ಬಿ.ವೈ. ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕರಿಂದಲೇ 5 ಸಾವಿರ ಕೋಟಿ ರೂ. ಭ್ರಷ್ಟಾಚಾರದ ಆರೋಪ!

32 ಜನರ ಕೂಟವನ್ನು ಕಟ್ಟಿಕೊಂಡಿರುವ ಬಿ.ವೈ. ವಿಜಯೇಂದ್ರ ಪರ್ಯಾಯ ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರು 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಬಿಜೆಪಿ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಬಿ.ವೈ. ವಿಜಯೇಂದ್ರ.

ಬಿ.ವೈ. ವಿಜಯೇಂದ್ರ.

  • Share this:
ಮೈಸೂರು (ಆ. 26): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ವಿರುದ್ಧ​ 5 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಬಗ್ಗೆ ಖುದ್ದು ಬಿಜೆಪಿ ಶಾಸಕರೇ ಬಿಜೆಪಿ ಹೈಕಮಾಂಡ್​ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆ ಪತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ, ಬಿ.ವೈ. ವಿಜಯೇಂದ್ರ ಬೇನಾಮಿ ಸಂಪತ್ತನ್ನು ಮಾಡಿದ್ದಾರೆಂದು ಆರೋಪಿಸಿದ್ದಾರೆ. ಬಿಜೆಪಿಯನ್ನು ಉಳಿಸಿ ಅಂತ ಬಿಜೆಪಿ ಹೈಕಮಾಂಡ್​ಗೆ ಬಿಜೆಪಿ ಶಾಸಕರೇ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಲಕ್ಷ್ಮಣ ಬಿಡುಗಡೆ ಮಾಡಿದ್ದಾರೆ. 31 ಜನರ ಕೂಟವನ್ನು ವಿಜಯೇಂದ್ರ ರಚಿಸಿಕೊಂಡಿದ್ದಾರೆ. ಇಲಾಖೆಗಳಿಗೆ ಉಸ್ತುವಾರಿಗಳನ್ನು‌ ಮಾಡಿಕೊಂಡಿದ್ದಾರೆ. ಇವರ ಹೆಸರುಗಳನ್ನು ಬಿಡುಗಡೆ ಮಾಡಲಾಗುವುದು. ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಬಿಜೆಪಿ ಶಾಸಕರೇ ಬರೆದಿರೋ ಪತ್ರದಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ ಮಾಡಿದ್ದಾರೆ.ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಶಾಸಕರೇ ಸಹಿ ಮಾಡಿರೋ ಪತ್ರ ಬಿಡುಗಡೆ ಮಾಡಿರುವ ಲಕ್ಷ್ಮಣ, ಬಿಜೆಪಿ ಶಾಸಕರು ಬರೆದ ಪತ್ರದಲ್ಲಿ ವಿಜಯೇಂದ್ರ ಕುರಿತು ಗಂಭೀರ ಆರೋಪ ಮಾಡಲಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ಆಡಿಯೋ ಕ್ಲಿಪಿಂಗ್, ವೀಡಿಯೋ ಕ್ಲಿಪಿಂಗ್​ಗಳನ್ನು ನಾವು ಕ್ರೋಢೀಕರಿಸಿದ್ದೇವೆ. ಸೆಪ್ಟೆಂಬರ್‌ ಎರಡು ಅಥವಾ ಮೂರನೇ ವಾರದಲ್ಲಿ ದೆಹಲಿಯಲ್ಲಿ ಆಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಕೂಡ ಕಾಂಗ್ರೆಸ್ ಹೇಳಿದೆ.

32 ಜನರ ಕೂಟವನ್ನು ಕಟ್ಟಿಕೊಂಡಿರುವ ಬಿ.ವೈ. ವಿಜಯೇಂದ್ರ ಪರ್ಯಾಯ ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರಿಂದ ಬಿಜೆಪಿ ಪಕ್ಷವನ್ನು ಕಾಪಾಡಿ ಎಂದು ಬಿಜೆಪಿ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಯಾರ್ಯಾರ ಹೆಸರಿನಲ್ಲಿ ಆಸ್ತಿಗಳನ್ನು ಮಾಡಿದ್ದಾರೆ, ಕರ್ನಾಟಕ ಮತ್ತು ಬೇರೆ ರಾಜ್ಯಗಳಲ್ಲಿ ಎಲ್ಲೆಲ್ಲಿ ಅವರ ಹೆಸರಿನಲ್ಲಿ ಆಸ್ತಿಗಳಿವೆ ಎಂಬುದರ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು. ಸರ್ಕಾರ ಈ 5 ಕೋಟಿ ರೂ. ಭ್ರಷ್ಟಾಚಾರದ ಬಗ್ಗೆ 10 ದಿನದೊಳಗೆ ತನಿಖೆಗೆ ಆದೇಶಿಸದಿದ್ದರೆ ನಮ್ಮಲ್ಲಿ ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಎಸಿಬಿ, ಲೋಕಾಯುಕ್ತ, ಸಿಬಿಐ, ಹೈಕೋರ್ಟ್​ ಮೂಲಕ ತನಿಖೆಗೆ ಕ್ರಮ ವಹಿಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದ್ದಾರೆ.
Published by:Sushma Chakre
First published: