HOME » NEWS » State » BJP MINISTER RAMESH JARKIHOLI TO MEET BL SANTHOSH IN DELHI TO DISCUSS ON KARNATAKA CABINET EXPANSION SCT

ಹೈಕಮಾಂಡ್ ಮೂಲಕ ಯೋಗೇಶ್ವರ್​ಗೆ ಮಂತ್ರಿ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಸರ್ಕಸ್

ದೆಹಲಿಯಲ್ಲಿರುವ ರಮೇಶ್​ ಜಾರಕಿಹೊಳಿ ಇಂದು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ, ಹೈಕಮಾಂಡ್ ಮೂಲಕ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಲಿದ್ದಾರೆ.

news18-kannada
Updated:November 27, 2020, 11:59 AM IST
ಹೈಕಮಾಂಡ್ ಮೂಲಕ ಯೋಗೇಶ್ವರ್​ಗೆ ಮಂತ್ರಿ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಸರ್ಕಸ್
ಸಚಿವ ರಮೇಶ್​ ಜಾರಕಿಹೊಳಿ
  • Share this:
ನವದೆಹಲಿ (ನ. 27): ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ಈಗ ಸಚಿವ ಸಂಪುಟ ವಿಸ್ತರಣೆಯ ತಲೆನೋವು ಎದುರಾಗಿದೆ. ಉಪಚುನಾವಣೆಯಲ್ಲಿ ಗೆದ್ದವರು ಸೇರಿದಂತೆ ಅನೇಕರು ಮಂತ್ರಿ ಸ್ಥಾನಕ್ಕಾಗಿ ಯಡಿಯೂರಪ್ಪನವರ ಎದುರು ಬೇಡಿಕೆ ಇಟ್ಟಿದ್ದಾರೆ. ಇದೀಗ ದೆಹಲಿಗೆ ದೌಡಾಯಿಸಿರುವ ರಾಜ್ಯದ ಕೆಲವು ಬಿಜೆಪಿ ನಾಯಕರು ಹೈಕಮಾಂಡ್​ ಮೂಲಕ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಸಚಿವ ಸಂಪುಟದ ಹೊಸ ಪಟ್ಟಿಯನ್ನು ಯಡಿಯೂರಪ್ಪ ಸಿದ್ಧಪಡಿಸುವುದಕ್ಕೂ ಮೊದಲು ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.

ತಮ್ಮ ಆಪ್ತ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ. ದೆಹಲಿಯಲ್ಲಿರುವ ರಮೇಶ್​ ಜಾರಕಿಹೊಳಿ ಇಂದು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ, ಹೈಕಮಾಂಡ್ ಮೂಲಕ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಲಿದ್ದಾರೆ.

ಇನ್ನು, ಸಂಪುಟ ವಿಸ್ತರಣೆ ವಿಚಾರವಾಗಿ ಸಚಿವ ಸಂಪುಟ ಸಭೆಗೂ ಮೊದಲು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಈಗಷ್ಟೇ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮಾತನಾಡಿದ್ದೇನೆ. ದೂರವಾಣಿ ಮೂಲಕ ಸಂಪುಟ ಪುನರ್ ರಚನೆಯ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ನೂತನ ಸಚಿವರ ಪಟ್ಟಿ ಬರಲಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಹೆಚ್ಚಿದ ಮುನಿಸು; ವರಿಷ್ಠರೂ ಕೆಂಗಣ್ಣು; ಇಕ್ಕಟ್ಟಿನಲ್ಲಿ ಯಡಿಯೂರಪ್ಪ

ದೆಹಲಿಯಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ಮಾತನಾಡಿರುವ ಸಿ.ಪಿ. ಯೋಗೇಶ್ವರ್, ನಾನು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದೇನೆ. ಸಂತೋಷ್ ಜೊತೆ ರಾಜಕೀಯ ಚರ್ಚೆಯನ್ನೇನೂ ಮಾಡಿಲ್ಲ. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಪರ -ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಮತ್ತು ರಮೇಶ್ ಜಾರಕಿಹೊಳಿ 20 ವರ್ಷದ ಸ್ನೇಹಿತರು. ಸ್ನೇಹದ ಕಾರಣಕ್ಕೆ ರಮೇಶ್ ಜಾರಕಿಹೊಳಿ ನನಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ಏನು ಎಂದು ನಾಯಕರಿಗೆ ಗೊತ್ತಿದೆ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರದ ಬಗ್ಗೆ ನಾನು ಮಾತನಾಡೋದಿಲ್ಲ ಎಂದಿದ್ದಾರೆ.

ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಶುರುವಾಗಿದ್ದು, ರಾಜ್ಯ ಬಿಜೆಪಿ ನಾಯಕರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಇಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿರುವ ಆರ್. ಅಶೋಕ್ ಬಳಿಕ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಬಿಎಲ್​ ಸಂತೋಷ್ ಅವರನ್ನು ಭೇಟಿ ಮಾಡಲಿದ್ದಾರೆ.(ವರದಿ: ಧರಣೀಶ್ ಬೂಕನಕೆರೆ)
Published by: Sushma Chakre
First published: November 27, 2020, 11:59 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories