ಇನ್ನೂ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡದ ರಾಜ್ಯ ಸರ್ಕಾರ; ಸಚಿವ ಜಗದೀಶ್​​ ಶೆಟ್ಟರ್​​​ ಸಭೆಗೆ ರೈತರ ಮುತ್ತಿಗೆ

ಜಿಲ್ಲೆಯಲ್ಲಿ 44,166 ಮನೆಗಳು ಬಿದ್ದಿದ್ದು ಈ ಬಗ್ಗೆ ಡೇಟಾ ಎಂಟ್ರಿ ಮಾಡಲಾಗಿದೆ. 38 ಜನ ಪ್ರವಾಹದಲ್ಲಿ ಮೃತಪಟ್ಟಿದ್ದು, ಈ ಪೈಕಿ 33 ಜನರಿಗೆ ಪರಿಹಾರ ವಿತರಣೆ ಮಾಡಲಾಗಿದೆ. ಮಗ್ಗ ನಷ್ಟಗೊಂಡ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿಯಂತೆ, 108 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿದೆ.

ಜಗದೀಶ್​ ಶೆಟ್ಟರ್​​ ಸಭೆ

ಜಗದೀಶ್​ ಶೆಟ್ಟರ್​​ ಸಭೆ

  • Share this:
ಬೆಳಗಾವಿ (28): ಬೆಳಗಾವಿ ಜಿಲ್ಲೆ ಕಳೆದ ನಾಲ್ಕು ತಿಂಗಳ ಹಿಂದಿನ ಭೀಕರ ಪ್ರವಾಹಕ್ಕೆ ತತ್ತರಿಸಿ ಹೋಗಿದೆ. ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಿಲು ಇದೇ ಮೊದಲ ಬಾರಿಗೆ ಸಚಿವ ಜಗದೀಶ್​​ ಶೆಟ್ಟರ್ ಸುವರ್ಣಸೌಧದಲ್ಲಿ ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ಕೇವಲ 11 ಜನ ಶಾಸಕರು ಮಾತ್ರ ಹಾಜರಾಗಿದ್ದರು. ಇನ್ನುಳಿದ 7 ಜನ ಶಾಸಕರು ಸಭೆಗೂ ತಮಗೂ ಸಂಬಂಧವಿಲ್ಲ ಎಂದು ದೂರ ಉಳಿದರು. ಪ್ರಮುಖವಾಗಿ ಶಾಸಕರಾದ ರಮೇಶ್​​​ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಭೆ ಕಡೆ ಮುಖವೇ ಹಾಕಲಿಲ್ಲ. 

ಪ್ರವಾಹ ಸಂದರ್ಭದಲ್ಲಿ ಸಾವಿರಾರು ಮನೆಗಳು ನೆಲಸಮಗೊಂಡಿದ್ದು, ಸಂತ್ರಸ್ತರು ಪರಿಹಾರಕ್ಕಾಗಿ ಕಾದು ಕುಳಿತಿದ್ದಾರೆ. ಇಂತಹ ವೇಳೆಯಲ್ಲಿಯೇ ರೈತರಿಗೆ ಖಾಸಗಿ ಬ್ಯಾಂಕ್, ಫೈನಾನ್ಸ್ ಕಡೆಯಿಂದ ನೋಟಿಸ್ ಮೇಲೆ ನೋಟಿಸ್ ಬರುತ್ತಿವೆ. ಸುವರ್ಣಸೌಧದಲ್ಲಿ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ರೈತರು ಸುವರ್ಣಸೌಧದ ಮುಖ್ಯ ದ್ವಾರಕ್ಕೆ ಮುತ್ತಿಗೆ ಹಾಕಿದ್ದರು. ನೂರಾರು ರೈತರು ಸಂತ್ರಸ್ತರಿಗೆ ಪರಿಹಾರ ಕೊಡಬೇಕು, ಬ್ಯಾಂಕ್ ಕಿರುಕುಳ ತಪ್ಪಿಸಬೇಕು. ಕಬ್ಬಿನ ಬಾಕಿ ಹಣ ಕೊಡಿಸಬೇಕು ಎಂಬ ಅನೇಕ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟರು.

‘ಕನ್ನಡ ಭಾಷೆ ಮತ್ತು ಸಂಸ್ಕೃತಿ ಗೌರವಿಸುವುದು ನಮ್ಮ ಜವಾಬ್ದಾರಿ‘: ಖಾಸಗಿ ಸಂಸ್ಥೆಗಳಿಗೆ ಹೈಕೋರ್ಟ್​​​ ಛೀಮಾರಿ

 

ಕೆಡಿಪಿ ಸಭೆಯಲ್ಲಿ ಪ್ರಮುಖವಾಗಿ ಪ್ರವಾಹ ಸಂದರ್ಭದಲ್ಲಿ ಆಗಿರುವ ಮನೆಗಳ ಹಾನಿ, ಬೆಳೆ ಹಾನಿ ಬಗ್ಗೆ ಚರ್ಚೆ ನಡೆಸಲಾಯಿತು. ಅನೇಕ ಶಾಸಕರು ಪರಿಹಾರ ವಿಚಾರದಲ್ಲಿ ತಾರತಮ್ಯ ಆಗಿದೆ ಎಂಬ ಬಗ್ಗೆ ಸರ್ಕಾರದ ಗಮನ ಸೆಳೆದರು. ಬಿದ್ದ ಮನೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಣ ಮಾಡಿದ್ದು ಅನೇಕ ಸಮಸ್ಯೆಗಳು ಉದ್ಭವಿಸಿವೆ. ಜಿಲ್ಲೆಯಲ್ಲಿ 44,166 ಮನೆಗಳು ಬಿದ್ದಿದ್ದು ಈ ಬಗ್ಗೆ ಡೇಟಾ ಎಂಟ್ರಿ ಮಾಡಲಾಗಿದೆ. 38 ಜನ ಪ್ರವಾಹದಲ್ಲಿ ಮೃತಪಟ್ಟಿದ್ದು, ಈ ಪೈಕಿ 33 ಜನರಿಗೆ ಪರಿಹಾರ ವಿತರಣೆ ಮಾಡಲಾಗಿದೆ. ಮಗ್ಗ ನಷ್ಟಗೊಂಡ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿಯಂತೆ, 108 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿದೆ. ಜಿಲ್ಲೆಗೆ ಬಿಡುಗಡೆಯಾಗಿ 867 ಕೋಟಿ ಪೈಕಿ 327 ಕೋಟಿ ರೂಪಾಯಿ ಮಾತ್ರ ಬಾಕಿ ಉಳಿದಿದ್ದು, ಇನ್ನುಳಿದ ಹಣವನ್ನು ಸಂತ್ರಸ್ತರಿಗಾಗಿ ಖರ್ಚು ಮಾಡಲಾಗಿದೆ.

ಸಭೆಯ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್,  ಸಂತ್ರಸ್ತರಿಗೆ ಪರಿಹಾರ ಬಿಗಡೆಯಾಗಿದ್ದು, ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಜತೆಗೆ ಅನೇಕ ಸಮಸ್ಯೆಗಳು ಎದುರಾಗಿದ್ದು, ಅವುಗಳನ್ನು ಅಧಿಕಾರಿಗಳು ಇತ್ಯರ್ಥ ಮಾಡಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 10 ಸಾವಿರ ಮನೆಗಳ ಬಿದ್ದು ಹೋಗಿವೆ. ಈ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದರು. ಇನ್ನು, ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ನಿನ್ನೆ ಪ್ರವಾಹ ಸಂಬಂಧ ಪರಿಹಾರ ಕಾರ್ಯಗಳಿಗೆ ಚುರುಕು ನೀಡಲು ಅಧಿಕಾರಿಗಳ ಸಭೆ ನಡೆಸಲಾಗಿದೆ. ಆದರೇ ತಮ್ಮದೇ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಗಮನ ಸೆಳೆಯಬೇಕಿದ್ದ ಶಾಸಕರು ಮಾತ್ರ ಗೈರು ಹಾಜರಾಗಿದ್ದರು.

 

ಆರ್ಥಿಕ ಮುಗ್ಗಟ್ಟಿನಿಂದಾಗಿ ಜಾಗತಿಕವಾಗಿ ಕಳೆದ ನಾಲ್ಕು ವರ್ಷಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್​ ಉದ್ಯೋಗಿಗಳಿಗೆ ಗೇಟ್ ಪಾಸ್!

 
Published by:Latha CG
First published: