• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • By Elections 2021 | ದಿ. ಸುರೇಶ್ ಅಂಗಡಿ ಪತ್ನಿಗೆ ಬೆಳಗಾವಿ ಟಿಕೆಟ್ ನೀಡಿದ ಬಿಜೆಪಿ, 2 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟ

By Elections 2021 | ದಿ. ಸುರೇಶ್ ಅಂಗಡಿ ಪತ್ನಿಗೆ ಬೆಳಗಾವಿ ಟಿಕೆಟ್ ನೀಡಿದ ಬಿಜೆಪಿ, 2 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದಕ್ಕೂ ಮುನ್ನಾ ನ್ಯೂಸ್ 18 ಕನ್ನಡ ಜತೆಗೆ ಮಾತನಾಡಿದ್ದ ಸುರೇಶ್ ಅಂಗಡಿ ಅವರ ಮಗಳು ಶ್ರದ್ಧಾ ಶೆಟ್ಟರ ಅವರು, ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಲು ರಾಜ್ಯ ಕೋರ್ ಕಮಿಟಿಯಿಂದ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ನಮ್ಮ ಕುಟುಂಬದ ಜತೆಗೆ ಅನೇಕ ಕಾರ್ಯಕರ್ತರ ಹೆಸರಿನ ಪಟ್ಟಿ ಕಳುಹಿಸಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ ಎಂದು ಹೇಳಿದ್ದರು.

ಮುಂದೆ ಓದಿ ...
  • Share this:

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ಮುಂದಿನ ತಿಂಗಳು 17ರಂದು ಉಪಚುನಾವಣೆ ನಡೆಯಲಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದೀಗ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಇದೀಗ ಆ ಕ್ಷೇತ್ರದ ಟಿಕೆಟ್ ಅನ್ನು ದಿವಂಗತ ಸುರೇಶ್ ಅಂಗಡಿ ಅವರ ಪತ್ನಿಗೆ ನೀಡಲಾಗಿದೆ. ಅನುಕಂಪದ ಮತಗಳ ಸೆಳೆಯಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡುವ ನಿಟ್ಟಿನಲ್ಲಿ  ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.


 ಉಳಿದಂತೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಶರಣು ಸಲಗಾರ್ ಹಾಗೂ ಮಸ್ಕಿ ಕ್ಷೇತ್ರದ ಟಿಕೆಟ್ ಅನ್ನು ಪ್ರತಾಪ ಗೌಡ ಪಾಟೀಲ್ ಅವರಿಗೆ ನೀಡಲಾಗಿದೆ. ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಇಂದು ಸಂಜೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಧಿಕೃತವಾಗಿ ಘೋಷಣೆ ಮಾಡಿದೆ.


ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದೆ. ಈ ಭಾಗದ ಪ್ರಬಲ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಇದೀಗ ಅವರಿಗೆ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರು ಸ್ಪರ್ಧೆ ಒಡ್ಡಲಿದ್ದಾರೆ.


ಇದನ್ನು ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ; ಅನುಕಂಪದ ಹಿನ್ನೆಲೆಯಲ್ಲಿ ಅಂಗಡಿ ಕುಟುಂಬಸ್ಥರಿಗೆ ಟಿಕೆಟ್?


ಇದಕ್ಕೂ ಮುನ್ನಾ ನ್ಯೂಸ್ 18 ಕನ್ನಡ ಜತೆಗೆ ಮಾತನಾಡಿದ್ದ ಸುರೇಶ್ ಅಂಗಡಿ ಅವರ ಮಗಳು ಶ್ರದ್ಧಾ ಶೆಟ್ಟರ ಅವರು, ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಲು ರಾಜ್ಯ ಕೋರ್ ಕಮಿಟಿಯಿಂದ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ನಮ್ಮ ಕುಟುಂಬದ ಜತೆಗೆ ಅನೇಕ ಕಾರ್ಯಕರ್ತರ ಹೆಸರಿನ ಪಟ್ಟಿ ಕಳುಹಿಸಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ. ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ತಂದೆ ಅನೇಕ ಕನಸ್ಸು ಕಂಡಿದ್ದರು. ಆ ಎಲ್ಲಾ ಯೋಜನೆಗಳು ಅರ್ಧಕ್ಕೆ ನಿಂತಿವೆ. ಎಲ್ಲಾ ಯೋಜನೆ ಪೂರ್ಣ ಮಾಡಬೇಕು ಎನ್ನುವುದು ನಮ್ಮ ಬಯಕೆ. ನಮ್ಮ ಕುಟುಂಬದಲ್ಲಿ ಟಿಕೆಟ್ ಸಿಕ್ಕರೆ ಯಾರು ಸ್ಪರ್ಧೆ ಮಾಡಬೇಕು ಎನ್ನುವುದು ಇನ್ನೂ ತೀರ್ಮಾನ ಆಗಿಲ್ಲ. ಯಾರಿಗೆ ಅವಕಾಶ ಕೊಟ್ಟರು ಸ್ಪರ್ಧೆ ಮಾಡಲು ಸಿದ್ಧರಿದ್ದೇವೆ. ದಿ. ಸುರೇಶ ಅಂಗಡಿ ರೈಲ್ವೆ ಸಚಿವರಾದ ಬಳಿಕ ರಾಜ್ಯಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಪ್ರಮುಖವಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಎಕ್ಸಪ್ರಸ್ ರೈಲು.  ಬೆಳಗಾವಿ- ಧಾರವಾಡಕ್ಕೆ ರೈಲ್ವೆ ಯೋಜನೆ ಮಂಜೂರು ಮಾಡಿಸಿದ್ದಾರೆ. ಈ ಎಲ್ಲಾ ಕೆಲಸಗಳು ಮುಂದಿನ ಚುನಾವಣೆಯಲ್ಲಿ ನಮಗೆ ಸಹಕಾರಿ ಆಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರಕ್ಕೂ ಕೂಡ ಉಪಚುನಾವಣೆ ನಡೆಯಲಿದ್ದು, ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಕೆ.ರತ್ನಪ್ರಭಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

First published: