• Home
  • »
  • News
  • »
  • state
  • »
  • Murder: ಮರ್ಮಾಂಗಕ್ಕೆ ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರ ಹತ್ಯೆ; ಕೊಲೆಗೆ ಬೆಚ್ಚಿಬಿದ್ದ ಕಲಬುರಗಿ

Murder: ಮರ್ಮಾಂಗಕ್ಕೆ ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರ ಹತ್ಯೆ; ಕೊಲೆಗೆ ಬೆಚ್ಚಿಬಿದ್ದ ಕಲಬುರಗಿ

ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಮಲ್ಲಿಕಾರ್ಜುನ್​ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಕಲಬುರಗಿ (ನ.15): ರಾಜ್ಯವನ್ನೇ ಬೆಚ್ಚಿಬೀಳಿಸುವ ಬರ್ಬರ ಹತ್ಯೆ (Murder) ಕಲಬುರಗಿಯಲ್ಲಿ (Kalaburagi) ನಡೆದಿದೆ. ಚಾಕುವಿನಿಂದ ಇರಿದು ಬಿಜೆಪಿ ಮುಖಂಡನನ್ನು (BJP Leaders) ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ (Sedam City) ನಡೆದಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಮೃತ ಬಿಜೆಪಿ ಮುಖಂಡರಾಗಿದ್ದಾರೆ. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್ (Mallikarjuna)​ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ (TV Shop) ಇಟ್ಟುಕೊಂಡಿದ್ದರು.


ಮರ್ಮಾಂಗಕ್ಕೆ ಚಾಕು ಇರಿದು ಕೊಲೆ


ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು ( ನವೆಂಬರ್​ 12) ಮಲ್ಲಿಕಾರ್ಜುನ್​ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


ಬಿಜೆಪಿ ಮುಖಂಡನ ಬರ್ಬರ ಹತ್ಯೆ


ಕಲಬುರಗಿಯಲ್ಲಿ ಹೆಚ್ಚಾಗಿದೆ ಕ್ರೈಮ್​​


ಕಲಬುರಗಿ : ಅಪ್ರಾಪ್ತ ಬಾಲಕಿಯ (Minor Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನವೆಂಬರ್​ 01ರ ಸಂಜೆ ನಡೆದಿತ್ತು. ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ಅಪ್ರಾಪ್ತ ಬಾಲಕರು ಹೆಚ್ಚು ಮೊಬೈಲ್ ಬಳಕೆ ಮಾಡುತ್ತಿದ್ದರು, ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನ ಕಂಡು ಅತ್ಯಾಚಾರ ಗೈದಿದ್ದಾರಂತೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ

 ಸಾಯಂಕಾಲ ಹೊತ್ತು ಬಹಿರ್ದೆಸೆಗೆಂದು ಹೊಲ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಆಕೆಯ ಕೈಕಾಲು ಕಟ್ಟಿ ಅತ್ಯಾಚಾರವೆಸಗಿ ಬಳಿಕ ಆರೋಪಿಗಳು ವೇಲ್​ನಿಂದ  ಕತ್ತು ಹಿಸುಕಿ ಕೊಲೆಗೈದಿರಬಹುದು ಎಂದು ಹೇಳಲಾಗುತ್ತಿದೆ.


ಬುದ್ಧಿ ಹೇಳಿದ್ದಕ್ಕೆ ಯುವಕನ ಹತ್ಯೆ
ಹುಬ್ಬಳ್ಳಿ (ನ.12): ಬುದ್ಧಿ ಹೇಳಿದ್ದಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಪೆಟ್ರೋಲ್ ಕದಿಯಬೇಡಾ ಅಂತಾ ಹೇಳಿದ್ದನ್ನೇ ನೆಪ ಮಾಡಿಕೊಂಡ ಕೊಲೆಗೈಯಲಾಗಿದೆ. ಪೊಲೀಸರ (Police) ನಿರ್ಲಕ್ಷ್ಯದಿಂದಲೇ ಈ ಕೊಲೆ ನಡೆದಿದೆ ಎಂದು ಮೃತನ ಸಂಬಂಧಿಕರು, ಜಂಗ್ಲಿ ಪೇಟೆ ಜನ ಕಸಬಾ ಪೇಟೆ ಪೊಲೀಸ್ ಠಾಣೆ ಎದುರು ಶವ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಪ್ರಸಾದ್ (MLA Prasad) ಅಬ್ಬಯ್ಯ ಮನವೊಲಿಕೆಯ ನಂತರ ಶವ ಅಲ್ಲಿಂದ ತೆಗೆದುಕೊಂಡು ಹೋಗಿದ್ದಾರೆ.


ಪೊಲೀಸ್ ಠಾಣೆಗೆ ಶವ ತಂದು ಪ್ರತಿಭಟನೆ

ಕೊಲೆಗಡುಕನನ್ನು ಗಲ್ಲಿಗೆ ಏರಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದ್ರು. ಪೊಲೀಸರ ನಿರ್ಲಕ್ಷ್ಯದಿಂದ ಜೀವ ಬಲಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಈ ದೃಶ್ಯಗಳು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಹಳೆ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ ಬಳಿ ಕಂಡು ಬಂದಿದೆ.


ನಿನ್ನೆ ರಾತ್ರಿ ಸಂತೋಷ ಮುರಗೋಡ ಎಂಬಾತನಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಹೊಟ್ಟೆ ಹಾಗೂ ಎದೆ ಭಾಗಕ್ಕೆ ಚಾಕು ಇರಿದಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಗಾಯಾಳು ಸಂತೋಷ ಮುರಗೋಡನನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಸಾವನ್ನಪ್ಪಿದ್ದಾನೆ.ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊಲೆ ಆರೋಪಿ ಜಂಗ್ಲಿಪೇಟೆ ನಿವಾಸಿ ಶಿವಾನಂದ ನಾಯಕನನ್ನು ಬಂಧಿಸಿದ್ದಾರೆ‌. ಪೆಟ್ರೋಲ್ ಕದಿಯಬೇಡ ಅಂತ ಸ್ಥಳೀಯರು ಬುದ್ಧಿವಾದ ಹೇಳಿದ್ದರು. ನಮ್ಮ ಸಹೋದರನೂ ಧ್ವನಿಗೊಡಿಸಿದ್ದ. ಅದೇ ಕಾರಣಕ್ಕೆ ಕೊಲೆಗೈದಿದ್ದಾನೆ ಅಂತ ಮೃತನ ಸಂಬಂಧಿಕರು ಆರೋಪಿಸಿದ್ದಾರೆ.


Published by:ಪಾವನ ಎಚ್ ಎಸ್
First published: