• Home
  • »
  • News
  • »
  • state
  • »
  • Priyank Kharge: ಕೈ ನಾಯಕರ ರಂಗ್-ಬಿರಂಗಿ ಕಥೆಗಳಿವೆ, ಸಿಡಿಗಳೂ ಇವೆ- ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿ

Priyank Kharge: ಕೈ ನಾಯಕರ ರಂಗ್-ಬಿರಂಗಿ ಕಥೆಗಳಿವೆ, ಸಿಡಿಗಳೂ ಇವೆ- ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿ

ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ

ಲಂಚ- ಮಂಚದ ಹೇಳಿಕೆ ಕೊಟ್ಟ ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕೂಡ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದೆ. ಕ್ಷಮೆ ಕೇಳಬೇಕೆಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

  • Share this:

ಲಂಚ- ಮಂಚದ ಹೇಳಿಕೆ ಕೊಟ್ಟ ಕೆಪಿಸಿಸಿ (KPCC) ವಕ್ತಾರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕೂಡ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದೆ. ಬಿಜೆಪಿ (BJP) ನೇತೃತ್ವದ ಸರ್ಕಾರದಲ್ಲಿ ಉದ್ಯೋಗ (Job) ಪಡೆಯಬೇಕು ಎಂದರೆ ಯುವತಿಯರು (Ladies)  ಮಂಚ (Bed) ಹತ್ತಬೇಕಾಗಿದೆ ಅಂತಾ ನಿನ್ನೆ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಇದಕ್ಕೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ಆಕ್ರೋಶ ಹೊರಹಾಕಿದೆ. ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಕೂಡ ವಾಗ್ದಾಳಿ ನಡೆಸಿದ್ದಾರೆ.


ಕೆಪಿಟಿಸಿಎಲ್ ಪರೀಕ್ಷೆಯಲ್ಲಿಯೂ ಭಾರೀ ಅಕ್ರಮ ನಡೆದಿದೆ ಅಂತಾ ಸುದ್ದಿಗೋಷ್ಠಿ ನಡೆಸಿ ಪ್ರಿಯಾಂಕ್ ಖರ್ಗೆ ನಿನ್ನೆ ಆರೋಪ ಮಾಡಿದ್ದರು. ಇದೇ ವೇಳೆ ಮಾತನಾಡುತ್ತಾ, ಇದು ಲಂಚ- ಮಂಚದ ಸರ್ಕಾರ. ಯುವಕರಿಗೆ ನೌಕರಿ ಬೇಕು ಅಂದ್ರೆ ಅವರು ಲಂಚ ಕೊಡಬೇಕು. ಅದೇ ರೀತಿ ಯುವತಿಯರಿಗೆ ನೌಕರಿ ಬೇಕು ಅಂದ್ರೆ ಅವರು ಮಂಚ ಹತ್ತಬೇಕು ಅಂತ ಗಂಭೀರ ಆರೋಪಿಸಿದ್ರು.


ರಂಗ್-ಬಿರಂಗಿ ಕಥೆಯಿದೆ, CDಯೂ ಇದೆ!


ಪ್ರಿಯಾಂಕ್ ಖರ್ಗೆ ಮಾತಿಗೆ ಆಕ್ರೋಶ ಹೊರಹಾಕಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ.


BJP, Bsy condemns Congress leader Priyank Kharge statement
ಪ್ರಿಯಾಂಕ್ ಖರ್ಗೆ


ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸಬೇಕು


ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.


ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ' 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.


ಇದನ್ನೂ ಓದಿ:  ಗೋವಾದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು! ಪಂಚಾಯತ್ ಚುನಾವಣೆಯಲ್ಲಿ ದಾಖಲೆಯ ಜಯಭೇರಿ


ಕ್ಷಮೆಗೆ ಯಡಿಯೂರಪ್ಪ ಒತ್ತಾಯ


ಮಹಿಳೆಯರರ ಬಗೆಗಿನ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಯಡಿಯೂರಪ್ಪ ಖಂಡಿಸಿದ್ದಾರೆ. ಈ ಹೇಳಿಕೆ ಅವರಿಗೆ ಶೋಭೆ, ಗೌರವ ತರುವುದಿಲ್ಲ. ಯಾರು ಕೂಡ ಅವರಿಂದ ಈ ತರಹದ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ತಕ್ಷಣವೇ ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳಿ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನನ್ನ ಗೆಳೆಯನಂತೆ ಮತ್ಯಾರೂ ಸಾಯ್ಬಾರ್ದು; ಒಳ್ಳೆ ರಸ್ತೆಗಾಗಿ ಮಂಗಳೂರಲ್ಲಿ ಯುವಕನ ಒಂಟಿ ಪ್ರತಿಭಟನೆ


ಅನುಭವದ ಮಾತು ಎಂದ ಆರ್.ಅಶೋಕ್!


ಪ್ರಿಯಾಂಕ್ ಖರ್ಗೆ ವಿರುದ್ದ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಅನುಭವದ ಮಾತು ಹೇಳಿದ್ದಾರೆ. ಜನಪ್ರತಿನಿಧಿಗಳು ಜನರಿಗೆ ಒಳ್ಳೆಯ ಮೆಸೇಜ್ ಕಳಿಸಬೇಕು. ಮಾತಾಡೋ ಮುನ್ನ ಹಿಡಿತ ಇಟ್ಟುಕೊಂಡು ಮಾತಾಡಬೇಕು ಅಂದ್ರು.


ಹೇಳಿಕೆ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ


ಲಂಚ-ಮಂಚದ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿಲ್ಲ. ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಹೇಳಿಕೆಯನ್ನು ತಿರುಚಿದೆ. ನನ್ನ ಹೇಳಿಕೆಯಿಂದ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ ಎಂದಿದ್ದಾರೆ.

Published by:Thara Kemmara
First published: