ಬೆಂಗಳೂರು: ವಿಧಾನ ಪರಿಷತ್ ಸದಸ್ಯ (Member of Legislative Council) ಸಿ ಪುಟ್ಟಣ್ಣ (Puttanna) ಅವರು ಇಂದು ಬಿಜೆಪಿ ಪಕ್ಷ (BJP Party) ತೊರೆದು ಕಾಂಗ್ರೆಸ್ ಪಕ್ಷ (Congress Party) ಸೇರ್ಪಡೆಯಾಗಿದ್ದಾರೆ. ಪುಟ್ಟಣ್ಣ ಅವರು ನಗರದ ರಾಜಾಜಿನಗರ ಕ್ಷೇತ್ರದಿಂದ (Rajaji Nagar Constituency) ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಖಚಿತವಾಗುತ್ತಿದ್ದಂತೆ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸದಸ್ಯ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ಪುಟ್ಟಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿ ಡಿಕೆ ಶಿವಕುಮಾರ್ ಅವರು, ಮೂರು ದಿನದಿಂದ ಸ್ಕ್ರೀನಿಂಗ್ ಕಮಿಟಿ ಪರಿಶೀಲನೆ ಮಾಡಿದೆ. ಸೆಂಟ್ರಲ್ ಎಲೆಕ್ಷನ್ ಕಮಿಟಿಗೆ ಪರಿಶೀಲನೆ ಮಾಡಿದ ಲಿಸ್ಟ್ ಕಳುಸಿಕೊಡಲಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲಾ ವರ್ಗಕ್ಕೂ ನ್ಯಾಯ ಒದಗಿಸುವ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇಂದು ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸತತ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿ ಆಡಳಿತವನನ್ನು ನೋಡಿ ಶಿಕ್ಷಕರ ಕ್ಷೇತ್ರಕ್ಕೆ ನ್ಯಾಯ ಕೊಡಿಸಲು ಆಗಿಲ್ಲ ಅಂತ ಬಂದಿದ್ದಾರೆ. ಮುಂದೆ ಅವರು ನಮ್ಮ ಪಕ್ಷದಲ್ಲಿ ಅವರ ಹೆಜ್ಜೆಗಳನ್ನ ನೋಡುತ್ತೀರಾ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: HD Kumaraswamy: ರೈತ ಯುವಕನನ್ನು ಮದುವೆಯಾದರೆ ಹೆಣ್ಣು ಮಗಳಿಗೆ 2 ಲಕ್ಷ ಗಿಫ್ಟ್! ಹಾಸನದಲ್ಲಿ ಹೆಚ್ಡಿಕೆ ಘೋಷಣೆ
ಬಿಜೆಪಿ ಭ್ರಷ್ಟಾಚಾರವನ್ನ ನೋಡಿ ರಾಜೀನಾಮೆ ನೀಡಿದ್ದಾರೆ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಉತ್ತಮ ಹೆಸರುಗಳಿಸಿದ ವ್ಯಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಭ್ರಷ್ಟಾಚಾರವನ್ನ ನೋಡಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಅವರನ್ನ ನಾವು ಪಕ್ಷಕ್ಕೆ ಸ್ವಾಗತಿಸುತ್ತೇವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ @siddaramaiah ಅವರು ಬಿಜೆಪಿ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪುಟ್ಟಣ್ಣ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು. pic.twitter.com/MF9858qxhz
— Karnataka Congress (@INCKarnataka) March 9, 2023
ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರುವುದು ವಿರಳ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಪುಟ್ಟಣ್ಣನವರನ್ನ ಪಕ್ಷಕ್ಕೆ ಸ್ವಾಗತ ಮಾಡಲಾಗಿದೆ. ಬಿಜೆಪಿಯ ಪರಿಷತ್ ಸದಸ್ಯರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಇನ್ನೂ ಅವರ ಅವಧಿ ಪೂರ್ಣವಾಗಿಲ್ಲ, ನಾಲ್ಕು ವರ್ಷದ ಅವಧಿ ಬಾಕಿಯಿದೆ. ಆದರೂ ಪರಿಷತ್ ಸದಸ್ಯತ್ವಕ್ಕೆ ರಿಸೈನ್ ಮಾಡಿದ್ದಾರೆ. ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರುವುದು ವಿರಳ. ಆದರೆ ಇತ್ತೀಚಿನ ಭ್ರಷ್ಟಾಚಾರ, ಕೋಮುವಾದಕ್ಕೆ ಬೇಸತ್ತಿದ್ದರು.
ಇದನ್ನೂ ಓದಿ: CBI Notice: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ಶಾಕ್! CBI ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ
ಅಭಿವೃದ್ಧಿ ಕಾರ್ಯಗಳಿಗೆ ತಿಲಾಂಜಲಿ ಇಟ್ಟಿದ್ದರು. ಜನರನ್ನ ಭಾವನಾತ್ಮಕವಾಗಿ ಸೆಳೆಯುತ್ತಿದ್ದರು. ಇದನ್ನ ನೋಡಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಿಸೈನ್ ಮಾಡಿದ್ದಾರೆ. ಪರಿಷತ್ ಉಪಸಭಾಪತಿಯಾಗಿ ಕೆಲಸ ಮಾಡಿದ್ದರು. ಶಿಕ್ಷಕ ಸಮುದಾಯದ ಪ್ರತಿನಿಧಿಯಾಗಿದ್ದರು. ಸತತವಾಗಿ ನಾಲ್ಕು ಎಲೆಕ್ಷನ್ ಗೆದ್ದಿದ್ದರು. ಅವರು ಬರುತ್ತಿರುವುದು ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ