ರಾಜ್ಯಸಭೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ; ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅಭ್ಯರ್ಥಿಗಳು!

ರಾಯಚೂರಿನವರಾದ ಅಶೋಕ್ ಗಸ್ತಿ  ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.

ಅಶೋಕ್ ಗಸ್ತಿ, ಈರಣ್ಣ ಕಡಾಡಿ

ಅಶೋಕ್ ಗಸ್ತಿ, ಈರಣ್ಣ ಕಡಾಡಿ

 • Share this:
  ಬೆಂಗಳೂರು: ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ವಿಶೇಷ ಅಂದರೆ ಬಿಜೆಪಿ ಹೈಕಮಾಂಡ್ ಆಯ್ಕೆ ಕಂಡು ರಾಜ್ಯ ನಾಯಕರು ಅಚ್ಚರಿಗೊಂಡಿದ್ದಾರೆ.

  ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಅಶೋಕ್ ಗಸ್ತಿ ಹಾಗೂ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಇವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಇದರೊಂದಿಗೆ ರಾಜ್ಯ ಬಿಜೆಪಿ ಕಳಿಸಿದ ಲಿಸ್ಟ್ ಗೆ ಹೈಕಮಾಂಡ್ ತಿರಸ್ಕರಿಸಿ, ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿದೆ.

  ರಾಯಚೂರಿನವರಾದ ಅಶೋಕ್ ಗಸ್ತಿ  ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.

  ಇದನ್ನು ಓದಿ: ರಾಜ್ಯಸಭಾ ಚುನಾವಣೆಗೆ ದೇವೇಗೌಡರಿಂದ ನಾಳೆ ನಾಮಪತ್ರ: ಹೆಚ್​ಡಿಕೆ ಟ್ವೀಟ್

  ಈರಣ್ಣ ಕಡಾಡಿ 

  ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ1966ರಂದು ಜನಿಸಿದ ಕಡಾಡಿ ಅವರು  1989ರಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಅರಭಾಂವಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿ, ಗೋಕಾಕ್ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದವರು.  1994 ರಲ್ಲಿ ಅರಭಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಕೌಜಲಗಿ ವಿರುದ್ಧ ಪರಾಭವಗೊಂಡಿದ್ದರು. 2004ರಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದರು. 2010ರಲ್ಲಿ ಬೆಳಗಾವಿ ಜಿ.ಪಂ.ಅಧ್ಯಕ್ಷರಾಗಿದ್ದರು.  ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊದಲಿನಿಂದಲೂ ಆರ್‌ಎಸ್‌ಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಈರಣ್ಣ ಕಡಾಡಿ ಸದ್ಯ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಭಾಗದ ಬಿಜೆಪಿ ವಿಭಾಗೀಯ ಪ್ರಭಾರಿಯಾಗಿದ್ದಾರೆ.
  First published: