ನನ್ನು ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಈ ವಿಷಯ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದಾರೆ. ನಮ್ಮಿಬ್ಬರ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿಸಿ, ತಾವೇ ಹರಿಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿ ಕೂಡ ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
    Published by:Sushma Chakre
    First published: