'ಕಣ್ಣೀರು, ಕೇಕೆ ಹಾಕಿದರೆ ಗೆಲುವು ಸಿಗಲ್ಲ'; ಕಾಂಗ್ರೆಸ್​​-ಜೆಡಿಎಸ್ ಬಗ್ಗೆ ಶ್ರೀನಿವಾಸ ಪೂಜಾರಿ ವ್ಯಂಗ್ಯ

ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇಡೀ ಪಕ್ಷವನ್ನು ಒಟ್ಟಾಗಿ ಒಂದಾಗಿ ತೆಗೆದುಕೊಂಡು ಹೋಗುವ ಸಚಿವರ ತಂಡ ರಚನೆಯಾಗುತ್ತದೆ. ರಾಜ್ಯಾಧ್ಯಕ್ಷರು, ಸಿಎಂ , ಹೈಕಮಾಂಡ್ ತೀರ್ಮಾನಕ್ಕೆ ಇಡೀ ರಾಜ್ಯ ಬದ್ಧವಾಗಿರಬೇಕು ಎಂದರು.

ಕೋಟ ಶ್ರೀನಿವಾಸ ಪೂಜಾರಿ

ಕೋಟ ಶ್ರೀನಿವಾಸ ಪೂಜಾರಿ

  • Share this:
ಉಡುಪಿ(ಡಿ.09): ಉಪ ಚುನಾವಣೆ ಗೆಲುವು ಹರ್ಷ ತಂದಿದೆ. ಅಸ್ಥಿರ ವ್ಯವಸ್ಥೆ ಹೋಗಿ ಸ್ಥಿರ ಸರ್ಕಾರ ಬಂದಿದೆ. ಬಿಜೆಪಿಯಿಂದ ಪರಿಣಾಮಕಾರಿ ಆಡಳಿತ ಕೊಡುತ್ತೇವೆ.  ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ. ಕಣ್ಣೀರು, ಕೇಕೆ ಹಾಕಿದರೆ ಗೆಲುವು ಸಿಗಲ್ಲ ಎಂದು ಕಾಂಗ್ರೆಸ್​-ಜೆಡಿಎಸ್​​ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ ಮಾಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಯಡಿಯೂರಪ್ಪ ಈ ವಯಸ್ಸಿನಲ್ಲಿ ಓಡಾಟ ಮಾಡಿದ ಫಲ ಇದು. ಬಿಜೆಪಿ ಮತ್ತು ಬಿಎಸ್ ವೈ ಟೀಕಿಸುವವರು ಇನ್ನಾದರೂ ನಮ್ಮ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

ಇನ್ಮುಂದೆ ಕಾಂಗ್ರೆಸ್, ಜೆಡಿಎಸ್ ಟೀಕೆ ಬಿಟ್ಟು, ಪ್ರಾಮಾಣಿಕವಾಗಿ ಅಭಿವೃದ್ಧಿ ಕಡೆ ಗಮನ ಕೊಡಿ; ಸಿಎಂ ಬಿಎಸ್​ವೈ ಸಲಹೆ

ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇಡೀ ಪಕ್ಷವನ್ನು ಒಟ್ಟಾಗಿ ಒಂದಾಗಿ ತೆಗೆದುಕೊಂಡು ಹೋಗುವ ಸಚಿವರ ತಂಡ ರಚನೆಯಾಗುತ್ತದೆ. ರಾಜ್ಯಾಧ್ಯಕ್ಷರು, ಸಿಎಂ , ಹೈಕಮಾಂಡ್ ತೀರ್ಮಾನಕ್ಕೆ ಇಡೀ ರಾಜ್ಯ ಬದ್ಧವಾಗಿರಬೇಕು ಎಂದರು.

ಬಿಜೆಪಿ ಮಂತ್ರಿ ಮಂಡಲ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, "ಸಾಕಷ್ಟು ಸಚಿವ ಸ್ಥಾನಗಳು ಖಾಲಿಯಿವೆ. ಮುಖ್ಯಮಂತ್ರಿಗಳ ಬಳಿ ಹಲವು ಖಾತೆಗಳಿವೆ. ಗೆದ್ದವರಿಗೆ ಅವಕಾಶ ಕೊಡಲು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಗಮನದಲ್ಲಿಟ್ಟುಕೊಂಡು ಖಾತೆ ಹಂಚುತ್ತಾರೆ ಎಂದು ಹೇಳಿದರು.

ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿರುವ ವಿಚಾರವಾಗಿ, ಜನರ ತೀರ್ಮಾನ ಗೌರವದಿಂದ ಸ್ವೀಕರಿಸಿದ್ದೇವೆ. ಮುಂದೆ ಏನು ಎನ್ನುವುದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಈ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರು ತೀರ್ಮಾನಿಸುತ್ತಾರೆ ಎಂದರು.

ಸೋತಾಗ ರಾಜೀನಾಮೆ ನೀಡೋದು ಮಾಮುಲು; ಸಿದ್ದರಾಮಯ್ಯ-ಗುಂಡೂರಾವ್ ನಿರ್ಧಾರಕ್ಕೆ​ ಶಾಮನೂರು ವ್ಯಂಗ್ಯ

 
First published: