ಬೆಂಗಳೂರು; ಶಿರಾ ಕ್ಷೇತ್ರ ಮತ ಎಣಿಕೆ ನಡೆಯುತ್ತಿದೆ. 17 ಸುತ್ತಿನ ಎಣಿಕೆ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಅವರು 15 ಸಾವಿರ ಮತಗಳ ಅಂತರದಲ್ಲಿ ಗೆಲುವಿ ಸಾಧಿಸುತ್ತಾರೆ. ಅಲ್ಲಿ ನೆಕ್ ಟು ನೆಕ್ ಏನೂ ಇಲ್ಲ. ನೂರಕ್ಕೆ ನೂರು ರಾಜೇಶ್ ಗೌಡ ಗೆಲ್ಲುತ್ತಾರೆ. ಶಿರಾ ಗೆಲುವು ವಿಜೇಯಂದ್ರ ಗೆಲುವು ಹೌದೋ, ಅಲ್ಲವೋ ಅನ್ನೋದನ್ನು ಎಲ್ಲಾ ರೌಂಡ್ ಮುಗಿದ ಮೇಲೆ ಹೇಳುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನದಲ್ಲೂ ಬಿಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಆರ್ ಆರ್ ನಗರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಭಾರೀ ಬಹುಮತದಿಂದ ಗೆಲವು ಸಾಧಿಸಿದ್ದಾರೆ. ಯಡಿಯೂರಪ್ಪನವರ ಬದಲಾವಣೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನು ಓದಿ: ಬಿ ವೈ ವಿಜಯೇಂದ್ರ ಬಿಜೆಪಿ ಪಕ್ಷಕ್ಕೆ ಬಾಹುಬಲಿ ಇದ್ದಂತೆ: ಸಚಿವ ಬಿ. ಶ್ರೀರಾಮುಲು
ಆರ್ಆರ್ ನಗರ ಮತ್ತು ಶಿರಾ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರಂಭದಿಂದಲೂ ಭಾರೀ ಅಂತರದ ಮುನ್ನಡೆ ಕಾಯ್ದುಕೊಂಡು ಭರ್ಜರಿ ಗೆಲುವು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. 57672 ಮತಗಳ ಅಂತರದಲ್ಲಿ ಮುನಿರತ್ನ ಭರ್ಜರಿ ಗೆಲುವು ಪಡೆದಿದ್ದಾರೆ. ಇನ್ನು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತ್ತು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಗೆಲುವು ಹಾವು ಏಣಿ ಆಟದಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ