HOME » NEWS » State » BJP MLAS NOT HELD MEETING AT RESORT SAYS MLA RENUKACHARYA RH

ರೆಸಾರ್ಟ್​ನಲ್ಲಿ ಶಾಸಕರು ಸಭೆ ಸೇರಿಲ್ಲ, ಪಕ್ಷದ ಚೌಕಟ್ಟು ಮೀರಿ ಚರ್ಚೆ ಮಾಡಿಲ್ಲ; ಶಾಸಕ ರೇಣುಕಾಚಾರ್ಯ

ಶಾಸಕರು ಯಾರೂ ಸಚಿವಗಿರಿಗಾಗಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿಲ್ಲ. ರೆಸಾರ್ಟ್ ಗೆ ಹೋಗಿ ಸಭೆ ನಡೆಸಿಲ್ಲ.  ಪಕ್ಷದ ಚೌಕಟ್ಟು ಮೀರಿ ವರ್ತಿಸಿಲ್ಲ. ನಾನು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದನ್ನು ಅವರು ( ಸಚಿವರು) ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಲಿ. ಆಗ ನಾನು ಸಹ ನನ್ನ ಸ್ಟೈಲ್ ನಲ್ಲೇ ಉತ್ತರ ಕೊಡುತ್ತೇನೆ ಎನ್ನುವ ಮೂಲಕ ಪ್ರತ್ಯೇಕ ಸಭೆ ನಡೆಸಿದ್ದ ಸಚಿವರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು. 

news18-kannada
Updated:November 21, 2020, 3:58 PM IST
ರೆಸಾರ್ಟ್​ನಲ್ಲಿ ಶಾಸಕರು ಸಭೆ ಸೇರಿಲ್ಲ, ಪಕ್ಷದ ಚೌಕಟ್ಟು ಮೀರಿ ಚರ್ಚೆ ಮಾಡಿಲ್ಲ; ಶಾಸಕ ರೇಣುಕಾಚಾರ್ಯ
ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ
  • Share this:
ಬೆಂಗಳೂರು; ಸಚಿವ ರಮೇಶ್ ಜಾರಕಿಹೊಳಿ ಅವರನ್ನು ನೀರಾವರಿ ವಿಚಾರವಾಗಿ ಭೇಟಿ ಮಾಡಿದ್ದೆ. ಇದರ ಹೊರತಾಗಿ ರಾಜಕೀಯವಾಗಿ ಏನನ್ನು ಚರ್ಚಿಸಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ ಅವರು ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರಮೇಶ್ ಜಾರಕಿಹೊಳಿ ಅವರು ಸಂತೋಷ್ ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ? ಸಂತೋಷ್ ಅವರು ನಮ್ಮ ಸಂಘಟನಾ ಪ್ರಧಾನ ಕಾರ್ಯದರ್ಶಿ. ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗ್ತಿದೆ ಅಂತ ಸಿಎಂಗೆ ಕೇಳುವಷ್ಟು ನಾನು ದೊಡ್ಡವನಲ್ಲ. ನಾನು ತಾಳ್ಮೆಯಿಂದ ಕಾಯುತ್ತೇನೆ. ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದರು.

ಇದನ್ನು ಓದಿ: ತ್ಯಾಗ ಮಾಡಿ ಬಂದವರಿಗೆಲ್ಲ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ; ಸಚಿವ ರಮೇಶ್ ಜಾರಕಿಹೊಳಿ

 ಕೆಲವು ಸಚಿವರನ್ನು ಕೈಬಿಡಬೇಕೆಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಸಿಎಂ ಮತ್ತು ಅಧ್ಯಕ್ಷರಿಗೆ ಈ ಬಗ್ಗೆ ಏನ್ ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು. ನಾವು ಶಾಸಕರು ರೆಸಾರ್ಟ್ ನಲ್ಲಿ ಸಭೆ ಮಾಡಿದರೆ ತಪ್ಪಾಗುತ್ತೆ. ನಾವು ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಪಕ್ಷದ ವ್ಯಾಪ್ತಿಯಲ್ಲಿ ಸಭೆ ಮಾಡಿದ್ದೇವೆ. ಈಗಾಗಲೇ ಸಿಎಂ ಮತ್ತು ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೀವಿ. ಯಾವ ಹೆಸರನ್ನು ನಾನು ಪ್ರಸ್ತಾಪ ಮಾಡಲ್ಲ. ಏನು ಹೇಳಬೇಕೋ, ಇರೋ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ಸಿಎಂ ಹಾಗೂ ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದೇನೆ. ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇವೆ ಎಂದು ತಮ್ಮ ಸಭೆಗಳ ಬಗ್ಗೆ ಸಮರ್ಥನೆ ಮಾಡಿಕೊಂಡರು.

ಪಕ್ಷದಲ್ಲಿ ಇರುವ ಎಲ್ಲಾ ಸಚಿವರು ನನ್ನ ಸ್ನೇಹಿತರು. ನಾನು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಯಾರ ಬಗ್ಗೆ ನನಗೆ ದ್ವೇಷ ಇಲ್ಲ. ಆದರೆ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಹೌದು. ಅಲ್ಲದೇ, ಶಾಸಕರು ಯಾರೂ ಸಚಿವಗಿರಿಗಾಗಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿಲ್ಲ. ರೆಸಾರ್ಟ್ ಗೆ ಹೋಗಿ ಸಭೆ ನಡೆಸಿಲ್ಲ.  ಪಕ್ಷದ ಚೌಕಟ್ಟು ಮೀರಿ ವರ್ತಿಸಿಲ್ಲ. ನಾನು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದನ್ನು ಅವರು ( ಸಚಿವರು) ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಲಿ. ಆಗ ನಾನು ಸಹ ನನ್ನ ಸ್ಟೈಲ್ ನಲ್ಲೇ ಉತ್ತರ ಕೊಡುತ್ತೇನೆ ಎನ್ನುವ ಮೂಲಕ ಪ್ರತ್ಯೇಕ ಸಭೆ ನಡೆಸಿದ್ದ ಸಚಿವರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
Published by: HR Ramesh
First published: November 21, 2020, 3:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories