HOME » NEWS » State » BJP MLA SATISH REDDY ASKS CM BS YEDIYURAPPA WHAT IS CRITERIA TO SELECT FOR MINISTER POST MAK

Cabinet Expansion Karnataka: ಯಡಿಯೂರಪ್ಪನವರೇ ಸಚಿವರ ಆಯ್ಕೆಗೆ ಮಾನದಂಡವೇನು?; ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಕ್ರೋಶ

ಬಿಜೆಪಿ ಯುವಕರ ಪಕ್ಷ. ಹೀಗಾಗಿ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ಆದರೆ, ಇತ್ತೀಚೆಗೆ ಬಿಜೆಪಿ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಆಯಕಟ್ಟಿನ ಜಾಗದಲ್ಲಿ ಇದ್ದವರಿಗೇ ಮತ್ತೆ ಮತ್ತೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಶಾಸಕ ಸತೀಶ್​ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

news18-kannada
Updated:January 13, 2021, 12:35 PM IST
Cabinet Expansion Karnataka: ಯಡಿಯೂರಪ್ಪನವರೇ ಸಚಿವರ ಆಯ್ಕೆಗೆ ಮಾನದಂಡವೇನು?; ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಕ್ರೋಶ
ಬಿಜೆಪಿ ಶಾಸಕ ಸತೀಶ್​ ರೆಡ್ಡಿ.
  • Share this:
ಬೆಂಗಳೂರು (ಜನವರಿ 13); ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ಕೊನೆಗೂ ಇಂದು ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನೂತನ 7 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್, ಅರವಿಂದ ಲಿಂಬಾವಳಿ, ಎಸ್. ಅಂಗಾರ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಆರ್​. ಶಂಕರ್​ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದೇ ಮೊದಲ ಬಾರಿಗೆ 5 ಜನ ವಿಧಾನ ಪರಿಷತ್​ ಸದಸ್ಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಆದರೆ, ಬಿಜೆಪಿಯಲ್ಲಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನ ಸಿಗದೆ ಅನೇಕರು ನಿರಾಸೆಗೆ ಒಳಗಾಗಿದ್ದಾರೆ. ಬೊಮ್ಮನ ಹಳ್ಳಿ ಶಾಸಕ ಸತೀಶ್ ರೆಡ್ಡಿ ಸಹ ತೀವ್ರ ಅಸಮಾಧಾನಗೊಂಡಿದ್ದು, “ಯಡಿಯೂರಪ್ಪನವೇ ಸಚಿವರ ಆಯ್ಕೆಗೆ ಮಾನದಂಡ ಏನು?” ಎಂದು ಆಕ್ರೋಶ ಹೊರಹಾಕಿದ್ದಾರೆ.ಈ ಕುರಿತು ಖಾರವಾಗಿ ಟ್ವೀಟ್ ಮಾಡಿರುವ ಸತೀಶ್ ರೆಡ್ಡಿ, “ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Muniratna: ಸಚಿವ ಸ್ಥಾನಕ್ಕಾಗಿ ಮುನಿರತ್ನರಿಂದ ಒತ್ತಡ ತಂತ್ರ; ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿರುವ ಸಿಎಂ!ಈ ಸಂಬಂಧ ಮಾಧ್ಯಮಗಳಲ್ಲೂ ಮಾತನಾಡಿರುವ ಸತೀಶ್ ರೆಡ್ಡಿ, "ಬಿಜೆಪಿ ಯುವಕರ ಪಕ್ಷ. ಹೀಗಾಗಿ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ಆದರೆ, ಇತ್ತೀಚೆಗೆ ಬಿಜೆಪಿ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಆಯಕಟ್ಟಿನ ಜಾಗದಲ್ಲಿ ಇದ್ದವರಿಗೇ ಮತ್ತೆ ಮತ್ತೆ ಸಚಿವ ಸ್ಥಾನ ನೀಡಲಾಗುತ್ತಿದೆ. ಪ್ರತಿ ದಿನ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಎಡತಾಕುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ಇದು ಉತ್ತಮ ಬೆಳವಣಿಗೆ ಅಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ.

ನಾವು ಎಂದಿಗೂ ಸಹ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡಿಲ್ಲ. ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇವೆ. ಪಕ್ಷ ನಮಗೆ ತಾಯಿ ಇದ್ದಂತೆ. ಆದರೆ, ನಮ್ಮ ಕೆಲಸವನ್ನು ಪರಿಗಣಿಸಿ ನಮಗೆ ಅಧಿಕಾರ ನೀಡಬೇಕಿತ್ತು. ಆದರೆ, ಅಂತಹ ಕೆಲಸ ಮಾಡುವಲ್ಲಿ ಯಡಿಯೂರಪ್ಪ ಎಡವಿದ್ದಾರೆ. ಆದರೆ, ನಾವು ಎಂದಿಗೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ. ಕೇಂದ್ರ ಮಾಜಿ ಸಚಿವ ದಿವಂಗತ ಅನಂತಕುಮಾರ್ ಹೆಗಡೆ ನಮಗೆ ತಂದೆ ಇದ್ದಂತೆ. ನಮಗೆ ಯಾವ ಸಮಸ್ಯೆ ಇದ್ದರೂ ಸಹ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತಿದ್ದೆವು. ಆದರೆ, ಇಂತಹ ಸಂದರ್ಭದಲ್ಲಿ ನಮಗೆ ಅವರ ಅನುಪಸ್ಥಿತಿ ಕಾಡುತ್ತಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published by: MAshok Kumar
First published: January 13, 2021, 12:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories