• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸಿಎಂ ಬದಲಾವಣೆ ಬಗ್ಗೆ ಮೋದಿ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ?; ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಕಿಡಿ

ಸಿಎಂ ಬದಲಾವಣೆ ಬಗ್ಗೆ ಮೋದಿ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ?; ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಕಿಡಿ

ಸಚಿವ ಕೆ.ಎಸ್‌. ಈಶ್ವರಪ್ಪ.

ಸಚಿವ ಕೆ.ಎಸ್‌. ಈಶ್ವರಪ್ಪ.

ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ  ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು ಎಂದು ಕಿಡಿಕಾರಿದರು.

  • Share this:

ಉಡುಪಿ(ನ.06): ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಗುರುವಾರ ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಮುಗಿಸಿ ನೇರ ಕೃಷ್ಣಮಠಕ್ಕೆ ಬಂದು  ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದರು. ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಕನಕನ ಕಿಂಡಿಯ ಮೂಲಕ ಸಚಿವ ಈಶ್ವರಪ್ಪ ಮತ್ತೆ ಶ್ರೀಕೃಷ್ಣನ ದರ್ಶನ ಮಾಡಿದರು. ಕುರುಬ ಸಮಾಜದ ಮುಖಂಡರು ರಥಬೀದಿಯಲ್ಲಿ ಶೀಘ್ರ ಕನಕನ ಗುಡಿ ನಿರ್ಮಾಣದ ಬಗ್ಗೆ ಮನವಿಯನ್ನು ಸಚಿವರಿಗೆ ಸಲ್ಲಿಸಿದರು. ಮನವಿ ಸ್ವೀಕರಿಸಿ ಕನಕನ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು.  ಆದಷ್ಟು ಬೇಗ ಸುಂದರವಾದ ಕನಕನ ಗುಡಿ ನಿರ್ಮಾಣ ಆಗಲಿದೆ.  ಸ್ಥಳೀಯ ಶಾಸಕರು ಈ ಬಗ್ಗೆ ಮುತುವರ್ಜಿ ವಹಿಸಿದ್ದಾರೆ ಎಂದು ಕುರುಬ ಮುಖಂಡರಿಗೆ ಈಶ್ವರಪ್ಪ ಭರವಸೆ ನೀಡಿದರು.


ಈ ವೇಳೆ‌ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಸಿಬಿಐ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಇದು ರಾಜಕೀಯ ಪ್ರೇರಿತ ಬಂಧನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಉಡುಪಿಯಲ್ಲಿ ತಿರುಗೇಟು ನೀಡಿದ್ದಾರೆ.  ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಾದ್ರೆ ಕೊಲೆಗೆ ಕಾಂಗ್ರೆಸ್ ಬೆಂಬಲ ಕೊಡುತ್ತಾ? ಸಿದ್ದರಾಮಯ್ಯ ಬೆಂಬಲ ಕೊಡುವುದಾದರೆ ಒಪ್ಪಿಕೊಂಡು ಬಿಡಲಿ ಎಂದರು.


UGC Guidelines: ನ.17ರಿಂದ ಯುಜಿ, ಪಿಜಿ ಕಾಲೇಜು ಆರಂಭ; ಯುಜಿಸಿಯಿಂದ ಮಾರ್ಗಸೂಚಿ ಬಿಡುಗಡೆ


ನಮ್ಮವರನ್ನೆಲ್ಲ ಜೈಲಿಗೆ ಕಳಿಸಿದ್ದು ಕೂಡಾ ರಾಜಕೀಯ ಪ್ರೇರಿತನಾ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ. ವಿನಯ್ ಕುಲಕರ್ಣಿ ತಪ್ಪಿತಸ್ಥನಲ್ಲದಿದ್ದರೆ ಬಿಡುಗಡೆಯಾಗಿ ಹೊರಗೆ ಬರಲಿ. ಕಾಂಗ್ರೆಸ್‌ನ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.


ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಸಿದ್ದರಾಮಯ್ಯಗೆ ಇದೇ ಸಂದರ್ಭ ಚಾಟಿ ಬೀಸಿದ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ  ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು ಎಂದು ಕಿಡಿಕಾರಿದರು.


ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದೆಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ?ನೀವು ಜನರ ಮಧ್ಯೆ ಹೋಗಿ ಕೆಲಸ ಮಾಡಿ. ನಾನು ದೇವಸ್ಥಾನದಲ್ಲಿ ಇದೀನಿ, ಇಲ್ಲದಿದ್ದರೆ ಇನ್ನೂ ಕೆಟ್ಟ ಪದ ಹೇಳ್ತಿದ್ದೆ ಎಂದು ಈಶ್ವರಪ್ಪ ಏಕವಚನದಲ್ಲೇ ಕಿಡಿಕಾರಿದರು.

Published by:Latha CG
First published: