• Home
  • »
  • News
  • »
  • state
  • »
  • Siddaramaiah: ಮಾನ-ಮರ್ಯಾದೆ ಇದ್ರೆ ಕ್ಷಮೆ ಕೇಳಿ; ಬಿಜೆಪಿ ಅನುಭವಿಸುತ್ತಿರುವ ಅಧಿಕಾರದ ಹಿಂದೆ ಅಮಾಯಕ ಯುವಕರ ರಕ್ತದ ಕಲೆ ಇದೆ!

Siddaramaiah: ಮಾನ-ಮರ್ಯಾದೆ ಇದ್ರೆ ಕ್ಷಮೆ ಕೇಳಿ; ಬಿಜೆಪಿ ಅನುಭವಿಸುತ್ತಿರುವ ಅಧಿಕಾರದ ಹಿಂದೆ ಅಮಾಯಕ ಯುವಕರ ರಕ್ತದ ಕಲೆ ಇದೆ!

ಸಿದ್ದರಾಮಯ್ಯ

ಸಿದ್ದರಾಮಯ್ಯ

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತದ ಕಲೆ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.

  • Share this:

ಬೆಂಗಳೂರು (ಅ.04): ಪರೇಶ್‌ ಮೇಸ್ತ ಪ್ರಕರಣದಲ್ಲಿ (Paresh Mesta Case) ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂಥ ಅಮಾಯಕ ಯುವಕರ ರಕ್ತ ಇದೆ’ ಎಂದು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ (Siddaramaih) ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ (Paresh Mesta) ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. 


ಪರೇಶ ಮೇಸ್ತ ಸಾವು ಕೊಲೆಯಲ್ಲ ಆಕಸ್ಮಿಕ ಸಾವು


ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ (B Report) ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


1,500 ಪುಟಗಳ ವರದಿ ಸಲ್ಲಿಕೆ


4 ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನವೆಂಬರ್​ 16ಕ್ಕೆ ಮುಂದೂಡಿದೆ.


ಮಾನ-ಮರ್ಯಾದೆ ಇದ್ರೆ ಕ್ಷಮೆ ಕೇಳಿ


ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದಿದ್ದಾರೆ.ಅಮಾಯಕ ಯುವಕರ ರಕ್ತ ಕಲೆ ಇದೆ


ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತದ ಕಲೆ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.


ಕೇಸ್ ರೀ ಓಪನ್ ಆಗುತ್ತಾ?


ಬಿ ರಿಪೋರ್ಟ್​ ನಿಂದಾಗಿ ಅಂದು ಪ್ರತಿಭಟನೆ ನಡೆಸಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಇತ್ತ ಪ್ರಮೋದ್ ಮುತಾಲಿಕ್ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ್ದಾರೆ. ಮುಜುಗರದಿಂದ ಪಾರಾಗಾಲು ಸರ್ಕಾರ ಪ್ರಕರಣದ ಮರು ತನಿಖೆಗೆ ಆದೇಶ ನೀಡುತ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.


ಇದನ್ನೂ ಓದಿ: Siddaramaiah: ಪರೇಶ್‌ ಮೇಸ್ತ ಕೇಸ್‌ನಲ್ಲಿ ಬಿಜೆಪಿ ವಿರುದ್ಧ ಗುಡುಗು! ನ್ಯೂಸ್ 18 ಕನ್ನಡ ವರದಿ ಟ್ವೀಟ್ ಮಾಡಿದ ಸಿದ್ದರಾಮಯ್ಯ


ಪರೇಶ್ ಮೇಸ್ತ ತಂದೆ ಪ್ರತಿಕ್ರಿಯೆ


ಸಾವಿನ ವರದಿ ಬಗ್ಗೆ ಪರೇಶ್ ಮೇಸ್ತ ತಂದೆ ಕಮಲಾಕರ್ ಮೇಸ್ತ ನ್ಯೂಸ್ 18ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಹಜ ಸಾವು ಎಂಬ CBI ವರದಿಯಿಂದ ಅಸಮಾಧಾನವಾಗಿದೆ. ನನ್ನ ಮಗನ ಕೊಲೆಯಾಗಿದೆ ಎಂದು ನಾವೇ ಆರೋಪಿಸಿದ್ದೆವು. ಆದ್ರೆ ಸಿಬಿಐ ವರದಿ ಬಳಿಕ ಸಾವಿನ ಕಾರಣ ಗೊತ್ತಾಗಿದೆ ಎಂದು ಹೇಳಿದ್ದಾರೆ.

Published by:ಪಾವನ ಎಚ್ ಎಸ್
First published: