• Home
  • »
  • News
  • »
  • state
  • »
  • V Srinivas Prasad;ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ?: ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

V Srinivas Prasad;ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ?: ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಸಂಸದ ಶ್ರೀನಿವಾಸ ಪ್ರಸಾದ್​

ಸಂಸದ ಶ್ರೀನಿವಾಸ ಪ್ರಸಾದ್​

ಯಾರ ವಿರುದ್ಧ ಸೋತಿದ್ದರೋ ಅವರನ್ನೇ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮಾಜಿ ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರ(GT Devegowda)ನ್ನ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ

  • Share this:

ಮೈಸೂರು: ಮಾಜಿ ಸಿಎಂ ಮತ್ತು ವಿಪಕ್ಷ ಸಿದ್ದರಾಮಯ್ಯ (Former CM Siddaramaiah) ಯಾರ ವಿರುದ್ಧ ಸೋತಿದ್ದರೋ ಅವರನ್ನೇ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮಾಜಿ ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರ(GT Devegowda)ನ್ನ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು  ಸಂಸದ ಶ್ರೀನಿವಾಸ್ ಪ್ರಸಾದ್ (V Srinivas Prasad) ಹೇಳಿದರು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಯಾರೂ ಹೇಳಿಲ್ಲ‌. ಇದೆಲ್ಲಾ ಊಹಾಪೋಹ. ಕಾಂಗ್ರೆಸ್ ದೇಶಾದ್ಯಂತ ನೆಲಕಚ್ಚಿದ್ದು, ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇವತ್ತಿನ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೊರಗಿದ್ದರು. ನಿನ್ನೆ ಮೊನ್ನೆ ಬಂದವರು ಕಾಂಗ್ರೆಸ್ ನಲ್ಲಿ ಸಿಎಂ ಆದರೂ ಅಂತಾ ಖರ್ಗೆ ಕೊರಗಿದ್ದು ನಾನು ನೋಡಿದ್ದೇನೆ ಎಂದು ಹೇಳಿದರು.


ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಲಿ


ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ತುಂಬಾ ಹತಾಶರಾಗಿದ್ದು, ಉದ್ವೇಗದಿಂದ ಏನೇನೊ ಮಾತನಾಡುತ್ತಿದ್ದಾರೆ. ಇತ್ತೀಚಿನವರೆಗೂ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳುತ್ತಿದ್ದಾರೆ. ವಿರೋಧ ಪಕ್ಷದವರಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ತಾಕತ್ತಿದ್ರೆ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಲಿ ನೋಡೋಣ. ನೀವು ಎಂದಾದರೂ ಪಕ್ಷೇತರವಾಗಿ ನಿಂತು ಗೆದ್ದಿದ್ದೀರಾ. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದವ್ರಿಗೆ ಭಾಷೆ ಮೇಲೆ ಹಿಡಿತವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.


ಇದನ್ನೂ ಓದಿ:  ಸಿದ್ದರಾಮಯ್ಯನದ್ದು ದಪ್ಪ ಚರ್ಮ, ದುರಹಂಕಾರದಿಂದಲೇ ಅವರು ಸೋತರು; ಸಂಸದ ಶ್ರೀನಿವಾಸ್ ಪ್ರಸಾದ್ ಟೀಕೆ


ಸಿದ್ದರಾಮಯ್ಯ ಆಡಿದ ಲಘು ಮಾತು ಬೇಸರ ತರಿಸಿದೆ


ಪ್ರಧಾನಿ ಬಗ್ಗೆ ಹಗುರ ಹೇಳಿಕೆ ನೀಡ್ತಾರೆ ಮತ್ತು  ತಾಲಿಬಾನ್ ಆಡಳಿತವನ್ನು ಹೋಲಿಸುವುದು ಇದೆಲ್ಲಾ ಎಂಥಾ ಮಾತು. ದೇಶದ ಪ್ರಧಾನಿ ಹುದ್ದೆ ಅಂದ್ರೆ ಏನು ಅನ್ನೋದೆ ಸಿದ್ದರಾಮಯ್ಯಗೆ ಗೊತ್ತಿಲ್ಲ. 1984ರ ನಂತರ ಕೇಂದ್ರದಲ್ಲಿ ಸುಭದ್ರ ಸರಕಾರವೇ ಇರಲಿಲ್ಲ. ಮೋದಿ ಅವರಿಂದಾಗಿ ಕೇಂದ್ರದಲ್ಲಿ ಸುಭದ್ರ ಸರ್ಕಾರ ಬಂದಿದೆ. ಮೋದಿಯವರು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಇರಲೇ ಇಲ್ಲ. ಅವರನ್ನ ಬಿಜೆಪಿ ಪ್ರಮೋಟ್ ಮಾಡಿ ಪ್ರಧಾನಿ ಮಾಡಿದೆ. ಅದಕ್ಕೆ ತಕ್ಕಂತೆ ಮೋದಿಯವರು ವಿಶ್ವ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.ಇಂತಹವರ ಬಗ್ಗೆ ಸಿದ್ದರಾಮಯ್ಯ ಆಡಿದ ಲಘು ಮಾತು ನಿಜಕ್ಕೂ ನನಗೆ ಬೇಸರ ಮೂಡಿಸಿದೆ ಎಂದರು.


ಸಿದ್ದರಾಮಯ್ಯಗೆ ಉಪಕಾರ ಸ್ಮರಣೆ ಇಲ್ಲ


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಉಮೇದಿನಲ್ಲಿದ್ದರು. ಮುಖ್ಯಮಂತ್ರಿ ಆಗಿದ್ದೇನೆ ಗೆದ್ದೇ ಗೆಲ್ಲುತ್ತೆನೆಂದು ಎರಡು ಬಾರಿ ಚಾಮುಂಡೇಶ್ವರಿ  ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು. ಆದರೆ ಚುನಾವಣೆಯಲ್ಲಿ ಹೀನಾಯವಾಗಿ ಸೋತರು. ಬಾದಾಮಿಯಲ್ಲಿ ಒಂದೂವರೆ ಸಾವಿರ ಮತಗಳಿಂದ ಗೆದ್ದರು. ಅಲ್ಲಿಯೂ ಸೋತಿದ್ದರೆ ನಿಮ್ಮ ರಾಜಕೀಯ ಜೀವನ ಏನಾಗುತ್ತಿತ್ತು ಎಂದು ಊಹಿಸಿಕೊಳ್ಳಿ. ಮನೆಗೆ ಹೋಗಬೇಕಾಗುತ್ತಿತ್ತು. ಆದರೂ ಅವೆಲ್ಲವನ್ನೂ ಮರೆತು ಸಿದ್ದರಾಮಯ್ಯ ಈಗ ಏನೆಲ್ಲಾ ಮಾತಾಡ್ತಿದಾರೆ‌. ಬಾದಾಮಿಯಲ್ಲಿ ಗೆಲ್ಲದಿದ್ದರೆ ಕಾಟೂರ್ ಜಮೀನಿನಲ್ಲೋ ಅಥವಾ ಸಿದ್ದರಾಮನ ಹುಂಡಿಯ ಮನೆಯಲ್ಲೊ‌ ಇರಬೇಕಾಗಿತ್ತು. ಸಿದ್ದರಾಮಯ್ಯ ಹಿಂದೆ ತಾವು ನಡೆದುಕೊಂಡದನ್ನು ನೆನಪು ಮಾಡಿಕೊಳ್ಳಬೇಕು. ನನಗೆ ನಂಜನಗೂಡು ಉಪಚುನಾವಣೆಯಲ್ಲಿ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಆತನಿಗೆ ಉಪಕಾರ ಸ್ಮರಣೆಯೆ ಇಲ್ಲ ಎಂದು ಕಿಡಿಕಾರಿದರು.


ಇದನ್ನೂ ಓದಿ:  6 ವರ್ಷಗಳ ಬಳಿಕ ಒಂದೇ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ-ಶ್ರೀನಿವಾಸ್​ ಪ್ರಸಾದ್


ಬೆಲೆ ಏರಿಕೆ ಬಿಜೆಪಿ ಇಮೇಜ್ ಕಡಿಮೆ ಮಾಡುತ್ತಿರಬಹುದು. ಆದರೆ, ಬೆಲೆ ನಿಯಂತ್ರಣ ಮಾಡಲು ಕೇಂದ್ರ - ರಾಜ್ಯ ಸರಕಾರಗಳು ಪ್ರಯತ್ನ ಮಾಡುತ್ತಿವೆ. ಪಂಜಾಬ್ ಭಾಗದ ರೈತರು ಒಂದು ಕಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಜೊತೆಯೂ ಕೇಂದ್ರ ಸರಕಾರ ಮಾತುಕತೆ ಮಾಡುತ್ತಿದೆ. ಯುಪಿ ಮತ್ತು ಬಿಹಾರ ನಲ್ಲಿ ಹಿಂದಿನಿಂದಲೂ ಶೋಷಣೆ, ದಬ್ಬಾಳಿಕೆ ನಡೆಯುತ್ತಲೆ ಇದೆ. ಈಗ ಅಲ್ಲಿ ಜಾಗೃತಿ ಮನೋಭಾವ ದಲಿತರಲ್ಲಿ ಬರುತ್ತಿದೆ ಎಂದು ತಿಳಿಸಿದರು.


ನಂಜನಗೂಡು ಸೋಲು ಜೀವನ ಪರ್ಯಂತ ಮರೆಯಲ್ಲ


ನಂಜನಗೂಡು ಉಪ ಚುನಾವಣೆಯ ವೇಳೆಯಲ್ಲಿ  ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡರು. ಕಾಂಗ್ರೆಸ್ ಗೆ ಅಭ್ಯರ್ಥಿಯೇ ಇಲ್ಲದಿದ್ದರೂ ಬೇರೆ ಪಕ್ಷದವರನ್ನು ಸೆಳೆದು ನಿಲ್ಲಿಸಿದ್ರಿ. ಜೆಡಿಎಸ್ ನವರು ಅಭ್ಯರ್ಥಿ ಹಾಕದೇ ಕಾಂಗ್ರೆಸ್ ಗೆ ಅನುಕೂಲ ಮಾಡಿಕೊಟ್ಟರು. ನನ್ನಲ್ಲಿ ಹಣ ಇಲ್ಲ ಚುನಾವಣೆಗೆ ನಿಲ್ಲೋದಿಲ್ಲ ಎಂದು ಯಡಿಯೂರಪ್ಪ ಅವರಿಗೆ ಹೇಳಿದ್ದೆ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಪೊಲೀಸರ‌ ಮೂಲಕ ಹಣ ಹಂಚಿಕೆ ಮಾಡಿದರು ಎಂದು ಆರೋಪಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಸಮ್ಮುಖದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಿದ್ರು. ಆ ಉಪ ಚುನಾವಣೆ ನನಗೆ ಅತಿ ಹೆಚ್ಚು ನೋವು ನೀಡಿದೆ. ಆ ನೋವನ್ನು ಜೀವನ ಪರ್ಯಂತ ಮರೆಯಲಾಗುವುದಿಲ್ಲ ಎಂದು ಸೋಲಿನ ಕಹಿಯನ್ನ ನೆನಪು ಮಾಡಿಕೊಂಡರು.

Published by:Mahmadrafik K
First published: