• Home
 • »
 • News
 • »
 • state
 • »
 • HD Kumaraswamy: ನಾಯಕತ್ವವೇ ಇಲ್ಲದ ಬಿಜೆಪಿ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು; ಕುಮಾರಸ್ವಾಮಿ ಕಿಡಿ

HD Kumaraswamy: ನಾಯಕತ್ವವೇ ಇಲ್ಲದ ಬಿಜೆಪಿ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು; ಕುಮಾರಸ್ವಾಮಿ ಕಿಡಿ

ಎಚ್​.ಡಿ ಕುಮಾರಸ್ವಾಮಿ.

ಎಚ್​.ಡಿ ಕುಮಾರಸ್ವಾಮಿ.

ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

 • Share this:

  ಬೆಂಗಳೂರು (ಜೂನ್ 17); ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ತಲೆದಂಡಕ್ಕೆ ಹಲವು ನಾಯಕರು ಶಾಸಕರು ಹಾಗೂ ಸಚಿವರುಗಳೇ ಒತ್ತಾಯಿಸುತ್ತಿದ್ದಾರೆ. ಹಲವು ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿದ ಪ್ರಸಂಗವೂ ನಡೆದದ್ದಾಗಿತ್ತು. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಪಕ್ಷದ ರಾಜ್ಯ ನಾಯಕತ್ವದ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, "ನಾಯಕತ್ವವೇ ಇಲ್ಲದ ಬಿಜೆಪಿ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು" ಎಂದು ಕಿಡಿಕಾರಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ..." ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು.


  ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ" ಎಂದು ಅಭಿಪ್ರಾಯಪಟ್ಟಿದ್ದಾರೆ.  ಬಿಜೆಪಿ ಸರ್ಕಾರದ ವಿರುದ್ಧ ಜನರ ಅಭಿಪ್ರಾಯವನ್ನು ಉಲ್ಲೇಖಿಸಿ ಕಿಡಿಕಾರಿರುವ ಕುಮಾರಸ್ವಾಮಿ, "ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು.


  ಇದನ್ನೂ ಓದಿ: Karnataka Politics: ವಿಶ್ವನಾಥ್​​ ವಿರುದ್ಧ ತಿರುಗಿಬಿದ್ದ ಸಿಎಂ ಆಪ್ತಬಣ; ಉಂಡ ಮನೆಗೆ ಎರಡು ಬಗೆಯೋ ಬುದ್ಧಿ ಎಂದು ಆಕ್ರೋಶ


  ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು.


  ಇದನ್ನೂ ಓದಿ; Karnataka Political Crisis: ಸಿಎಂ ಬದಲಾವಣೆಗೆ ಅರುಣ್​ ಸಿಂಗ್​ ಮುಂದೆ ಬೇಡಿಕೆ ಇಟ್ಟ ಹೆಚ್.ವಿಶ್ವನಾಥ್


  ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:MAshok Kumar
  First published: