ಮೈಸೂರು(ನ.01): ಆರ್ಆರ್ ನಗರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಮುನಿರತ್ನ ಶೇ.100ಕ್ಕೆ 100 ಗೆದ್ದೇ ಗೆಲ್ಲುತ್ತಾರೆ. ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಸಿದ್ದರಾಮಯ್ಯ ಏನೂ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿ ಗೆ ಹಣ ಕೊಟ್ಟಿಲ್ಲ. ಅದೇ ರೀತಿ ಮುನಿರತ್ನ ಏನೂ ಮನೆಯಿಂದ ಹಣ ತಂದು ಖರ್ಚು ಮಾಡಿಲ್ಲ. ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕಾಂಗ್ರೆಸ್ ನವರು ಲಾಕ್ ಡೌನ್ ಸಮಯದಲ್ಲಿ ಜನರಿಗೆ ಒಂದು ಗ್ಲಾಸ್ ನೀರು ಕೊಟ್ಟಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಮ್ಮನ್ನು ಸಿದ್ದರಾಮಯ್ಯ ಬೆಳೆಸಿಲ್ಲ. ನಾವು ಮೊದಲಿನಿಂದ ಕಾಂಗ್ರೆಸ್‌ನಲ್ಲಿದ್ದೆವು. ಸಿದ್ದರಾಮಯ್ಯ ಕೊನೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದು. ನಾವೇನೂ ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ. ನಾವೇನೂ ಅವರ ಮೇಲೆ ಮುನಿಸಿ ಕೊಂಡು ಪಕ್ಷ ಬಿಟ್ಟಿಲ್ಲ. ಆಗ ಸಮಸ್ಯೆ ಬಗೆಹರಿಸೋದು ಬಿಟ್ಟು ಈಗ ಒದ್ದಾಡಿದರೆ ಏನೂ ಪ್ರಯೋಜನ ಹೇಳಿ ಎಂದು ಪ್ರಶ್ನಿಸಿದರು.
ಭಾರತಕ್ಕೆ ಒಳ್ಳೆಯ ಸುದ್ದಿ ಬಂದರೆ ಕಾಂಗ್ರೆಸ್‌ನವರಿಗೆ ಖುಷಿಯಾಗಲ್ಲ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮೈಸೂರಿನಲ್ಲಿ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅವರಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಪೂರ್ಣ ಕುಂಭದ ಮೂಲಕ ಸಚಿವರಿಗೆ ಸ್ವಾಗತ ಮಾಡಲಾಯಿತು. ಅರಮನೆ ಅವರಣದಲ್ಲಿರುವ ಭುವನೇಶ್ವರಿ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಭುವನೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. ಕೋಟೆ ಆಂಜನೇಯ ದೇವಾಲಯದ ಮುಂಭಾಗ ರಾಷ್ಟ್ರ ಹಾಗೂ ರಾಜ್ಯಧ್ವಜ ಧ್ವಜಾರೋಹಣ ಮಾಡಲಾಯಿತು.
ಈ ಬಾರಿ ಕನ್ನಡ ರಾಜ್ಯೋತ್ಸವ ಸಾಂಪ್ರಾದಾಯಿಕ ಪೂಜೆಗಷ್ಟೇ ಸೀಮಿತವಾಯಿತು..
ಕೋವಿಡ್ ಹಿನ್ನಲೆಯಲ್ಲಿ ಕಲಾತಂಡಗಳಿಗೆ ಬ್ರೇಕ್ ಹಾಕಲಾಗಿತ್ತು. ಪೊಲೀಸ್ ಹಾಗೂ ಶಾಲಾ ವಿದ್ಯಾರ್ಥಿಗಳ ಪಥ ಸಂಚಲನವೂ ಇರಲಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ