HOME » NEWS » State » BJP MLA RENUKACHARYA CLARIFICATION TO MTB NAGARAJ OVER HIS STATEMENT ON MIGRANT MLAS SCT

ಸರ್ಕಾರ ರಚನೆಯಲ್ಲಿ ನಮ್ಮ ಕೊಡುಗೆಯೂ ಇದೆ, 17 ಜನರ ತ್ಯಾಗವೂ ಇದೆ; ವಿವಾದದ ಬಳಿಕ ಎಚ್ಚೆತ್ತ ರೇಣುಕಾಚಾರ್ಯ

17 ಜನರು ಬಿಜೆಪಿಗೆ ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಸರ್ಕಾರ ರಚನೆಯಲ್ಲಿ ನಿಮ್ಮ ತ್ಯಾಗವೂ ಇದೆ, ನಮ್ಮ ಕೊಡುಗೆಯೂ ಇದೆ. ಒಬ್ಬ ವ್ಯಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ ಎಂದು ನಾನು ಹೇಳಿದ್ದೇನೆಯೇ ಹೊರತು 17 ಜನರ ವಿಚಾರವನ್ನು ನಾನೆಲ್ಲೂ ಪ್ರಸ್ತಾಪಿಸಿಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

news18-kannada
Updated:November 26, 2020, 12:25 PM IST
ಸರ್ಕಾರ ರಚನೆಯಲ್ಲಿ ನಮ್ಮ ಕೊಡುಗೆಯೂ ಇದೆ, 17 ಜನರ ತ್ಯಾಗವೂ ಇದೆ; ವಿವಾದದ ಬಳಿಕ ಎಚ್ಚೆತ್ತ ರೇಣುಕಾಚಾರ್ಯ
ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ
  • Share this:
ಬೆಂಗಳೂರು (ನ. 26): ಬಿಜೆಪಿಗೆ ವಲಸೆ ಬಂದ 17 ಜನರಿಂದ ಮಾತ್ರ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ ಎಂದು ನಿನ್ನೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಎಂಟಿಬಿ ನಾಗರಾಜ್, 17 ಜನರಿಂದ ಸರ್ಕಾರ ಬಂದಿಲ್ಲ ಎಂದಾದರೆ, ಉಳಿದ 105 ಜನರಿಂದ ಯಾಕೆ ಸರ್ಕಾರ ರಚಿಸಲು ಆಗಲಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಪ್ರಶ್ನಿಸಿದ್ದಾರೆ. ಹದಿನೇಳು ಜನರಿಂದ ಸರ್ಕಾರ ಬರಲಿಲ್ಲ ಅಂತಾರೆ. ಸರ್ಕಾರ ರಚನೆಗೆ 105 ಜನರೂ ಮುಖ್ಯ, 17 ಜನರೂ ಮುಖ್ಯ ಎಂದಿದ್ದರು.

ಈ ಕುರಿತು ಇಂದು ಮತ್ತೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, 17 ಜನರಿಂದ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. 17 ಜನರು ಬಿಜೆಪಿಗೆ ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಸರ್ಕಾರ ರಚನೆಯಲ್ಲಿ ನಿಮ್ಮ ತ್ಯಾಗವೂ ಇದೆ, ನಮ್ಮ ಕೊಡುಗೆಯೂ ಇದೆ. ಒಬ್ಬ ವ್ಯಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ ಎಂದು ನಾನು ಹೇಳಿದ್ದೇನೆಯೇ ಹೊರತು 17 ಜನರ ವಿಚಾರವನ್ನು ನಾನೆಲ್ಲೂ ಪ್ರಸ್ತಾಪಿಸಿಲ್ಲ ಎಂದು ವಾದಿಸಿದ್ದಾರೆ.

ನಿನ್ನೆ ವಾಗ್ದಾಳಿ ನಡೆಸಿದ್ದ ಎಂ.ಪಿ. ರೇಣುಕಾಚಾರ್ಯ, ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಬಿಜೆಪಿ ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಕಾಂಗ್ರೆಸ್, ಜೆಡಿಎಸ್​ನಿಂದ ಬೇಸತ್ತವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 105 ಶಾಸಕರು ಇಲ್ಲದೇ ಇದ್ದಿದ್ದರೆ ಸರ್ಕಾರ ಹೇಗೆ ಆಗುತ್ತಿತ್ತು? ಬಿಜೆಪಿ ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದಾರೆ. ಮೊದಲು 105 ಶಾಸಕರು, ಆಮೇಲೆ ಉಳಿದವರು ಗೆದ್ದಿದ್ದಾರೆ. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಅಧಿಕಾರಕ್ಕೆ ಬಂದಿದೆ ಎಂದಿದ್ದರು.

ಇದನ್ನೂ ಓದಿ: ಕೇವಲ 17 ಜನರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ; ರೇಣುಕಾಚಾರ್ಯ ಮತ್ತೆ ವಾಗ್ದಾಳಿ

ಇಂದು ಸಂಪುಟ ವಿಸ್ತರಣೆ ವಿಳಂಬ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಎಂಪಿ ರೇಣುಕಾಚಾರ್ಯ, ಮುಖ್ಯಮಂತ್ರಿಗಳು, ಬಿಜೆಪಿಯ ವರಿಷ್ಠರು ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನನಗಿಂತ ನಿಮಗೆ ಬಹಳ ಅತುರವಿದೆ. ನಾನು ಬ್ಲಾಕ್​ಮೇಲ್ ಮಾಡುವ ವ್ಯಕ್ತಿಯಲ್ಲ. ನಾನು ಸಾದಾಸೀದಾ ವ್ಯಕ್ತಿ. ನಾನು ತಪ್ಪು ಮಾಡಿದ್ದರೆ ಆತ್ಮಾವಲೋಕನ ಮಾಡಿಕೊಳ್ಳುವವನು. ನಾನು ಸಚಿವ ಸ್ಥಾನಕ್ಕೆ ಬ್ಲಾಕ್​ಮೇಲ್ ಮಾಡಲ್ಲ. ಗುಂಪುಗಾರಿಕೆಯನ್ನೂ ಮಾಡಲ್ಲ ಎಂದಿದ್ದಾರೆ.
Youtube Video

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರಲ್ಲೇ ಒಳಜಗಳವಿತ್ತು. ಅದರಿಂದಲೇ ಕಾಂಗ್ರೆಸ್ ಹೀನಾಯವಾಗಿ ಸೋತಿತು. ಅವರ ತಟ್ಟೆಯಲ್ಲಿ ಏನಿದೆ ಎಂಬುದನ್ನು ಅವರು ನೋಡಿಕೊಳ್ಳಲಿ. ಸಿಎಂ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆಯ ಕನಸು ಯಾವಾಗ ಬಿತ್ತು? ಅದು ಹಗಲುಗನಸೋ, ಇರುಳು‌ಗನಸೋ ಎಂಬುದನ್ನು ಹೇಳಲಿ. ಯಡಿಯೂರಪ್ಪನವರ ಬದಲಾವಣೆ ಇಲ್ಲವೆಂದು ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
Published by: Sushma Chakre
First published: November 26, 2020, 12:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories