Bird Flu: ಮಂಡ್ಯದಲ್ಲೂ ಹಕ್ಕಿಜ್ವರದ ಆತಂಕ; ರಂಗನತಿಟ್ಟು ಪಕ್ಷಿಧಾಮದಲ್ಲಿ ಕಟ್ಟೆಚ್ಚರ

Ranganathittu Bird Sanctuary: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಕೂಡ Bird Flu ಆತಂಕ ಎದುರಾಗಿದೆ. ಪಕ್ಷಿಧಾಮದ ಆವರಣವನ್ನು ಸ್ಯಾನಿಟೈಸ್ ಮಾಡಿಸಿದ್ದು, ಜೊತೆಗೆ ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ವೀಕ್ಷಣೆಗೆ ಅವಕಾಶ ಮಾಡಿ ಕೊಡಲಾಗಿದೆ.

ರಂಗನತಿಟ್ಟು

ರಂಗನತಿಟ್ಟು

  • Share this:
ಮಂಡ್ಯ (ಜ. 7): ಕರ್ನಾಟಕದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದೆ. ಈ ಹಿನ್ನಲೆಯಲ್ಲಿ  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ‌. ಪಕ್ಷಿಧಾಮದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಪಕ್ಷಿಧಾಮದಲ್ಲಿರುವ ಪಕ್ಷಿಗಳ ಮೇಲೆ ನಿಗಾ ಇರಿಸಲಾಗಿದೆ.

ಹೌದು! ಪಕ್ಕದ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಹಕ್ಕಿ ಜ್ವರದ ಆತಂಕ ಎದುರಾಗಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಕೂಡ ಹಕ್ಕಿ ಜ್ವರದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಧಾಮದಲ್ಲಿ ಈಗಾಗಲೇ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪಕ್ಷಿಧಾಮದ ಆವರಣವನ್ನು ಸ್ಯಾನಿಟೈಸ್ ಮಾಡಿಸಿದ್ದು, ಜೊತೆ ಗೆ ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ವೀಕ್ಷಣೆಗೆ ಅವಕಾಶ ಮಾಡಿ ಕೊಡಲಾಗಿದೆ. ಪಕ್ಷಿಧಾಮ ಪ್ರವೇಶಕ್ಕೂ ಮುನ್ನ ಪ್ರವಾಸಿಗರು ರಾಸಾಯನಿಕ ಮಿಶ್ರಿತ ನೀರಿನ ತೊಟ್ಟಿಯಲ್ಲಿ ಪಾದಗಳನ್ನು ಅದ್ದಿ ಒಳಗೆ ಪ್ರವೇಶ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ; 50 ವರ್ಷದ ಮಹಿಳೆಯ ಸಾಮೂಹಿಕ ಅತ್ಯಾಚಾರ-ಕೊಲೆ, 2 ಆರೋಪಿಗಳ ಬಂಧನ

ರಂಗನತಿಟ್ಟು ಪಕ್ಷಿಧಾಮದಲ್ಲಿ ಹಕ್ಕಿ ಜ್ವರದ ಆತಂಕ ಹಿನ್ನೆಲೆಯಲ್ಲಿ ವನ್ಯಜೀವಿ ಇಲಾಖೆಯ ಹಿರಿ ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಿಬ್ಬಂದಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ನಡುಗಡ್ಡೆಯಲ್ಲಿ ತೆರಳಿ ಪಕ್ಷಿಗಳ ಚಲನವಲನದ ವೀಕ್ಷಣೆ ನಡೆಸಿದ್ದು, ಹಕ್ಕಿಜ್ವರದ ಅನುಮಾನ ಮೂಡಿಸುವ ಯಾವುದೇ ಪ್ರಕರಣ ಕಂಡು ಬಂದಿಲ್ಲವೆಂಬುದನ್ನು ಖಚಿತ ಪಡಿಸಿಕೊಂಡಿದ್ದಾರೆ. ಹಾಗೇ, ಮುನ್ನೆಚ್ಚರಿಕಾ ಕ್ರಮವಾಗಿ ನಡುಗಡ್ಡೆಯಲ್ಲಿ ಕೆಲವು ಪಕ್ಷಿಗಳ ಹಿಕ್ಕೆ ಸಂಗ್ರಹಿಸಿ ಮೈಸೂರಿನ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಜೊತೆಗೆ ಪಕ್ಷಿಧಾಮದ ಅಧಿಕಾರಿಗಳು‌ ಸೇರಿದಂತೆ ಸಿಬ್ಬಂದಿಗಳಿಗೆ ಪಕ್ಷಿಗಳ ಚಲನವಲನದ ಮೇಲೆ ನಿಗಾ ಇಡಲು ಸೂಚಿಸಿದ್ದು, ವಿದೇಶದಿಂದ ಬರುವ ಪಕ್ಷಿಗಳ ಮೇಲೆ ಹೆಚ್ಚಿನ ನಿಗಾ ಇರಿಸಿ, ಎಚ್ಚರ ವಹಿಸಲು ‌ಸೂಚಿಸಿದ್ದಾರೆ.

Bird Flu Scare Increased in Mandya District Ranganathittu Bird Sanctuary
ರಂಗನತಿಟ್ಟು


ಮಂಡ್ಯ ಜಿಲೆಯ ಮತ್ತೊಂದು ಪ್ರಸಿದ್ದ ಪಕ್ಷಿಧಾಮವಾದ  ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಎರಡು ಪೆಲಿಕಾನ್ ಪಕ್ಷಿಗಳು ಮೃತಪಟ್ಟು, ಒಂದೆರಡು ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದವು. ಇದರಿಂದ ಗ್ರಾಮದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿತ್ತು. ಆದರೆ ಸ್ಥಳೀಯ ಪಶು ವೈದ್ಯರು ಹಕ್ಕಿಗಳ ಕಳೇಬರ  ಪರಿಶೀಲಿಸಿದ್ದು ಜಂತು ಹುಳಗಳಿಂದ ಇವು ಮೃತಪಟ್ಟಿವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳೇಬರ ಕಳುಹಿಸಿ ಅಲ್ಲಿಂದ ವರದಿ ತರಿಸಿಕೊಂಡಿದ್ದು, ಇದು ಹಕ್ಕಿ ಜ್ವರದಿಂದ ಸಾವನ್ನಪ್ಪಿಲ್ಲ, ಜಂತುಹುಳಗಳಿಂದ ರಕ್ತಸ್ರಾವವಾಗಿ ಸಾವಿಗೀಡಾಗಿವೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲವೆಂದು ತಿಳಿಸಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ ಹಕ್ಕಿಜ್ವರದ ಭೀತಿಯ ಆತಂಕದ ನಡುವೆ ಮಂಡ್ಯ ಜಿಲ್ಲೆಯ ಎರಡು ಪ್ರಸಿದ್ದ ಪಕ್ಷಿ ಧಾಮಗಳಾದ ರಂಗನತಿಟ್ಟು ಹಾಗೂ ಕೊಕ್ಕರೆ ಬೆಳ್ಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ‌ಕೈಗೊಂಡಿದ್ದು, ಹಕ್ಕಿ ಜ್ವರದ ನಿಯಂತ್ರಣಕ್ಕೆ  ಅಧಿಕಾರಿಗಳು ಮುಂದಾಗಿದ್ದಾರೆ.
Published by:Sushma Chakre
First published: