ಆರ್​ಆರ್​ನಗರ ಉಪಚುನಾವಣೆ: ಸಿದ್ದರಾಮಯ್ಯ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ

 ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ- ಸಿದ್ದರಾಮಯ್ಯ

ಪ್ರಚಾರದ ವೇಳೆ ಸಿದ್ದರಾಮಯ್ಯ

ಪ್ರಚಾರದ ವೇಳೆ ಸಿದ್ದರಾಮಯ್ಯ

  • Share this:
ಬೆಂಗಳೂರು (ಅ.27): ರಾಜಾರಾಜೇಶ್ವರಿ ನಗರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪರ ಇಂದು ಸಿದ್ದರಾಮಯ್ಯ ಪ್ರಚಾರ ನಡೆಸಿದರು. ಈ ವೇಳೆ ವಿಪಕ್ಷ ನಾಯಕರ ಭಾಷಣಕ್ಕೆ ಅಡ್ಡಿಮಾಡಲಾಗಿದೆ. ಯಶವಂತಪುರದ ಬಿಕೆ ನಗರದ ಬಳಿ ಕೆಲ ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿ, ಕಾಂಗ್ರೆಸ್​ ವಾಹನವನ್ನು ತಡೆದಿದ್ದಾರೆ. ಪ್ರಚಾರದಿಂದ ವಾಪಸ್​ ಹೋಗುವಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ವಾಪಸ್​ ಹೋಗಲು ಒಪ್ಪಿಲ್ಲ. ಅಲ್ಲದೇ ಘಟನೆ ಕುರಿತು ಪೊಲೀಸ್ ಕಮಿಷನರ್​​​ ಕರೆ ಮಾಡಿ ತಿಳಿಸಿದ್ದಾರೆ. ಪ್ರಚಾರಕ್ಕೆ ಅಡ್ಡಿಯಾದರೆ, ನಿಮ್ಮ ಮನೆಯ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ. ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಅನೇಕ‌ ನಾಯಕರು ಇಂದು ಪ್ರಚಾರಕ್ಕೆ ಬಂದಿದ್ದರು. ನಮ್ಮ ಪ್ರಚಾರಕ್ಕೆ ಮಾಜಿ ಕಾರ್ಪೋರೇಟರ್ ಜಿ ಕೆ ವೆಂಕಟೇಶ್ ಮತ್ತು ಬೆಂಬಲಿಗರು ಪ್ರಚಾರಕ್ಕೆ ಅಡ್ಡಿ ಪಡಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಲ್ಲ. ನಮ್ಮ‌ ಪ್ರಚಾರಕ್ಕೆ ಅಡ್ಡಿ ಪಡಿಸಿದವರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೇ ಜಿ ಕೆ ವೆಂಕಟೇಶ್ ಹಾಗೂ ಕಾರ್ಯಕರ್ತರು ಕಾಂಗ್ರೆಸ್​ ಸಭೆಯಲ್ಲಿ ಮೋದಿ ಮೋದಿ ಎಂದು ಘೋಷಣೆ ಕೂಗಿ ಸಭೆ ಹಾಳುಮಾಡುವ ಯತ್ನ ನಡೆಸಿದ್ದಾರೆ. ಅವರನ್ನು ಬಂಧಿಸುವಂತೆ ಆಗ್ರಹಿಸಿ  ಕಾಂಗ್ರೆಸ್​ ಕಾರ್ಯಕರ್ತರು ಯಶವಂತಪುರ ಪೊಲೀಸ್ ಠಾಣೆ ಬಳಿ ಕುಳಿತು ಪ್ರತಿಭಟನೆ ನಡೆಸಿದರು.

ಇದನ್ನು ಓದಿ: ಚಾಮುಂಡೇಶ್ವರಿ ಉತ್ಸವದಲ್ಲಿ ದೇವರ ಪಲ್ಲಕ್ಕಿ ಎಳೆದು ಗಮನಸೆಳೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಗಳು

ಆರ್.ಆರ್ ನಗರ ಕ್ಷೇತ್ರ ವಿವಿಧ ವಾರ್ಡ್​​ಗಳಲ್ಲಿ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿ ಪರ ರೋಡ್​ ಶೋ ನಡೆಸಿದರು. ಈ ವೇಳೆ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು. ಬಿಬಿಎಂಪಿಯಿಂದ ಬಡವರಿಗೆ ಯಶವಂತಪುರ ವಾರ್ಡ್​​ನಲ್ಲಿ ಮನೆ ನೀಡಲಾಗಿದೆ. ಆ ಮನೆ ಖಾಲಿ ಮಾಡಿಸುವ ಕೆಲಸ ಮಾಡಿದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಜೈಲಿಗೆ ಕಳಿಸುತ್ತೇನೆ. ಆ ಮನೆಯನ್ನು ಮುನಿರತ್ನ ಅವರ ದುಡ್ಡಲ್ಲ, ಅವರಪ್ಪನ ದುಡ್ಡಲ್ಲ ಕಟ್ಟಿಸಿಲ್ಲ ಕಾಂಗ್ರೆಸ್ ಪಕ್ಷ ಇರುವಾಗ ಕೊಟ್ಟಿರೋ ಮನೆಗಳು. ಯಾರು ಮನೆ ಖಾಲಿ ಮಾಡುವ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಸಿದ್ದರಾಮಯ್ಯ ಅಭಯ ನೀಡಿದರು.
Published by:Seema R
First published: