ವಿಜಯಪುರ/ಹಾವೇರಿ: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಗಳ ಎಣಿಗೆ ಆರಂಭಗೊಂಡಿದೆ. ಈಗಾಗಲೇ ಅಂಚೆ ಮತಗಳ ಎಣಿಕೆ ಮುಕ್ತಾಯಗೊಂಡಿದೆ. ಸಿಂದಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರು ಮತ್ತು ಹಾನಗಲ್ ನಲ್ಲಿ ಕಾಂಗ್ರೆಸ್ ನ ಶ್ರೀನಿವಾಸ್ ವಿ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರನೇ ಸ್ಥಾನ ಕಾಯ್ದುಕೊಂಡಿದೆ. ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ಹಾಗಾಗಿ ಜೆಡಿಎಸ್ ಗೆ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ.ಸಿಂದಗಿ ಕ್ಷೇತ್ರದ ಮತ ಎಣಿಕೆ ವಿಜಯಪುರದ ಸೈನಿಕ ಶಾಲೆ ಆವರಣದ ಒಡೆಯರ್ ಹೌಸ್ ನಲ್ಲಿ ನಡೆಯುತ್ತಿದ್ರೆ, ಹಾನಗಲ್ ಕ್ಷೇತ್ರದ ಮತ ಎಣಿಕೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ.
ಸಿಂದಗಿ ಬಿಜೆಪಿ ಸಂಭ್ರಮಾಚರಣೆ ಆರಂಭ
ಸಿಂದಗಿಯಲ್ಲಿ ನಾಲ್ಕನೇ ಸುತ್ತು ಸಹ ಮುಕ್ತಾಯಗೊಂಡಿದ್ದು, ಬಿಜೆಪಿ ಮುನ್ನಡೆಯಲ್ಲಿದೆ. ರಮೇಶ್ ಭುಸನೂರು ಮೊದಲ ಸುತ್ತಿನಲ್ಲಿಯೇ ಮೂರು ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೂರು ನಾಲ್ಕು ಸುತ್ತುಗಳಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಹಿನ್ನೆಲೆ ಕಮಲ ಕಾರ್ಯಕರ್ತರು ಮತ ಎಣಿಕೆ ಕೇಂದ್ರದತ್ತ ಆಗಮಿಸುತ್ತಿದ್ದಾರೆ. ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ ರಮೇಶ್ ಭೂಸನೂರ್ ಪತ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಅಂತರ ಹೆಚ್ಚಿಸಿಕೊಳ್ಳುತ್ತಿರುವ ರಮೇಶ್ ಭೂಸನೂರ್
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮೊದಲ ಸುತ್ತಿನಿಂದಲೇ ಮುನ್ನಡೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ನಾಲ್ಕನೇ ಸುತ್ತಿನಲ್ಲಿಯೂ 8 ಸಾವಿರ ಮತಗಳ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ. ಬಿಜೆಪಿ 18,235, ಕಾಂಗ್ರೆಸ್ 11,227 ಜೆಡಿಎಸ್: 596 ಮತ ಪಡೆದುಕೊಂಡಿದೆ.
ಇದನ್ನೂ ಓದಿ: Sindagi, Hangal Byelection Results Today; ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಮತ ಎಣಿಕೆಗೆ ಸಿದ್ಧತೆ
ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಕಡಿಮೆ ಅಂತರದ ಮುನ್ನಡೆ
ಹಾನಗಲ್ ನಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ 128 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 8897, ಕಾಂಗ್ರೆಸ್, 9025 ಮತ್ತು ಜೆಡಿಎಸ್ 75 ಮತ ಪಡೆದುಕೊಂಡಿದೆ. ಅಂತರ ಕಡಿಮೆ ಇರೋ ಹಿನ್ನೆಲೆ ಎರಡೂ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಮುಂದಾಗುತ್ತಿಲ್ಲ. ಎಲ್ಲರೂ ಕುತೂಹಲದಿಂದ ಮುಂದಿನ ಸುತ್ತಿನ ಫಲಿತಾಂಶದತ್ತ ನೋಡುತ್ತಿದ್ದಾರೆ.
ಸಿಂದಗಿಯಲ್ಲಿ ಶೇ.69.47ರಷ್ಟು ಮತದಾನ
ಎರಡು ಕೊಠಡಿಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್ ಒಟ್ಟು 14 ಟೇಬಲ್ ಗಳು ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಮೈಕ್ರೋ ಅಬ್ಸರ್ವರ್ ಒಬ್ಬ ಮತಎಣಿಕೆ ಮೇಲ್ವಿಚಾರಕ, ಒಬ್ಬ ಮತ ಎಣಿಕೆ ಸಹಾಯಕರು ಸೇರಿದಂತೆ ಒಟ್ಟು 60 ಸಿಬ್ಬಂದಿಯನ್ನು ನೇಮಿಸಲಾಗಿದೆ. ಒಟ್ಟು 22 ಸುತ್ತುಗಳಲ್ಲಿ ಮತ ಎಣಿಕೆ ಆಗಲಿದೆ.
ಇದನ್ನೂ ಓದಿ: Karnataka By Election Result 2021: ಇಂದು ಸಿಂದಗಿ & ಹಾನಗಲ್ ಉಪ ಚುನಾವಣೆ ಫಲಿತಾಂಶ; ಗೆಲುವಿನ ಲೆಕ್ಕಾಚಾರ ಹೀಗಿದೆ
ಮತ ಎಣಿಕೆ ಕೇಂದ್ರ ಒಳಗೆ ಮತ್ತು ಹೊರಗೆ ಅವಶ್ಯವಿರುವ ಭದ್ರತಾ ಮತ್ತು ಕಾನೂನು ಸುವ್ಯವಸ್ಥೆಗೆ 4 ಡಿವೈಎಸ್ಪಿ, 5 ಸಿಪಿಐ, 23 ಪಿಎಸ್ಐ, 25 ಎಎಸ್ಐ 282 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಒಟ್ಟು 69.47% ರಷ್ಟು ಮತದಾನವಾಗಿದೆ.
ಹಾನಗಲ್
ತ ಎಣಿಕೆಗೆ ಎರಡು ಕೊಠಡಿಗಳಲ್ಲಿ ಹದಿನಾಲ್ಕು ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಮೂವರು ಸಿಬ್ಬಂದಿ ನೇಮಕ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 250 ಪೊಲೀಸರನ್ನು ನಿಯೋಜಿಸಲಾಗಿದೆ. ಒಟ್ಟು 19 ಸುತ್ತಗಳಲ್ಲಿ ಮತಎಣಿಕೆ ನಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ