ಕಾವೇರಿದ ಉಪ ಚುನಾವಣಾ ಕಣ; ರಣತಂತ್ರ ಹೆಣೆಯಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ನಾಯಕ ಜೆ.ಪಿ. ನಡ್ಡಾ!
ಬಿಜೆಪಿ ಪಕ್ಷದ ಹಿರಿಯ ನಾಯಕ ಜೆ.ಪಿ. ನಡ್ಡಾ ಅವರನ್ನು ಆರು ತಿಂಗಳ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಸ್ತುತ ಉಪ ಚುನಾವಣೆ ಅವರ ಸಾಮರ್ಥ್ಯ ಪ್ರದರ್ಶನಕ್ಕೂ ಸಹ ಅಗ್ನಿ ಪರೀಕ್ಷೆಯಾಗಿದ್ದು, ಈ ಗೆಲುವನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿದುಬಂದಿದೆ.

ಜೆ.ಪಿ. ನಡ್ಡಾ.
- News18 Kannada
- Last Updated: September 22, 2019, 4:10 PM IST
ಬೆಂಗಳೂರು (ಸೆಪ್ಟೆಂಬರ್.22); ಅನರ್ಹ ಶಾಸಕರಿಂದ ತೆರವಾದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುತ್ತಿದ್ದಂತೆ, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಲ್ಲದೆ, ಚುನಾವಣಾ ರಣತಂತ್ರ ಹೆಣೆಯುವ ಸಲುವಾಗಿ ಕೇಂದ್ರ ಬಿಜೆಪಿ ನಾಯಕ ಜೆ.ಪಿ. ನಡ್ಡ ರಾಜ್ಯಕ್ಕೆ ಆಗಮಿಸಿದ್ದಾರೆ.
ರಾಜ್ಯದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖ ನಾಯಕರ ಜೊತೆ ಸಭೆ ನಡೆಸಿದ ಅವರು, "ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ನಂತರ ಇದು ಮೊದಲ ಉಪ ಚುನಾವಣೆಯಾಗಿದ್ದು, ಇದನ್ನು ಯಾರೂ ನಿರ್ಲಕ್ಷ್ಯ ಮಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು, ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ" ಎಂದು ತಿಳಿದುಬಂದಿದೆ.
ಬಿಜೆಪಿ ಪಕ್ಷದ ಹಿರಿಯ ನಾಯಕ ಜೆ.ಪಿ. ನಡ್ಡಾ ಅವರನ್ನು ಆರು ತಿಂಗಳ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಸ್ತುತ ಉಪ ಚುನಾವಣೆ ಅವರ ಸಾಮರ್ಥ್ಯ ಪ್ರದರ್ಶನಕ್ಕೂ ಸಹ ಅಗ್ನಿ ಪರೀಕ್ಷೆಯಾಗಿದ್ದು, ಈ ಗೆಲುವನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆಯಿಂದಲೇ ರಾಜ್ಯದ ಬಿಜೆಪಿ ಹಿರಿಯ ನಾಯಕರ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿರುವ ಅವರು ಗೆಲುವಿನ ರಣತಂತ್ರ ಹೆಣೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರು ಈ ಕುರಿತು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ.ಇದನ್ನೂ ಓದಿ : ಮಾಜಿ ಸಿಎಂ ಮಗ ರಾಕೇಶ್ ಸಿದ್ದರಾಮಯ್ಯ ಸಾವಿಗೆ ಭೈರತಿ ಸುರೇಶ್ ನೇರ ಕಾರಣ; ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ ಎಂಟಿಬಿ ನಾಗರಾಜ್!

Loading...