• Home
  • »
  • News
  • »
  • state
  • »
  • Assembly Election 2023: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ತಂತ್ರ; ಟಗರಿಗೆ ಯಾರಾಗ್ತಾರೆ ಎದುರಾಳಿ?

Assembly Election 2023: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ತಂತ್ರ; ಟಗರಿಗೆ ಯಾರಾಗ್ತಾರೆ ಎದುರಾಳಿ?

ಸಿದ್ದರಾಮಯ್ಯ

ಸಿದ್ದರಾಮಯ್ಯ

2023ರ ಚುನಾವಣೆ ನನ್ನ ಕೊನೆ ಎಲೆಕ್ಷನ್ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ತನ್ನದೇ ಪ್ಲಾನ್ ಮಾಡಿಕೊಳ್ಳುತ್ತಿದೆ.

  • News18 Kannada
  • Last Updated :
  • Karnataka, India
  • Share this:

Karnataka Assembly Election 2023: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿಕೊಂಡಿವೆ. ಅದರಲ್ಲಿ ಈ ಬಾರಿ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ (Former CM Siddaramaiah) 2023ರಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. 2018ರ ಚುನಾವಣೆ (Election 2018) ವೇಳೆ ವರುಣಾ (Varuna Assembly Constituency) ಕ್ಷೇತ್ರ ಪುತ್ರ ಯತೀಂದ್ರ ಅವರಿಗೆ ಬಿಟ್ಟುಕೊಟ್ಟಿದ್ದ ಸಿದ್ದರಾಮಯ್ಯನವರು ಚಾಮುಂಡೇಶ್ವರಿ (Chamundeshwari Assembly Constituency) ಮತ್ತು ಬಾದಾಮಿ ವಿಧಾನಸಭಾ ಕ್ಷೇತ್ರದಿಂದ (Badami Assembly Constituency) ಕಣಕ್ಕಿಳಿದಿದ್ದರು.


ಚಾಮುಂಡೇಶ್ವರಿಯಲ್ಲಿ ಜೆಡಿಎಸ್​ನ ಜಿ.ಟಿ.ದೇವೇಗೌಡರ ವಿರುದ್ಧ ಸೋತಿದ್ದ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಅಲ್ಪಮತಗಳ ಮುನ್ನಡೆಯಲ್ಲಿ ಗೆಲುವು ದಾಖಲಿಸಿದ್ದರು.


ಈಗಿನಿಂದಲೇ ಬಿಜೆಪಿ ಸಿದ್ಧತೆ


2023ರ ಚುನಾವಣೆ ನನ್ನ ಕೊನೆ ಎಲೆಕ್ಷನ್ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ತನ್ನದೇ ಪ್ಲಾನ್ ಮಾಡಿಕೊಳ್ಳುತ್ತಿದೆ. ಕೊನೆಯ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ.


bjp master plan to defeat assembly election mrq
ಸಿದ್ದರಾಮಯ್ಯ, ಮಾಜಿ ಸಿಎಂ


ಸಿದ್ದರಾಮಯ್ಯರಿಗೆ ಆಹ್ವಾನ ನೀಡ್ತಿರೋ ಕೈ ಶಾಸಕರು


ಮತ್ತೆ ನಮ್ಮ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಬಾದಾಮಿಯ ಜನತೆ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಚಾಮರಾಜಪೇಟೆ ಕ್ಷೇತ್ರಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇತ್ತ ಕೋಲಾರ, ಕೊಪ್ಪಳ ಭಾಗದ ಶಾಸಕರು ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಡುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ.


ಸಿದ್ದರಾಮಯ್ಯ ಪುತ್ರ ನೀಡಿದ ಸುಳಿವು ಏನು?


ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಶಾಸಕ, ಪುತ್ರ ಯತೀಂದ್ರ ಸಿದ್ದರಾಮಯ್ಯ, ತಂದೆಯವರು ವರುಣಾಗೆ ಬಂದ್ರೆ ಸಂತೋಷ. ವರುಣಾದಿಂದ ಸ್ಪರ್ಧೆ ಮಾಡಿದ್ರೆ ತಂದೆಯವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಈ ಮೂಲಕ ವರುಣಾದಿಂದ ಸ್ಪರ್ಧೆ ಮಾಡಬಹುದು ಎಂಬ ಸುಳಿವು ನೀಡಿದ್ದರು.


ಟಗರು ವಿರುದ್ಧ ಯಾರಾಗ್ತಾರೆ ಎದುರಾಳಿ?


ಇನ್ನು ಸಿದ್ದರಾಮಯ್ಯ ವಿರುದ್ಧ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದರ ಬಗ್ಗೆ ಬಿಜೆಪಿ ಅಂಗಳದಲ್ಲಿ ಚರ್ಚೆಗಳು ನಡೆಯುತ್ತಿವೆಯಂತೆ. ಯಾವ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಪಕ್ಷದಲ್ಲಿ ಆಂತರಿಕ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.


bjp master plan to defeat assembly election mrq
ಸಿದ್ದರಾಮಯ್ಯ , ಶ್ರೀರಾಮುಲು


ಬಾದಾಮಿಯಿಂದ ಶ್ರೀರಾಮುಲು ಸ್ಪರ್ಧೆನಾ?


ಒಂದು ವೇಳೆ ಬಾದಾಮಿಯಿಂದ ಸ್ಪರ್ಧೆ ಮಾಡಿದ್ರೆ ಮತ್ತೆ ಶ್ರೀರಾಮುಲು ಅವರನ್ನು ಕಣಕ್ಕಿಳಿಸುವ ಕುರಿತ ಚರ್ಚೆಗಳು ನಡೆಯುತ್ತಿವೆ. ಕಾರಣ 2018ರಲ್ಲಿ ಸಿದ್ದರಾಮಯ್ಯ ಅವರಿಗೆ ನೇರಾನೇರ ಸ್ಪರ್ಧೆ ನೀಡಿದ್ದರು.


ಇದನ್ನೂ ಓದಿ:  Karnataka Politics: ಯತ್ನಾಳ್ ಯಾವ ಪಕ್ಷದವರು? ಮರಿನಾಯಕನ ವಿರುದ್ಧ ಕೇಸ್ ದಾಖಲಿಸಿ; ಸಿದ್ದರಾಮಯ್ಯ ಆಗ್ರಹ

 ವಿಜಯೇಂದ್ರಗೆ ಸಿಗುತ್ತಾ ಎರಡು ಟಿಕೆಟ್?


ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿರುವ ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡೋದರ ಬಗ್ಗೆ ಹೇಳಿಕೆ ನೀಡುವುದು. ಒಂದು ವೇಳೆ ವರುಣಾಗೆ ಸಿದ್ದರಾಮಯ್ಯ ಬಂದ್ರೆ ಇಲ್ಲಿಂದಲೂ ವಿಜಯೇಂದ್ರ ಅವರನ್ನು ಎದುರಾಳಿಯಾಗಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆಯಂತೆ.bjp master plan to defeat assembly election mrq
ಬಿವೈ ವಿಜಯೇಂದ್ರ

ಎರಡು ಕ್ಷೇತ್ರಕ್ಕೆ ಟಿಕೆಟ್ ಸಿಗುತ್ತಾ?


ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಿದ್ದರಾಮಯ್ಯ ವಿರುದ್ಧ ಯಾರೇ ಕಣಕ್ಕಿಳಿದ್ರೆ ಅವರಿಗೆ ಎರಡು ಕ್ಷೇತ್ರಕ್ಕೆ ಟಿಕೆಟ್ ನೀಡಬೇಕಾ ಎಂಬುದರ ಬಗ್ಗೆ ಬಿಜೆಪಿ ಪಡಸಾಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: Murugha Swamy: ಮುರುಘಾ ಸ್ವಾಮಿಗೆ ಮತ್ತೆ ಸಂಕಷ್ಟ; ದಾಖಲಾಯ್ತು ಮೂರನೇ ಎಫ್​ಐಆರ್​


ಬದಲಾದ ರಾಜಕೀಯ ಸ್ಥಿತಿ


ಸದ್ಯ ರಾಜಕೀಯ ಸ್ಥಿತಿ ಬದಲಾಗಿದೆ. ಚಾಮುಂಡೇಶ್ವರಿಯಲ್ಲಿ ಗೆದ್ದಿದ್ದ ಜಿ.ಟಿ.ದೇವೇಗೌಡರು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೆಡಿಎಸ್​ನಿಂದ ಹೊರ ಬಂದಿರುವ ಜಿಟಿ ದೇವೇಗೌಡರು ಪುತ್ರನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಮತ್ತೆ ಸಿದ್ದರಾಮಯ್ಯನವರು ಮತ್ತೆ ಚಾಮುಂಡೇಶ್ವರಿ ಅದೃಷ್ಟ ಪರೀಕ್ಷೆಗೆ ಇಳಿತಾರಾ ಅನ್ನೋ ಮಾತುಗಳು ಸಹ ಕೇಳಿ ಬರುತ್ತಿವೆ.

Published by:Mahmadrafik K
First published: