ಧಾರವಾಡ : ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ವಿಶ್ವನಾಥ ಹಾಗೂ ಎಂ.ಟಿ.ಬಿ. ನಾಗರಾಜ ತ್ಯಾಗ ಮಾಡಿದ್ದಾರೆ. ಅವರಿಗೂ ಸಹ ಸಚಿವ ಸ್ಥಾನ ನೀಡಬೇಕೆಂದು ಸಚಿವ ಶ್ರೀಮಂತ ಪಾಟೀಲ್ ಆಗ್ರಹ ಪಡಿಸಿದ್ದಾರೆ.
ಧಾರವಾಡ ಜಿಲ್ಲಾಡಳಿತ ಭವನದಲ್ಲಿ ಇಲಾಖೆ ಅಧಿಕಾರಿಗಳ ಸಭೆನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ್, ಪಕ್ಷ ಬಿಟ್ಟು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದಾಗುತ್ತದೆ. ಆದರೆ ಇದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಅಲ್ಲದೇ, ಇದನ್ನು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಇದನ್ನೂ ಓದಿ: 13 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಸಚಿವ ಸ್ಥಾನ ಆಕಾಂಕ್ಷಿಗಳಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ನಿಗಮ ಮಂಡಳಿ ಬೇಡ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ್, ನಮ್ಮ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ನಾಯಕರು ಯಾವುದೇ ತೊಂದರೆ ಆಗದಂತೆ ನೊಡಿಕೊಳ್ಳುತ್ತಾರೆ. ನಿಗಮ ಮಂಡಳಿ ಬೇಡ ಎಂದವರ ಜೊತೆಗೆ ಸಿಎಂ ಯಡಿಯೂರಪ್ಪ ಚರ್ಚೆ ಮಾಡಲಿದ್ದಾರೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ