ಕಾಂಗ್ರೆಸ್​​​ಗೆ​​ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು

ಬೆಂಗಳೂರಿನಲ್ಲಿ ಸೇರ್ಪಡೆಯಾದ ಶ್ರೀಶೈಲಪ್ಪ ಬಿದರೂರು ಅವರನ್ನು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು

G Hareeshkumar | news18
Updated:April 9, 2019, 1:40 PM IST
ಕಾಂಗ್ರೆಸ್​​​ಗೆ​​ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು
ಕಾಂಗ್ರೆಸ್​​ ಗೆ ಸೇರ್ಪಡೆಗೊಂಡ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು
G Hareeshkumar | news18
Updated: April 9, 2019, 1:40 PM IST
ಬೆಂಗಳೂರು ( ಏ.09): ಲೋಕಸಭಾ ಚುನಾವಣೆಯ ಮತದಾನದ ದಿನಾಂಕ ಇನ್ನೇನು ಹತ್ತಿರವಾಗ್ತಿದ್ದಂತೆ, ಗದಗ ಜಿಲ್ಲಾ ಬಿಜೆಪಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ಗದಗನ  ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ಜನತಾ ಪರಿವಾರದಲ್ಲಿದ್ದ ಬಿದರೂರ ನಂತರ ಬಿಜೆಪಿ ಸೇರಿದ್ದರು. ಇದೀಗ ಹಳೆಯ ಗೆಳೆಯರಾದ ಶ್ರೀಶೈಲಪ್ಪ ಬಿದರೂರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಒಂದಾಗಿದ್ದಾರೆ. ಬೆಂಗಳೂರಿನಲ್ಲಿ ಸೇರ್ಪಡೆಯಾದ ಶ್ರೀಶೈಲಪ್ಪ ಬಿದರೂರು ಅವರನ್ನು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ನೀಡಿಲ್ಲ ಅಂತ ಮುನಿಸಿಕೊಂಡಿದ್ದ ಬಿದರೂರು, ಆಗ ಪ್ರಚಾರದಿಂದ ದೂರ ಉಳಿದಿದ್ದರು. ಈಗಲೂ ಸಹ ಪ್ರಚಾರ ಆರಂಭವಾಗಿದ್ದರೂ ಸಹ ಬಿಜೆಪಿಯ ಯಾವುದೇ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡಿರಲಿಲ್ಲ.

 ಇದನ್ನೂ ಓದಿ : ಕಮಲ ಬಿಟ್ಟು ಕೈ ಪಕ್ಷಕ್ಕೆ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು..?

ಮೂರು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗದಗ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದರು. ಕೈ ಸೇರ್ಪಡೆ ಹಿನ್ನೆಲೆ ಗದಗ ರೋಣ ಎರಡು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ ಎನ್ನಲಾಗಿದೆ.

ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಹಿಡಿತ ಹೊಂದಿರುವ ಬಿದರೂರು, ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಬೃಹತ್ ಸಮಾವೇಶಗಳನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
Loading...

First published:April 9, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626