ಬೆಳಗಾವಿ(ಜೂ.08): ವಾಯವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರಗಳ ಮತದಾನಕ್ಕೆ ಒಂದು ವಾರ ಉಳಿದಿದ್ದು ಕಾಂಗ್ರೆಸ್ - ಬಿಜೆಪಿ (Congress-BJP) ಮಧ್ಯೆ ಟಾಕ್ ವಾರ್ ಶುರುವಾಗಿದೆ. ಉಭಯ ಪಕ್ಷಗಳ ನಾಯಕರು ಪ್ರಚಾರದ ಅಖಾಡಕ್ಕೆ ಧುಮುಕಿದ್ದು, ಆರೋಪ ಪ್ರತ್ಯಾರೋಪ ತರಕಕ್ಕೇರಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರ ಎಂಟ್ರಿಯಿಂದ ವಾಯವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರಗಳ ಚುನಾವಣಾ (Election) ರಂಗೇರಿದ್ದು ಕೈ-ಕಮಲ ನಾಯಕರ ಮಧ್ಯೆ ಆರೋಪ - ಪ್ರತ್ಯಾರೋಪಗಳು ಜೋರಾಗಿವೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಸುನೀಲ್ ಸಂಕ ಪರ ಪ್ರಚಾರದ (Campaign) ಅಖಾಡಕ್ಕೆ ಧುಮುಕಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಮರಾಠಾ ಮಂಡಳ ಕಾಲೇಜಿನಲ್ಲಿ (College) ಪ್ರಚಾರ ಸಭೆ ನಡೆಸಿ ಮತ ಬೇಟೆ ನಡೆಸುವುದರೊಂದಿಗೆ ಬಿಜೆಪಿ ವಿರುದ್ದ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.
ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕ್ತಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದು. ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಒಳ್ಳೆಯದಾ. ಜನರನ್ನು ಸಾಲದ ಸುಳಿಗೆ ಸಿಲುಕಿದಿದ್ದು ಒಳ್ಳೆಯದಾ ಎಂದು ಪ್ರಶ್ನಿಸಿದ್ದಾರೆ.
ಕಟೀಲ್ ಬಿಜೆಪಿ ಅಧ್ಯಕ್ಷರಾಗೋಕೆ ಲಾಯಕ್ ಇಲ್ಲ
ಕಟೀಲ್ ಬಿಜೆಪಿ ಅಧ್ಯಕ್ಷರಾಗೋಕೆ ಲಾಯಕ್ ಇಲ್ಲ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ.ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೆಕಿಲ್ಲ. ಕಟಿಲ್ ಪ್ರಭುದ್ಧ ರಾಜಕಾರಣಿ ಅಲ್ಲ ಎಂದ್ರು, ಇನ್ನೂ ಪಠ್ಯ ಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪುಗಳನ್ನ ಮಾಡಿದ್ದಾರೆ.
ಕುವೆಂಪು ಫೋಟೋ ತೆಗೆದು ಹಾಕಿದ್ರೆ ಅವಮಾನ ಅಲ್ಲವೇ..?
ಅಂಬೇಡ್ಕರ್ಸಂವಿಧಾನ ಶಿಲ್ಪಿ ಅನ್ನೋದನ್ನು ತೆಗೆದು ಹಾಕಿದ್ರೆ ಹೇಗೆ? ಕುವೆಂಪು ಫೋಟೋ ತೆಗೆದು ಹಾಕಿದ್ರೆ ಅವಮಾನ ಅಲ್ಲವೇ..? ನಾರಾಯಣಗುರು, ಬಸವಣ್ಣ, ಸುರಪುರ ನಾಯಕರನ್ನು ಅವಮಾನ ಮಾಡುವ ಮೂಲಕ ಪಠ್ಯವನ್ನು ಕೇಸರಿಕರಣ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ಇನ್ನೂ ಆಡಳಿತಾರೂಢ ಬಿಜೆಪಿ ಕೂಡ ಮತ ಬೇಟೆಗೆ ಇಳಿದಿದ್ದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ನಳೀನಕುಮಾರ್ ಕಟೀಲ್ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ.
ಇದನ್ನೂ ಓದಿ: Mandya: ಪ್ರತ್ಯೇಕ ಪ್ರಕರಣ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹ
ಇಂದು ಬಾಗಲಕೋಟೆ, ವಿಜಯಪುರದಲ್ಲಿ ಯಡಿಯೂರಪ್ಪ ಪ್ರಚಾರ ನಡೆಸಿದ್ರೆ ಬೆಳಗಾವಿ ಹಾಗೂ ಗೋಕಾಕನಲ್ಲಿ ಕಟೀಲ್ ಪ್ರಚಾರ ನಡೆಸಿದ್ರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿಎಸ್‌ವೈ ನಿಶ್ಚಿತವಾಗಿ ವಾಯವ್ಯದ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಇಬ್ಬರು ಅಭ್ಯರ್ಥಿಗಳು ಬಹಳ ದೊಡ್ಡ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದಿದ್ದಾರೆ.
ರಾಜ್ಯಸಭೆಯಲ್ಲಿ ಲೇಹರ್ ಸಿಂಗ್ ಸೇರಿ ಮೂರು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಇನ್ನೂಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದು ಡೆಸ್ಪರೇಟ್ ಆಗಿದ್ದಾರೆ. ಚುನಾವಣೆಯಲ್ಲಿ ಸೋಲು ನಿಶ್ಚಿತ ಆಗಿರೋದ್ರಿಂದ ಹಗುರವಾಗಿ ಮಾತನಾಡ್ತಿದ್ದಾರೆ.
ಇದನ್ನೂ ಓದಿ: Ramanagara: ಹಳಿತಪ್ಪಿದ ಆಡಳಿತ ವ್ಯವಸ್ಥೆ, ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!
ಆರ್‌ಎಸ್ಎಸ್ ಸೇರಿ ಹಲವು ವಿಷಯಗಳ ಬಗ್ಗೆ ಹಗುರವಾಗಿ ಮಾತನಾಡುವುದು ಅವರಿಗೆ ಚಟವಾಗಿದೆ, ಇದರಿಂದ ಅವರಿಗೇನು ಲಾಭ ಆಗಲ್ಲ ಎಂದ್ರು. ಇದೇ ವೇಳೆ ಮಾತನಾಡಿದಬಿಜೆಪಿ ರಾಜ್ಯಾಧ್ಯಕ್ಷ ನಳೀಲ್ ಕುಮಾರ್ ಕಟಿಲ್, ಆರ್ ಎಸ್ ಎಸ್ ರಾಷ್ಟ್ರ ಭಕ್ತರನ್ನು ನಿರ್ಮಾಣ ಮಾಡುವ ಕೆಲಸ ಮಾಡಿದೆ.ಸಂಘದ ಕಾರ್ಯಕರ್ತರು ಕೇವಲ ಬಿಜೆಪಿಯಲ್ಲಿ ಇಲ್ಲ.
ಕಾಂಗ್ರೆಸ್, ಜೆಡಿಎಸ್ ಪೈಪೋಟಿ
ಕಾಂಗ್ರೆಸ್ ನಲ್ಲಿ ಉಗ್ರಪ್ಪ, ಜೆಡಿಎಸ್ ನಲ್ಲಿ ಸಿಂದ್ಯಾಗೆ ಸಂಘದ ಹಿನ್ನೆಲೆ ಇದೆ. ಸಂಘವನ್ನು ರಾಜಕಾರಣಕ್ಕೆ ಎಳೆದು ತರೋದು ಸರಿಯಲ್ಲ. ಪಕ್ಷದಲ್ಲಿ ಹಿಡಿತ ಸಾಧಿಸಲು ಸಿದ್ದರಾಮಯ್ಯ ಈ ರೀತಿಯ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾತ ತುಷ್ಟಿಕರಣ ನೀತಿ ಮಾಡಲು ಕಾಂಗ್ರೆಸ್, ಜೆಡಿಎಸ್ ಪೈಪೋಟಿ ನಡೆಸುತ್ತಿದ್ದಾರೆ. ನೆಹರು, ಇಂದಿರಾ ಗಾಂಧಿ ಸಂಘ ನಾಶ ಮಾಡಲು ಪ್ರಯತ್ನ ಮಾಡಿದ್ರು, ಈಗ ಸಿದ್ದರಾಮಯ್ಯ ಕೂಡ ಕೈ ಸುಟ್ಟುಕೊಳ್ಳಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ