CM BSY: ಬಿಎಸ್​ವೈ ನಾಯಕತ್ವ ಬದಲಾವಣೆ ಇಲ್ಲ; ಸಂಪುಟದ ಶೇ.50 ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ!

ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ದೂರು ನೀಡಲಿರುವ ಬಿ.ವೈ. ವಿಜಯೇಂದ್ರ ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಅನುಮತಿ ನೀಡಲು ಕೋರುವ ಸಾಧ್ಯತೆಯಿದೆ. ಈ ಮೂಲಕ ಸಚಿವ ಯೋಗೇಶ್ವರ್ ಹಾಗೂ ಸಿಎಂ ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

ಸಿಎಂ ಬಿಎಸ್​ ಯಡಿಯೂರಪ್ಪ-ಪ್ರಧಾನಿ ಮೋದಿ

ಸಿಎಂ ಬಿಎಸ್​ ಯಡಿಯೂರಪ್ಪ-ಪ್ರಧಾನಿ ಮೋದಿ

 • Share this:
  ನವದೆಹಲಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಬಿಎಸ್‌ವೈ ನಾಯಕತ್ವ ಬದಲಾವಣೆ ಸಂಬಂಧ  ಹೈಕಮಾಂಡ್ ನಲ್ಲಿ ಮಹತ್ವದ ಚರ್ಚೆ ನಡೆದಿದೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾಡದಿರಲು ಹೈಕಮಾಂಡ್ ಚಿಂತನೆ ನಡೆಸಿದ್ದು, ಬಿಎಸ್‌ವೈ ಮುಂದುವರಿಸಲು, ಶೇ. 50 ರಷ್ಟು ಸಂಪುಟ ಪುನಾರಚನೆಗೆ ಹೈಕಮಾಂಡ್ ಪ್ಲ್ಯಾನ್ ಮಾಡಿದೆ. 

  ಕೊರೋನಾ ಸಂಕಷ್ಟ ಮುಗಿದ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಆಗಲಿದೆ. ಹಿರಿಯ ಸಚಿವರು, ನಿಷ್ಕ್ರಿಯ ಸಚಿವರನ್ನು ಕೈಬಿಡಲು ಹೈಕಮಾಂಡ್ ಚಿಂತನೆ ನಡೆಸಿದೆ. ಈ ಮೂಲಕ ಹಲವು ಸಚಿವರಿಗೆ ಬಿಜೆಪಿ ಕೊಕ್ ನೀಡಲಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಿ ಸಂಪುಟ ಬದಲಿಸಲು ಚಿಂತನೆ ನಡೆಸಲಾಗಿದೆ. 2023ರ ಚುನಾವಣೆ ಹಿನ್ನಲೆಯಲ್ಲಿ ಸಂಪುಟಕ್ಕೆ ಸರ್ಜರಿ ನಡೆಸಲು ಯೋಜನೆ ರೂಪಿಸಲಾಗಿದೆ. 'ವಲಸಿಗರ' ಪೈಕಿ ಕೆಲವರಿಗೆ ಕೊಕ್ ನೀಡಲಾಗುವುದು ಎನ್ನಲಾಗಿದೆ. ಸಂಪುಟದ ಶೇಕಡಾ 50ಕ್ಕೂ ಹೆಚ್ಚು ಪ್ರಮಾಣದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.

  ನಿಷ್ಕ್ರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ನಿಷ್ಠರು ಹಾಗೂ ಹೊಸಬರಿಗೆ ಅವಕಾಶ ನೀಡಲು ಸಂಪುಟಕ್ಕೆ ಸರ್ಜರಿ ಮಾಡಲು ತೀರ್ಮಾನಿಸಲಾಗಿದೆ. ಕೊರೋನಾ ಬಳಿಕ ಹೈಕಮಾಂಡ್ ನಾಯಕರು ರಾಜ್ಯ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ. ಸಂಪುಟ ಪುನಾರಚನೆಗೂ ಮುನ್ನ ಸಚಿವರ ಕಾರ್ಯಕ್ಷಮತೆಯ ಪರಿಶೀಲನೆ ನಡೆಯಲಿದೆ. ಈ ವೇಳೆ ಯಾರೆಲ್ಲಾ ಹೇಗೆ ಕೆಲಸ ಮಾಡಿದ್ದಾರೆ ಎಂಬುದರ ಮೇಲೆ ಅವರ ಸಚಿವ ಸ್ಥಾನದ ಅಳಿವು- ಉಳಿವು ಇದೆ.

  ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು ಬಹಿರಂಗವಾಗಿಯೇ ರಾಜ್ಯ ಸರ್ಕಾರದ ಸಮರ ಸಾರಿರುವ ಸಚಿವ ಸಿ.ಪಿ. ಯೋಗೇಶ್ವರ್ ಬಣಕ್ಕೆ ಬಿಸಿ ಮುಟ್ಟಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ತಂದೆಯ ಪರವಾಗಿ ದೆಹಲಿಗೆ ತೆರಳಿರುವ ಬಿ.ವೈ. ವಿಜಯೇಂದ್ರ ನಿನ್ನೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ದೂರು ನೀಡಲಿರುವ ಬಿ.ವೈ. ವಿಜಯೇಂದ್ರ ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಅನುಮತಿ ನೀಡಲು ಕೋರುವ ಸಾಧ್ಯತೆಯಿದೆ. ಈ ಮೂಲಕ ಸಚಿವ ಯೋಗೇಶ್ವರ್ ಹಾಗೂ ಸಿಎಂ ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

  ಇದನ್ನು ಓದಿ: Pfizer: ಫೈಜರ್ ಲಸಿಕೆ ಅನುಮೋದನೆ; ಭಾರತ ಸರ್ಕಾರದೊಂದಿಗೆ ಸಂಸ್ಥೆ ಮಾತುಕತೆ

  ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿರುವ ಬಿ. ವೈ. ವಿಜಯೇಂದ್ರ ಸಿ.ಪಿ. ಯೋಗೇಶ್ವರ್ ವಿರುದ್ಧ ದೂರು ನೀಡಲಿದ್ದಾರೆ ಎನ್ನಲಾಗಿದೆ. ಜೆ.ಪಿ. ನಡ್ಡಾ ಭೇಟಿಗಾಗಿ ಪ್ರಯತ್ನಿಸುತ್ತಿರುವ ಬಿ.ವೈ. ವಿಜಯೇಂದ್ರ ಅದಕ್ಕಾಗಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಇಂದು ವಿಜಯೇಂದ್ರಗೆ ನಡ್ಡಾ ಭೇಟಿಗೆ ಸಮಯಾವಕಾಶ ಸಿಗುವ ಸಾಧ್ಯತೆಯಿದೆ. ಭೇಟಿ ವೇಳೆ ಯೋಗೇಶ್ವರ್ ವಿರುದ್ಧ ದೂರು ನೀಡಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಜೆಡಿಎಸ್, ಕಾಂಗ್ರೆಸ್ ಜೊತೆ ಬಿಜೆಪಿ ಒಪ್ಪಂದ ಮಾಡಿಕೊಂಡಿದೆ. ರಾಜ್ಯದಲ್ಲಿರುವುದು 3 ಪಕ್ಷಗಳ ಸರ್ಕಾರ ಎಂದಿದ್ದ ಯೋಗೇಶ್ವರ್ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ದೂರು ನೀಡುವ ಸಾಧ್ಯತೆಯಿದೆ.

  ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕೂಗು ಇನ್ನೂ ಕಡಿಮೆಯಾಗಿಲ್ಲ. ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕೆಂದು ಬಿಜೆಪಿಯ ಕೆಲವು ಶಾಸಕರು ಸಹಿ ಕೂಡ ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೂ ಪ್ರಯಾಣ ಬೆಳೆಸಿದ್ದ ಸಚಿವ ಸಿ.ಪಿ. ಯೋಗೇಶ್ವರ್ ನೇತೃತ್ವದ ತಂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್ ಬಂದಿತ್ತು. ಇದೀಗ ತಮ್ಮ ವಿರೋಧ ಬಣಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ದಿಢೀರನೆ ತಮ್ಮ ಮಗ ಬಿ.ವೈ. ವಿಜಯೇಂದ್ರ ಅವರನ್ನು ದೆಹಲಿಗೆ ಕಳುಹಿಸಿದ್ದಾರೆ.
  Published by:HR Ramesh
  First published: