HOME » NEWS » State » BJP CANDIDATE KC RAMAMURTHY UNANIMOUSLY SELECTED AS RAJYA SABHA MEMBER RH

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆ

ಕೆ.ಸಿ. ರಾಮಮೂರ್ತಿ ಹೊರತುಪಡಿಸಿ ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಪ್ರತಿಸ್ಪರ್ಧಿಯಾಗಿ ಯಾವ ಅಭ್ಯರ್ಥಿಗಳು ಇಲ್ಲದ ಕಾರಣ ಅಂತಿಮವಾಗಿ ಕೆ ಸಿ ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

HR Ramesh | news18-kannada
Updated:December 5, 2019, 4:19 PM IST
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆ
ಕೆ.ಸಿ.ರಾಮಮೂರ್ತಿ
  • Share this:
ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್​ ಹಾಗೂ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 12ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ, ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಘೋಷಿಸಿದ್ದಾರೆ.

ಕೆ.ಸಿ. ರಾಮಮೂರ್ತಿ ಹೊರತುಪಡಿಸಿ ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಪ್ರತಿಸ್ಪರ್ಧಿಯಾಗಿ ಯಾವ ಅಭ್ಯರ್ಥಿಗಳು ಇಲ್ಲದ ಕಾರಣ ಅಂತಿಮವಾಗಿ ಕೆ ಸಿ ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ.ಸಿ. ರಾಮಮೂರ್ತಿ ಅವರಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ಕೆ.ಸಿ. ರಾಮಮೂರ್ತಿ ಅವರು, ಅವಿರೋಧ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು. ಬಿಜೆಪಿ ಪಕ್ಷದ ನಾಯಕರು, ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಬಿಜೆಪಿಗೆ ಬಂದೆ. ದೇಶಕ್ಕೆ ಇನ್ನಷ್ಟು ಉತ್ತಮ ಕೆಲಸ ಮಾಡುತ್ತೇವೆ. ನನಗೆ ಯಾವುದೇ ಬೇಸರ ಇಲ್ಲ. ಮೊದಲು ನಾನು ಬಿಜೆಪಿ ಸ್ನೇಹಿತರ ಜೊತೆ ಚೆನ್ನಾಗಿದ್ದೆ. ಈಗ ಅವರ ಜೊತೆಯಲ್ಲಿ ಕೆಲಸ ಮಾಡುತ್ತೇನೆ. ಪಕ್ಷ ಬಿಡುವಾಗ ಡಿ ಕೆ ಶಿವಕುಮಾರ್ ಅವರಿಗೆ ಹೇಳಬೇಕು ಅಂತೇನಿಲ್ಲ. ಅವರಿಗೆ ಗೊತ್ತಾಗಿರುತ್ತೆ ಎಂದು ಹೇಳಿದರು.

ಬೆಂಗಳೂರು ನಿವಾಸಿಯಾಗಿರುವ ಕೆ.ಸಿ.ರಾಮಮೂರ್ತಿ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಸಿಎಆರ್​ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಯುವಜನ ಸೇವೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು, ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಕೆ.ಸಿ.ರಾಮಮೂರ್ತಿ ಅವರನ್ನು ಕಾಂಗ್ರೆಸ್​ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ತೊರೆದಿದ್ದ ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
Youtube Video
First published: December 5, 2019, 3:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories