HOME » NEWS » State » BJP IS DOING POLITICS ON CORONA VACCINE ISSUE SAYS R DHRUVANARAYANA HK

ಕೊರೋನಾ ವ್ಯಾಕ್ಸಿನ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಮಾಜಿ ಸಂಸದ ಆರ್​. ಧ್ರುವನಾರಾಯಣ್

ಕೋವಿಡ್ ವ್ಯಾಕ್ಸಿನ್ ಸಂಪೂರ್ಣ ಮಾಹಿತಿಯನ್ನು ಜನರಿಗೆ ನೀಡಬೇಕು. ಈ ಬಗ್ಗೆ ಇರುವ ಗೊಂದಲವನ್ನು ಬಗೆಹರಿಸಬೇಕು. ವ್ಯಾಕ್ಸಿನ್ ಕೊಡುವ ಮುನ್ನ ಎಲ್ಲಾ ಅನುಮಾನಗಳಿಗೆ ಉತ್ತರ ಕೊಡಬೇಕು

news18-kannada
Updated:January 5, 2021, 3:27 PM IST
ಕೊರೋನಾ ವ್ಯಾಕ್ಸಿನ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಮಾಜಿ ಸಂಸದ ಆರ್​. ಧ್ರುವನಾರಾಯಣ್
ಮಾಜಿ ಸಂಸದ ಆರ್​. ಧೃವನಾರಾಯಣ್
  • Share this:
ಮೈಸೂರು(ಜನವರಿ.05): ಕೊರೋನಾ ವ್ಯಾಕ್ಸಿನ್ ವಿಚಾರದಲ್ಲಿ ಬಿಜೆಪಿ ನೂರಕ್ಕೆ ನೂರು ರಾಜಕೀಯ ಮಾಡುತ್ತಿದೆ. ಇದನ್ನು ರಾಜಕೀಯ ಮಾಡಬಾರದು. ನಮಗೆ ರಾಜಕೀಯ ಮಾಡುವ ಉದ್ದೇಶ ಇಲ್ಲ. ಬಿಹಾರ ಚುನಾವಣೆ ವೇಳೆಯೇ ಇದು ಸಾಬೀತಾಗಿದೆ ಎಂದು ಮಾಜಿ ಸಂಸದ ಆರ್​. ಧ್ರುವನಾರಾಯಣ್  ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಬಿಜೆಪಿಗೆ ವಿಶಾಲ ಮನಸ್ಥಿತಿ ಇರಬೇಕಾಗಿತ್ತು. ಆದರೆ ಬಿಜೆಪಿಯವರು ಅದನ್ನು ಹೊಂದಿಲ್ಲ. ಕೋವಿಡ್ ವ್ಯಾಕ್ಸಿನ್ ಸಂಪೂರ್ಣ ಮಾಹಿತಿಯನ್ನು ಜನರಿಗೆ ನೀಡಬೇಕು. ಈ ಬಗ್ಗೆ ಇರುವ ಗೊಂದಲವನ್ನು ಬಗೆಹರಿಸಬೇಕು. ವ್ಯಾಕ್ಸಿನ್ ಕೊಡುವ ಮುನ್ನ ಎಲ್ಲಾ ಅನುಮಾನಗಳಿಗೆ ಉತ್ತರ ಕೊಡಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ಗಿಂತ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಿದ್ದಾರೆ. ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು ಈ ಹಿನ್ನೆಲೆ ಜನವರಿ 13 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗ್ರಾಮ ಜನಾಧಿಕಾರ ಸನ್ಮಾನ ಕಾರ್ಯಕ್ರಮ ನಡೆಸುತ್ತೇವೆ ಎಂದು ತಿಳಿಸಿದರು.

ಮೈಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದೆ. ಫಲಿತಾಂಶದ ದಿನ ಮಧ್ಯರಾತ್ರಿ ವರೆಗೂ ಎಣಿಕೆ ನಡೆಯುತ್ತಿತ್ತು. ಬಿಜೆಪಿಯವರು ಫಲಿತಾಂಶ ಮುಗಿಯುವ ಮುನ್ನವೇ ನಮ್ಮ ಪಕ್ಷ ಹೆಚ್ಚು ಸ್ಥಾನಗಳಿಸಿದೆ ಎಂದು ಮಧ್ಯಾಹ್ನಕ್ಕೆ ಹೇಳುತ್ತಿದ್ದರು. ಇದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.

ಗ್ರಾ.ಪಂ ಚುನಾವಣಾ ಫಲಿತಾಂಶದಲ್ಲೂ ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವೇ ಮುಂದಿದೆ. 129 ಗ್ರಾಮಪಂಚಾಯಿತಿಗಳ ಪೈಕಿ 76 ರಲ್ಲಿ ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಜಿಲ್ಲೆಯಲ್ಲಿ 2159 ಮಂದಿ ಅಭ್ಯರ್ಥಿಗಳ ಪೈಕಿ 1135 ಮಂದಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೈಸೂರಿನಲ್ಲಿ ಬಿಜೆಪಿ 3ನೇ ಸ್ಥಾನದಲ್ಲಿದೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಜನ ಮಣೆ ಹಾಕಿದ್ದಾರೆ. ಈ ಎರಡು ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಂಡಿದೆ  ಎಂದರು.

ಮೀಸಲಾತಿ ಹಾಗೂ ಮಹಿಳಾ ಮಿಸಲಾತಿಗೂ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿತು. ಅಧಿಕಾರ ವಿಕೇಂದ್ರೀಕರಣವಾಗಬೇಕು ಎನ್ನುವ ಆಶಯ ಇತ್ತು. ಕಾಂಗ್ರೆಸ್ ಗ್ರಾಮಪಂಚಾಯಿತಿಗಳಿಗೆ ಅಧಿಕಾರ ತಂದುಕೊಟ್ಟಿದೆ. ಈ ಎರಡು ಜಿಲ್ಲೆಗಳಿಗೂ ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ಉತ್ತಮ ಯೋಜನೆ ಹಾಗೂ ಅಭಿವೃದ್ದಿ ಕೆಲಸ ಮಾಡುರುವುದರಿಂದ ಜನ ಕೈ ಹಿಡಿದಿದ್ದಾರೆ. ಎರಡು ಜಿಲ್ಲೆಯಲ್ಲೂ ಹೆಚ್ಚು ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಆರ್.ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ

ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಹಿನ್ನೆಲೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಾರಥ್ಯದಲ್ಲಿ ಇದೆ ತಿಂಗಳ 13ರಂದು ವರುಣದಲ್ಲಿ ಗ್ರಾಮ ಜನಾಧಿಕಾರ ಸನ್ಮಾನ ಕಾರ್ಯಕ್ರಮ‌ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಇನ್ನಷ್ಟು ಬಲವರ್ಧನೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ನೀಲಿನಕ್ಷೆ ಸಿದ್ಧವಾಗಲಿದೆ. ಹೆಚ್.ಡಿಕೋಟೆ, ಕೆ.ಆರ್ ನಗರ, ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರಗಳಲ್ಲಿ ಗ್ರಾಮ ಜನಾಧಿಕಾರ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.
Published by: G Hareeshkumar
First published: January 5, 2021, 3:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories