ಇಂದು ವಿಜಯಪುರಕ್ಕೆ ಬಿಜೆಪಿ ನಾಯಕರ ದಂಡು; ಸಂಜೆ 5:30ಕ್ಕೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ

ಈ ಹಿಂದೆಯೇ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ಅಂದು ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸ ರದ್ದಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಕಾರ್ಯಕ್ರಮ ಆಯೋಜಿಸಲಾಗಿದೆ.

news18
Updated:March 7, 2020, 10:43 AM IST
ಇಂದು ವಿಜಯಪುರಕ್ಕೆ ಬಿಜೆಪಿ ನಾಯಕರ ದಂಡು; ಸಂಜೆ 5:30ಕ್ಕೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ
ವಿಜಯಪುರ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಸಿದ್ಧತೆ
  • News18
  • Last Updated: March 7, 2020, 10:43 AM IST
  • Share this:
ವಿಜಯಪುರ(ಮಾ. 07): ಬಿಜೆಪಿ ನಾಯಕರ ದಂಡು ಇಂದು ವಿಜಯಪುರಕ್ಕೆ ಆಗಮಿಸಲಿದ್ದು, ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ವಿಜಯಪುರ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಆರ್.ಎಸ್. ಪಾಟೀಲ ಕೂಚಬಾಳ ಅವರನ್ನು ನೇಮಕ ಮಾಡಲಾಗಿದ್ದು, ಇಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವ ಸಿ.ಸಿ. ಪಾಟೀಲ್, ವಿಜಯಪುರ ಲೋಕಸಭೆ ಬಿಜೆಪಿ ಸದಸ್ಯ ರಮೇಶ ಜಿಗಜಿಣಗಿ, ಬಿಜೆಪಿ ಶಾಸಕರಾದ ಬಸನಗೌಡ ರಾ. ಪಾಟೀಲ ಯತ್ನಾಳ, ಎ.ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಬಿ. ಪಾಟೀಲ ಸಾಸನೂರ, ವಿಧಾನ ಪರಿಷತ್ ಬಿಜೆಪಿ ಸದಸ್ಯರಾದ ಅರುಣ ಶಹಾಪುರ, ಹಣಮಂತ ನಿರಾಣಿ, ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಣ್ಣ ಕೆ. ಬೆಳ್ಳುಬ್ಬಿ, ಮಾಜಿ ಶಾಸಕ ರಮೇಶ ಭೂಸನೂರ ಸೇರಿದಂತೆ ನಾನಾ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

ಇದನ್ನೂ ಓದಿ: ವಿನಯ್​ ಗುರೂಜಿಗೆ 50 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪಿಗಳ ಬಂಧನ

ಈ ಕಾರ್ಯಕ್ರಮ ನಡೆಯಲಿರುವ ದರಬಾರ ಹೈಸ್ಕೂಲ್ ಮೈದಾನದಲ್ಲಿ ಸಿದ್ಧತೆಗಳು ಭರಿಂದ ಸಾಗಿದ್ದು, ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ. ಇಂದು ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆಯೇ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಬೇಕಿತ್ತು.  ಆದರೆ, ಅಂದು ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸ ರದ್ದಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಮುಂದೂಡಲಾಗಿತ್ತು.  ಈ ಹಿನ್ನೆಲೆಯಲ್ಲಿ ಈಗ ಕಾರ್ಯಕ್ರಮ ಆಯೋಜಿಸಲಾಗಿದೆ.

ವರದಿ: ಮಹೇಶ ವಿ. ಶಟಗಾರ

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published:March 7, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading