• Home
  • »
  • News
  • »
  • state
  • »
  • Karnataka Politics: ಬಿಜೆಪಿ ಹಿರಿಯ ಮುಖಂಡರ ಪುತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ!

Karnataka Politics: ಬಿಜೆಪಿ ಹಿರಿಯ ಮುಖಂಡರ ಪುತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬಿಜೆಪಿಯ ಹಿರಿಯ ಮುಖಂಡ  ಹಾಗೂ ಮಾಜಿ ಸಚಿವ ಡಾ. ಎ. ಬಿ. ಮಾಲಕರೆಡ್ಡಿ ಅವರ ಪುತ್ರಿ ಡಾ.ಅನುರಾಗಾ ಅವರು ಕಾಂಗ್ರೆಸ್ ಟಿಕೆಟ್ ಬಯಸಿ ಪಕ್ಷದಿಂದ ಅರ್ಜಿ ಸಲ್ಲಿಸಿದ್ದಾರೆ.

  • News18 Kannada
  • Last Updated :
  • Yadgir, India
  • Share this:

ಯಾದಗಿರಿ(ನ.25): ವಿಧಾನಸಭೆ ಚುನಾವಣೆ (Karnataka Assembly Elections) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕೂಡ ಹೆಚ್ಚಾಗಿದೆ.ಯಾದಗಿರಿ (Yadgir) ಜಿಲ್ಲೆಯಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳಿದ್ದು, ಕಾಂಗ್ರೆಸ್​ನಿಂದ (Congress) ಸ್ಪರ್ಧೆ ಬಯಸಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಪಕ್ಷದಿಂದ ಅರ್ಜಿ ಸಲ್ಲಿಸಿದ್ದಾರೆ.ಯಾದಗಿರಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಅತಿ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. 16 ಟಿಕೆಟ್ ಆಕಾಂಕ್ಷಿಗಳು ಇಲ್ಲಿ ಅರ್ಜಿ ಸಲ್ಲಿಸಿದ್ದಾರೆ.


ಬಿಜೆಪಿ ಮುಖಂಡನ ಪುತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..!


ಬಿಜೆಪಿಯ ಹಿರಿಯ ಮುಖಂಡ  ಹಾಗೂ ಮಾಜಿ ಸಚಿವ ಡಾ. ಎ. ಬಿ. ಮಾಲಕರೆಡ್ಡಿ ಅವರ ಪುತ್ರಿ ಡಾ.ಅನುರಾಗಾ ಅವರು ಕಾಂಗ್ರೆಸ್ ಟಿಕೆಟ್ ಬಯಸಿ ಪಕ್ಷದಿಂದ ಅರ್ಜಿ ಸಲ್ಲಿಸಿದ್ದಾರೆ.
ಡಾ. ಅನುರಾಗಾ ಅವರು ಕಲಬುರಗಿಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿದ್ದಾರೆ. ಡಾ.ಎ. ಬಿ. ಮಾಲಕರೆಡ್ಡಿ ಅವರು ಯಾದಗಿರಿ ಕ್ಷೇತ್ರದಿಂದ  ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತಂದೆಯವರ ಗೆಲುವಿಗೆ ಪುತ್ರಿ ಕ್ಷೇತ್ರದಲ್ಲಿ ಸಂಚರಿಸಿ ತಂದೆ ಪರ ಪ್ರಚಾರ ಮಾಡಿ ತಂದೆಯವರ ಗೆಲುವಿಗೆ ಶ್ರಮವಹಿಸಿದ್ದಾರೆ. ಆದರೀಗ ಡಾ. ಅನುರಾಗಾ ಅವರು ಕಾಂಗ್ರೆಸ್ ನಾಯಕರೊಬ್ಬರ  ಸೂಚನೆಯಂತೆ ಅರ್ಜಿ ಸಲ್ಲಿಸಿದ್ದಾರಾ ಎಂಬ ಚರ್ಚೆ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ.


ಇದನ್ನೂ ಓದಿ: Siddaramaiah: ಕೋಲಾರದಲ್ಲಿ ಮಾಜಿ ಸಿಎಂ ಸ್ಪರ್ಧೆ ಫಿಕ್ಸ್​! ಮತ್ತೆ ನಾಮಿನೇಷನ್​ ಮಾಡಲು ಬರ್ತಾರಂತೆ ಸಿದ್ದರಾಮಯ್ಯ


ಕೈ ಹಿಡಿತ್ತರಾ ಮಾಲಕರೆಡ್ಡಿ..?


ಕಾಂಗ್ರೆಸ್ ಪಕ್ಷದಲ್ಲಿದ್ದ ಡಾ. ಎ. ಬಿ. ಮಾಲಕರೆಡ್ಡಿ ಅವರು ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರ ರಾಜಕೀಯ ನಡೆಯಿಂದ ಬೇಸರಗೊಂಡು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ಪಕ್ಷದಲ್ಲಿದ್ದ ಮಾಲಕರೆಡ್ಡಿ ಅವರಿಗೆ ಪಕ್ಷದಲ್ಲಿ ಯಾವುದೇ ಮನ್ನಣೆ ಸಿಕ್ಕಿಲ್ಲ. ಹೀಗಾಗಿ ದೇಹ ಮಾತ್ರ ಬಿಜೆಪಿಯಲ್ಲಿದ್ದು ಮನಸ್ಸು ಮಾತ್ರ ಕಾಂಗ್ರೆಸ್ ಪಕ್ಷದತ್ತ ಇದೆ ಎನ್ನಲಾಗಿದೆ.
ಇಂತಹ ಸಂದರ್ಭದಲ್ಲಿ ಅವರೂ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಹಲವು ವಿಚಾರದ ಬಗ್ಗೆ ಮಾತನಾಡಿದ್ದರೆ ಎನ್ನಲಾಗಿದೆ.


ಡಾ. ಎ. ಬಿ. ಮಾಲಕರೆಡ್ಡಿ


ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾಲಕರೆಡ್ಡಿ ಅವರಿಗೆ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದರೆ ಅಂತಿಮವಾಗಿ ಮಾಲಕರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ. ವಯಸ್ಸಿನ ಕಾರಣದಿಂದ ಮಾಲಕರೆಡ್ಡಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಿದರೆ ತನ್ನ ಪುತ್ರಿಗೆ ಕಣಕ್ಕಿಳಿಸಲು ಮಾಲಕರೆಡ್ಡಿ ಅವರು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.


ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೈತಪ್ಪುವ ಆತಂಕ


ಡಾ. ಎ. ಬಿ. ಮಾಲಕರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೈತಪ್ಪುವ ಆತಂಕವಿದೆ. ಈಗಾಗಲೇ 16 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಆಕಾಂಕ್ಷಿಗಳಲ್ಲಿ ತನಗೆ ಟಿಕೆಟ್ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದಾರೆ


ಯಾದಗಿರಿಯಲ್ಲಿ ಸದ್ಯ ಬಿಜೆಪಿ ಹಿಡಿತವಿದೆ. ಕಮಲ ಕೋಟೆ ಛಿದ್ರ ಮಾಡಿ ಮತ್ತೆ ಕೈ ವಶಕ್ಕೆ ಪಡೆಯಬೇಕಾದರೆ ಗೆಲ್ಲುವ ಕುದುರೆಗಳಿಗೆ ಕಾಂಗ್ರೆಸ್ ಮಣೆಹಾಕಿ ಟಿಕೆಟ್ ನೀಡುವ ಸಾಧ್ಯತೆ ಇದೆ. ಆದರೆ, ಕಾಂಗ್ರೆಸ್ ಅಂತಿಮವಾಗಿ ಟಿಕೆಟ್ ಯಾರಿಗೆ ನೀಡುತ್ತದೆ ಎಂಬುವುದು ಚುನಾವಣೆ ಸಂದರ್ಭದಲ್ಲಷ್ಟೇ ತಿಳಿಯಲಿದೆ.


ಇದನ್ನೂ ಓದಿ:  Bengaluru: ಆಟವಾಡುವಾಗ ಆಯತಪ್ಪಿ ರಾಜಕಾಲುವೆಗೆ ಬಿದ್ದ ಮಗು; ಶೋಧಕಾರ್ಯ ಮಾಡಿದ್ರು ಪತ್ತೆಯಾಗದ ಕಂದ


ಕಂಡಿಷನ್ ಇಲ್ಲದೇ ಟಿಕೆಟ್


ಈ ಬಗ್ಗೆ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಬಸರೆಡ್ಡಿ ಮಾಲಿಪಾಟೀಲ ಅನಪುರ ಅವರು ಮಾತನಾಡಿ, ಯಾದಗಿರಿ ಕ್ಷೇತ್ರದಿಂದ ಸ್ಪರ್ಧೆ ಬಯಸಿ 16 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ನಾನು ಕೂಡ ಅರ್ಜಿ ಸಲ್ಲಿಸಿದ್ದೇನೆ. ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರು ಕಾಂಗ್ರೆಸ್ ಸೇರಲು ಬಯಸಿದರೆ ಯಾವುದೇ ಕಂಡಿಷನ್ ಇಲ್ಲದೇ ಕಾಂಗ್ರೆಸ್ ನಾಯಕರ ಒಪ್ಪಿಗೆಯಂತೆ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಮಾಲಕರೆಡ್ಡಿ ಅವರ ಪುತ್ರಿ ಡಾ. ಅನುರಾಗಾ ಅವರು ಕಾಂಗ್ರೆಸ್​ನಿಂದ ಸ್ಪರ್ಧೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎಂದೂ ತಿಳಿಸಿದ್ದಾರೆ.

Published by:Precilla Olivia Dias
First published: