HOME » NEWS » State » BJP LEADER MP RENUKACHARYA LASHES OUT AT HEALTH MINISTER DR K SUDHAKAR IN BENGALURU SCT

ಸಚಿವರು ದೇವಲೋಕದಿಂದ ಬಂದವರಾ? ನಾವು ಬಿಟ್ಟಿ ಬಿದ್ದಿದ್ದೀವಾ?; ಡಾ. ಸುಧಾಕರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ

ನಮ್ಮ ಸರ್ಕಾರದ ಐದಾರು ಸಚಿವರು ಕೈಗೆ ಸಿಗಲ್ಲ. ನಾನು ಕೂಡ ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ? ಎಂದು ಸಚಿವ ಸುಧಾಕರ್ ವಿರುದ್ದ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

news18-kannada
Updated:February 26, 2021, 1:48 PM IST
ಸಚಿವರು ದೇವಲೋಕದಿಂದ ಬಂದವರಾ? ನಾವು ಬಿಟ್ಟಿ ಬಿದ್ದಿದ್ದೀವಾ?; ಡಾ. ಸುಧಾಕರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ
ಎಂಪಿ ರೇಣುಕಾಚಾರ್ಯ
  • Share this:
ಬೆಂಗಳೂರು (ಫೆ. 26): ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂಪುಟ ವಿಸ್ತರಣೆಯ ಸಮಯದಿಂದಲೂ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಮತ್ತೊಮ್ಮೆ ಸರ್ಕಾರದ ಕೆಲವು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು ತಮ್ಮದೇ ಸರ್ಕಾರದ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್​ಗಳು ಫೋನೇ ರಿಸೀವ್ ಮಾಡಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಬಂದ ಎಲ್ಲ ಸಚಿವರು ಇದೇ ರೀತಿ ಮಾಡುತ್ತಿದ್ದಾರೆ ಎಂದು ನಾನು ಹೇಳುವುದಿಲ್ಲ. ಕೆಲವರು ಮಾತ್ರ ನಮಗೆ ಕೈಗೆ ಸಿಗೋದಿಲ್ಲ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹೊನ್ನಾಳಿ ಕ್ಷೇತ್ರದ ಕೆಲಸ ಮಾಡಿಸಿಕೊಡುವಂತೆ ನಾನು ಸಚಿವ ಡಾ. ಸುಧಾಕರ್ ಅವರನ್ನು ಹತ್ತಾರು ಭಾರಿ ಭೇಟಿ ಆಗಿದ್ದೇನೆ, ಪತ್ರ ಬರೆದಿದ್ದೇನೆ. ಆದರೂ ಏನೂ ಪ್ರಯೋಜನ ಆಗಿಲ್ಲ. ಅವರು ಇನ್ನೂ ಇದೇ ರೀತಿ ವರ್ತಿಸಿದರೆ ಸುಧಾಕರ್ ಅವರ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡುತ್ತೇನೆ ಎಂದು ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅವನು ಸಿಎಂ ಆಗಿದ್ದಾಗ ಯಾರಿಗೂ ಅಧಿಕಾರ ಕೊಡಲಿಲ್ಲ; ಕುಮಾರಸ್ವಾಮಿ ವಿರುದ್ಧ ಸಚಿವ ಯೋಗೇಶ್ವರ್ ಏಕವಚನದಲ್ಲಿ ವಾಗ್ದಾಳಿ

ಹೊನ್ನಾಳಿ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಿ ಗೋ ಮಾತೇ ಇಲ್ಲ. ನಾನು ಧರಣಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ನಿನ್ನೆ ಸುಧಾಕರ್ ಅವರ ಪಿಎ ಫೋನ್ ಮಾಡಿದ್ದರು. ಕೆಲವು ಕೆಲಸ ಆಗಿದೆ, ನನ್ನ ಕೆಲಸ ಆದ ಮಾತ್ರಕ್ಕೆ ನಾನು ಸುಮ್ಮನಿರಲ್ಲ. ಪಾಪ ಅನೇಕ ನಮ್ಮ ಶಾಸಕರು ಬಾಯಿ ಇಲ್ಲದ ಶಾಸಕರಿದ್ದಾರೆ. ಅವರ ಕೆಲಸಗಳೂ ಆಗಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

ನಮ್ಮ ಸರ್ಕಾರದ ಐದಾರು ಸಚಿವರು ಕೈಗೆ ಸಿಗಲ್ಲ. ನಾನು ಕೂಡ ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ? ಎಂದು ಸಚಿವ ಸುಧಾಕರ್ ವಿರುದ್ದ ವಿಧಾನಸೌಧದಲ್ಲಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
Published by: Sushma Chakre
First published: February 26, 2021, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories