ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು; ಸ್ವಪಕ್ಷೀಯರ ವಿರುದ್ಧವೇ ಗುಡುಗಿದ ಕೆ.ಎಸ್. ಈಶ್ವರಪ್ಪ

ಮಾಜಿ ಸಿಎಂ ಕುಮಾರಸ್ವಾಮಿಗೆ ಈಶ್ವರಪ್ಪ ತಿರುಗೇಟು ನೀಡಿದರು. ಕುಮಾರಸ್ವಾಮಿ ಸಿನಮಾ ಮಾಡಿಕೊಂಡು ಇರಲಿ ಸಾಕು. ಕುಮಾರಸ್ವಾಮಿ ಸಿಎಂ ಆಗಿದ್ದವರು ಅವರ ಸ್ಥಾನಕ್ಕೆ ತಕ್ಕಂತೆ ಪದ ಬಳಕೆ ಮಾಡಬೇಕು. ಅಷ್ಟು ಮಾತ್ರ ನಾನು ಹೇಳಬಲ್ಲೆ, ಎಂದರು.

news18-kannada
Updated:January 19, 2020, 11:34 AM IST
ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು; ಸ್ವಪಕ್ಷೀಯರ ವಿರುದ್ಧವೇ ಗುಡುಗಿದ ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್​. ಈಶ್ವರಪ್ಪ
  • Share this:
ಮೈಸೂರು(ಜ.19): ಸಚಿವಾಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವುದು ನಮ್ಮ ಕರ್ತವ್ಯ. ಅವರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ. ಅದು ಸಚಿವರನ್ನಾಗಿ ಮಾಡುವುದು ಅಥವಾ ಸ್ಥಾನ ಕೊಡುವುದಲ್ಲ. ಅವರ ಋಣವನ್ನು ನಾವು ತೀರಿಸಬೇಕಿದೆ ಅಷ್ಟೇ. ಇನ್ನು ಎರಡು ದಿನದಲ್ಲಿ ಅದು ಆಗಲಿದೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಹೇಳಿದರು. ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ, ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರ ವಿರುದ್ದ ಹಗುರವಾಗಿ ಮಾತನಾಡುವುದು ಸರಿಯಲ್ಲ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ ಎಂದು ಸಪಕ್ಷೀಯರ ವಿರುದ್ಧವೇ ಗುಡುಗಿದರು.

ವಿದೇಶ ಪ್ರವಾಸದ ಬಳಿಕ ಸಂಪುಟ ವಿಸ್ತರಿಸುವಂತೆ ಸಿಎಂ ಬಿಎಸ್​ವೈಗೆ ಅಮಿತ್ ಶಾ ಅಭಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ, ಈ ವೇಳೆ ಏನು ಚರ್ಚೆ ಆಗಿದೆ ನನಗೆ ಮಾಹಿತಿ ಇಲ್ಲ. ನಿಮಗೆ ಇರುವಷ್ಟೇ ಮಾಹಿತಿ ನನಗಿದೆ. ಪೂರ್ಣ ಬಹುಮತ ಬಾರದ ಕಾರಣ ಈ ಗೊಂದಲ ಸೃಷ್ಟಿಯಾಗಿದೆ. ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಕಾಂಗ್ರೆಸ್​ ವಿರುದ್ಧ ಕಿಡಿ

ಅಮಿತ್ ಶಾ ಭೇಟಿ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ ವಿಚಾರವಾಗಿ, ಅಯೋಗ್ಯ ಸರ್ಕಾರ ಎಂದು ರಾಜ್ಯದ ಜನರು ಮನೆಯಲ್ಲಿ ಕೂರಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಜನವಿರೋಧಿ ಕೆಲಸ ಮಾಡಿದರು. ಜಾತಿ ಜಾತಿಯನ್ನು ಒಡೆದರು. ಧರ್ಮ ಧರ್ಮದ ನಡುವೆ ಬೆಂಕಿ ಹಚ್ಚಿದರು. ಅದಕ್ಕೆ ಅವರನ್ನು ಜನ ಮನೆಗೆ ಕಳುಹಿಸಿದರು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಸಂಪುಟ ವಿಸ್ತರಣೆಗೆ ಅಮಿತ್ ಶಾ ಒಪ್ಪಿಗೆ; ದೆಹಲಿಗೆ ಮರಳಿದ ಕೇಂದ್ರ ಗೃಹ ಸಚಿವಎಚ್​ಡಿಕೆಗೆ ತಿರುಗೇಟು

ಇನ್ನು, ಮಾಜಿ ಸಿಎಂ ಕುಮಾರಸ್ವಾಮಿಗೆ ಈಶ್ವರಪ್ಪ ತಿರುಗೇಟು ನೀಡಿದರು. "ಕುಮಾರಸ್ವಾಮಿ ಸಿನಮಾ ಮಾಡಿಕೊಂಡು ಇರಲಿ ಸಾಕು. ಕುಮಾರಸ್ವಾಮಿ ಸಿಎಂ ಆಗಿದ್ದವರು ಅವರ ಸ್ಥಾನಕ್ಕೆ ತಕ್ಕಂತೆ ಪದ ಬಳಕೆ ಮಾಡಬೇಕು. ಅಷ್ಟು ಮಾತ್ರ ನಾನು ಹೇಳಬಲ್ಲೆ," ಎಂದರು.

 

 
First published: January 19, 2020, 11:30 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading