ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ, ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ; ಅರುಣ್ ಸಿಂಗ್

ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆಯ ಬಗ್ಗೆ ಅನುಭವ ಇದೆ. ಅವರ ಅನುಭವವನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದರು.

ಅರುಣ್​ ಸಿಂಗ್​

ಅರುಣ್​ ಸಿಂಗ್​

 • Share this:
  ಮೈಸೂರು(ಆ.31):  ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ  ಸಂಸದ ಪ್ರತಾಪ್ ಸಿಂಹ, ಮೇಯರ್ ಸುನಂದ ಪಾಲನೇತ್ರ ಸೇರಿ ಸ್ಥಳೀಯ ನಾಯಕರು ಅರುಣ್​ ಸಿಂಗ್ ಅವರಿಗೆ ಜೊತೆಯಾದರು. ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆ ಬಿಜೆಪಿ ಪದಾಧಿಕಾರಿಗಳ ಸಭೆ ಹಿನ್ನೆಲೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಇದು ಮೈಸೂರಿಗೆ ಆಗಮಿಸಿದ್ದಾರೆ.

  ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಕುಸಿಯುತ್ತಿದೆ, ಬಿಜೆಪಿ ಬೆಳೆಯುತ್ತಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನ ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

  ಇದನ್ನೂ ಓದಿ:Bengaluru Car Accident: ಶಾಸಕರ ಮಗನ ವಿರುದ್ಧ ದೂರು ನೀಡಿದ ಪ್ರತ್ಯಕ್ಷದರ್ಶಿ; ಘಟನೆ ನೋಡಿದಾತ ಹೇಳಿದ್ದೇನು?

  ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆಯ ಬಗ್ಗೆ ಅನುಭವ ಇದೆ. ಅವರ ಅನುಭವವನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ‌ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ. ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

  ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ‌. ಇಬ್ಬರು ಸಚಿವರು ಖಾತೆಯನ್ನ ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲಾ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ‌ ಬಗ್ಗೆ ಯಾವುದೇ ಒತ್ತಡ ಇಲ್ಲ ಎಂದು ಚಾಮುಂಡಿ ಬೆಟ್ಟದಲ್ಲಿ ಅರುಣ್ ಸಿಂಗ್ ಹೇಳಿದರು.

  ಇದನ್ನೂ ಓದಿ:Justice Nagarathna| ಸುಪ್ರೀಂ ಕೋರ್ಟ್ ಜಸ್ಟೀಸ್ ಆಗಿ ಬಿ.ವಿ.ನಾಗರತ್ನ ಪ್ರಮಾಣವಚನ; 2027ಕ್ಕೆ ಮೊದಲ ಮಹಿಳಾ ಸಿಜೆಐ ಆಗುವ ಸಾಧ್ಯತೆ


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿ ಯುತವಾಗಿ ನಡೆದುಕೊಳ್ಳಬೇಕು.
  Published by:Latha CG
  First published: