ಮಹಾರಾಷ್ಟ್ರದ ಮೂರು ಜಿಲ್ಲೆ ಸೇರಿಸಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಒತ್ತಾಯ

ಮಹದಾಯಿ ಹರಿಯುವ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಇದರ ಜೊತೆಗೆ ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರವಿದೆ. ಈ ಅವಕಾಶವನ್ನು ಬಳಸಿಕೊಂಡು ತಕ್ಷಣ ಮಹದಾಯಿ ಬಿಕ್ಕಟ್ಟು ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಕತ್ತಿ ಕೋರಿದರು.

HR Ramesh | news18-kannada
Updated:October 18, 2019, 3:12 PM IST
ಮಹಾರಾಷ್ಟ್ರದ ಮೂರು ಜಿಲ್ಲೆ ಸೇರಿಸಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಒತ್ತಾಯ
ಶಾಸಕ ಉಮೇಶ್​ ಕತ್ತಿ
  • Share this:
ಬೆಳಗಾವಿ:ಉತ್ತರ ಕರ್ನಾಟಕದ 13 ಜಿಲ್ಲೆಗಳು ಹಾಗೂ ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಮಹಾರಾಷ್ಟ್ರದ ಮೂರು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚಿಸುವಂತೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಒತ್ತಾಯಿಸಿದ್ದಾರೆ. ಈ ಮೂಲಕ ಮತ್ತೆ ಪ್ರತ್ಯೇಕ ರಾಜ್ಯದ ಕೂಗನ್ನು ಮುನ್ನೆಲೆಗೆ ತಂದಿದ್ದಾರೆ.

ಸಂಕೇಶ್ವರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಕತ್ತಿ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರದ ಕೊಲ್ಹಾಪುರ, ಸೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲೆಗಳನ್ನು ಸೇರಿಸಿಕೊಂಡು ಪ್ರತ್ಯೇಕ ರಾಜ್ಯ ರಚಿಸಿದರೆ ಈ ಭಾಗದ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮಹದಾಯಿ ಹರಿಯುವ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಇದರ ಜೊತೆಗೆ ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರವಿದೆ. ಈ ಅವಕಾಶವನ್ನು ಬಳಸಿಕೊಂಡು ತಕ್ಷಣ ಮಹದಾಯಿ ಬಿಕ್ಕಟ್ಟು ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಕೋರಿದರು.

ಇದನ್ನು ಓದಿ: ಬೆಂಗಳೂರಲ್ಲಿ ಮಹದಾಯಿ ಹೋರಾಟ ತೀವ್ರ; ನಾಲ್ವರು ಅಸ್ವಸ್ಥ; ರಾಜ್ಯಪಾಲರ ಭೇಟಿಗೆ ಬಂದಿಲ್ಲ ಘಳಿಗೆ

ಪ್ರತ್ಯೇಕ ರಾಜ್ಯದ ವಿಚಾರವಾಗಿ ಚಿಕ್ಕೋಡಿಯಲ್ಲೂ ಮಾತನಾಡಿದ ಉಮೇಶ್​ ಕತ್ತಿ, ನಾನು ಸಾಯುವುದರೊಳಗೆ ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗದಿದ್ದರೂ ಉತ್ತರ ಕರ್ನಾಟಕದ ಮುಖ್ಯಮಂತ್ರಿಯಾದರೂ ಆಗುತ್ತೇನೆ. ನಮ್ಮ ಭಾಗಕ್ಕೆ ಸರಿಯಾಗಿ ನೀರು ಕೊಡದಿದ್ದರೆ ಪ್ರತ್ಯೇಕ ರಾಜ್ಯ ಹೋರಾಟ ಅನಿವಾರ್ಯವಾಗಲಿದೆ. ಯಾವುದೇ ಸರ್ಕಾರವಿದ್ದರೂ ಸರಿ ಅನ್ಯಾಯವಾದರೆ ಪ್ರತಿಭಟನೆ ನಡೆಸಬೇಕಾಗುತ್ತದೆ. ಮುಂದಿನ ಮಾರ್ಚ್​ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದವರೆಗೆ ನಿರ್ಧಾರ ಮಾಡಲು ಸರ್ಕಾರಕ್ಕೆ ಸಮಯಾವಕಾಶ ನೀಡುತ್ತೇನೆ ಎಂದು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

 

First published: October 18, 2019, 3:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading