ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah) ಮಂಡ್ಯಕ್ಕೆ (Mandya) ಆಗಮಿಸುತ್ತಿರುವ ಹಿನ್ನೆಲೆ ಬಿಜೆಪಿ, ಜೆಡಿಎಸ್ (JDS) ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ನಿನ್ನೆಯೂ ಸಾಲು ಸಾಲು ಟ್ವೀಟ್ ಮಾಡಿದ್ದ ಬಿಜೆಪಿ ನೇರವಾಗಿಯೇ ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಮತ್ತು ಸಿದ್ದರಾಮಯ್ಯ (Former CM Siddaramaiah) ವಿರುದ್ಧ ವಾಗ್ದಾಳಿ ನಡೆಸಿತ್ತು. ಇಂದು ಮತ್ತೆ ಟ್ವೀಟ್ ಮಾಡಿರುವ ಬಿಜೆಪಿ ಪಂಚರತ್ನ ಯಾತ್ರೆ (Pancharatna yatre) ಬಗ್ಗೆ ವ್ಯಂಗ್ಯ ಮಾಡಿದೆ. ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ ಎಂದರೆ ಜನಪರ ಅಭಿವೃದ್ಧಿಯ ಯಾತ್ರೆಯಲ್ಲ. ಅದು ಅವರ ಕುಟುಂಬದ 5 (ಪಂಚ) ಜನರನ್ನು ಪ್ರಮೋಶನ್ ಮಾಡುವ ಯಾತ್ರೆ. ಇದು ಜನರಿಗೆ ಅರ್ಥವಾದ ಕಾರಣಕ್ಕೆ ಪಂಚರತ್ನ ಯಾತ್ರೆ, ಪಂಚರ್ ಆಗಿದೆ ಎಂದು ಲೇವಡಿ ಮಾಡಿದೆ.
ಪಂಚರ್ ರತ್ನ ಪ್ರಮೋಶನ್ ಯಾತ್ರೆ ಎಂಬುದು ಹಳೆ ಮೈಸೂರಿನ ಅಭಿವೃದ್ಧಿಗೆ ಹಮ್ಮಿಕೊಂಡ ಯಾತ್ರೆ ಅಲ್ಲಾ ಹೆಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹೀಗೆ ಜೆಡಿಎಸ್ನ 5 ಜನರನ್ನು ಪ್ರಮೋಶನ್ ಮಾಡಲು ಆಯೋಜಿಸಿದ ಯಾತ್ರೆ ಎಂದು ಟ್ವೀಟ್ ಮಾಡಿದೆ.
ಮಂಡ್ಯ ಜಿಲ್ಲೆಯಲ್ಲಿ HDK ಮಾಡಿದ್ದು ಹಗಲುದರೋಡೆ
ಜನರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳುವುದರಲ್ಲಿ ಹೆಚ್ ಡಿ ಕುಮಾರಸ್ವಾಮಿ ಎತ್ತಿದ ಕೈ. ರಾಜಕೀಯವನ್ನು ಫ್ಯಾಮಿಲಿ ಬಿಸ್ನೆಸ್ ಮಾಡಿಕೊಂಡಿರುವ ಜೆಡಿಎಸ್ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತದೆ ಎಂಬುದು ಈಗಾಗಲೇ ಸಾಬೀತುಪಡಿಸಿದೆ. ಇವರ ಕಪಟ ಬುದ್ಧಿಗೆ ಸಿಲುಕಿ ತತ್ತರಿಸುತ್ತಿರುವವರು ಮಂಡ್ಯ ಜನತೆ.
ಮುಗ್ದ ಮನಸ್ಸಿನ ಮಂಡ್ಯ ಜನರ ಒಳ್ಳೆಯತನವನ್ನೇ ದಡ್ಡತನವೆಂದು ತಿಳಿದುಕೊಂಡ ಕುಮಾರಸ್ವಾಮಿ ಅವರಿ ಇಡೀ ಜಿಲ್ಲೆಯಲ್ಲಿ ಮಾಡಿದ್ದು ಹಗಲು ದರೋಡೆ. 2018ರಲ್ಲಿ ಏಳಕ್ಕೆ ಏಳೂ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟ ಮಂಡ್ಯದ ಜನತೆಗೆ ಜೆಡಿಎಸ್ ಹೇಳಿಕೊಳ್ಳುವುದಕ್ಕಾದರೂ ಒಂದು ಒಳ್ಳೆಯ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಜೆಡಿಎಸ್ಗೆ ಯಾಕಿಷ್ಟು ಢೋಂಗಿ ಅಕ್ಕರೆ
ಅನ್ಯಾಯ ಮತ್ತು ನಂಬಿಕೆ ದ್ರೋಹವನ್ನು ಮಂಡ್ಯದ ಜನರು ಎಂದಿಗೂ ಸಹಿಸರು. ಹಾಗಾಗಿ 2019ರ ಉಪಚುನಾವಣೆಯಲ್ಲಿ ಕೆ. ಆರ್.ಪೇಟೆಯಲ್ಲಿ ಜೆಡಿಎಸ್ ಸೋಲಿಸಿ ಬಿಜೆಪಿಗೆ ಗೆಲುವಿನ ಮಾಲೆ ಹಾಕಿದರು. ಎರಡೂ ಪಕ್ಷಗಳ ಕೆಲಸಗಳನ್ನು ಜಿಲ್ಲೆಯ ಇತರೆ ಆರೂ ಕ್ಷೇತ್ರಗಳ ಮತದಾರರು ಪಟ್ಟಿ ಮಾಡಿಟ್ಟುಕೊಂಡಿದ್ದಾರೆ.
ಹಳೇ ಮೈಸೂರು ಭಾಗದ ಮೇಲೆಯೇ ಜೆಡಿಎಸ್ಗೆ ಯಾಕಿಷ್ಟು ಢೋಂಗಿ ಅಕ್ಕರೆ ಎಂದರೆ ಈ ಭಾಗವೇ ಆ ಪಕ್ಷದ ಪಾಲಿಗೆ ಕರೆಯುವ ಹಸು. ಕಣ್ಣೀರು ಸುರಿಸಿ ಜನರ ನಂಬಿಕೆ ಜತೆ ಆಡುವ ಕಲೆ ಪಕ್ಷಕ್ಕೆ ಕರಗತವಾಗಿದೆ. ಯೋಜನೆಗಳ ಹೆಸರು ಹೇಳಿ ಹಣ ಮಾಡಿಕೊಳ್ಳುತ್ತಿರುವುದರಿಂದಲೇ ಅಭಿವೃದ್ಧಿ ಎಂಬುದು ಈ ಭಾಗಕ್ಕೆ ಮರಿಚೀಕೆ ಎಂದು ವಾಗ್ದಾಳಿ ನಡೆಸಿದೆ.
ತುಷ್ಟೀಕರಣ ರಾಜಕೀಯ
ಆದರೆ, ಬಿಜೆಪಿಗೆ ಜನ ಮತ್ತು ಕ್ಷೇತ್ರದ ಅಭಿವೃದ್ಧಿಯೇ ಮುಖ್ಯ. ಹಳೇ ಮೈಸೂರು ಭಾಗದಲ್ಲಿ ಕೆಲವೇ ಕ್ಷೇತ್ರಗಳಲ್ಲಿ ಗೆದ್ದರೂ ಜೆಡಿಎಸ್ಗಿಂತ ಗಮನಾರ್ಹ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಗ್ರಾಮೀಣ ಭಾಗದಲ್ಲಿ ಬಿಜೆಪಿ ಶಾಸಕರು ಮಾಡಿರುವ ಅಭಿವೃದ್ಧಿಗೆ ಜನ ಮೆಚ್ಚಿದ್ದಾರೆ ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ: Karnataka Election: ಹಳೆ ಮೈಸೂರು ಭಾಗದತ್ತ ಮುಖ ಮಾಡಿದ ಬಿಜೆಪಿ; ಮಾಜಿ ಸಿಎಂಗಳ ವಿರುದ್ಧ ವಾಗ್ದಾಳಿ
ಭಾಗದ ಪ್ರಮುಖ ಸಮುದಾಯಗಳು ಈಗ ಜೆಡಿಎಸ್ ವಿರುದ್ಧ ತಿರುಗಿಬಿದ್ದಿವೆ ಎಂಬುದನ್ನು ಕುಮಾರಸ್ವಾಮಿ ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿಯೇ, ತುಷ್ಟೀಕರಣದ ರಾಜಕಾರಣಕ್ಕೆ ಕೈ ಹಾಕಿದ್ದಾರೆ. ತುಷ್ಟೀಕರಣ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಪಂಚರತ್ನ ಯಾತ್ರೆಯಲ್ಲಿ ಅವರನ್ನು ಹೊರುವ ರಥದ ಹೆಸರೇ ಸಾಕ್ಷಿ ಎಂದು ಕಿಡಿಕಾರಿದೆ.
ಭಾಗದ ಪ್ರಮುಖ ಸಮುದಾಯಗಳು ಈಗ ಜೆಡಿಎಸ್ ವಿರುದ್ಧ ತಿರುಗಿಬಿದ್ದಿವೆ ಎಂಬುದನ್ನು ಅರ್ಥ ಮಾಡಿಕೊಂಡಿದ್ದಾರೆ.ಹಾಗಾಗಿಯೇ, ತುಷ್ಟೀಕರಣದ ರಾಜಕಾರಣಕ್ಕೆ ಕೈ ಹಾಕಿದ್ದಾರೆ. ತುಷ್ಟೀಕರಣ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಪಂಚರತ್ನ ಯಾತ್ರೆಯಲ್ಲಿ ಅವರನ್ನು ಹೊರುವ ರಥದ ಹೆಸರೇ ಸಾಕ್ಷಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ