ಬೆಂಗಳೂರು ( ಜೂ 14): ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹೊಸಪೇಟೆಯ (Hosapete) ಕಾರ್ಯಕಾರಿಣಿ ಸಭೆಗೆ ಬಂದು ರಾಜ್ಯ ಬಿಜೆಪಿಗೆ ಚುನಾವಣೆಯ ಬೂಸ್ಟ್ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (BJP National President JP Nadda) ಇದೀಗ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇದೇ ಜೂನ್ 18ಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಳೂರಿಗೆ ಬರ್ತಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು (Political activities) ಗರಿಗೆದರಿವೆ. ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ. ಪರಿಷತ್, ರಾಜ್ಯಸಭೆ ಚುನಾವಣೆಗಳ ಬಳಿಕ ರಾಜ್ಯಕ್ಕೆ ಆಗಮಿಸುತ್ತಿರುವ ಜೆ ಪಿ ನಡ್ಡಾ, ಬಿಬಿಎಂಪಿ ಚುನಾವಣಾ (BBMP Election) ತಯಾರಿ ಬಗ್ಗೆ ಬಿಜೆಪಿ ನಾಯಕರಿಂದ ಮಾಹಿತಿ ನಡೆಯಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಬರ್ತಿರೋದ್ರಿಂದ ಸಚಿವಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದೆ.
ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ
ಇನ್ನು ಇದೇ 20, 21 ರಂದು ಪ್ರಧಾನಿ ಮೋದಿಯಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿರುವ ಪಿಎಂ ನರೇಂದ್ರ ಮೋದಿ, ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಿಗೆ ಚಾಲನೆ ಕೊಡಲಿದ್ದಾರೆ. ಅಲ್ಲದೇ ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್ ಮತ್ತು ಸಬರ್ಬನ್ ರೈಲು ಯೋಜನೆಗಳಿಗೆ ಚಾಲನೆ ಹಾಗೂ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯ ವನ್ನು ಕೂಡ ಉದ್ಘಾಟನೆ ಮಾಡಲಿದ್ದಾರೆ. ಇವರಿಬ್ಬರ ಭೇಟಿಯಿಂದಾಗಿ ರಾಜ್ಯದಲ್ಲಿ ಚುನಾವಣೆಗಳ ಕಾವು ಜೋರಾಗಿದೆ.
150 ಸ್ಥಾನ ಗೆಲ್ಲಲು ಬಿಜೆಪಿ ಪಣ
ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬಿಜೆಪಿ ಪಣ ತೊಟ್ಟಿದೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಂತ್ರಗಾರಿಕೆ ನಡೆಸಿದ್ದಾರೆ. ಇನ್ನೂ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗುರಿ ಹೊಂದಿರುವ ಬಿಜೆಪಿ ರಾಜ್ಯದಲ್ಲಿ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ. ಈಗಾಗಲೇ ರಾಜ್ಯಕ್ಕೆ ಮತ್ತೆ ಮತ್ತೆ ಬರ್ತಿರುವ ಜೆಪಿ ನಡ್ಡಾ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಲು ರಣತಂತ್ರ ವನ್ನು ರೂಪಿಸ್ತಿದ್ದಾರೆ.
ಇದನ್ನೂ ಓದಿ: Karnataka Politics: ಆ ಭೇದಿ ಗಬ್ಬು ವಾಸನೆಗೆಲ್ಲಾ ನಾನು ರಿಯಾಕ್ಷನ್ ಮಾಡಲ್ಲ; ಪ್ರತಾಪ್ ಸಿಂಹ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಂತ್ರಗಾರಿಕೆ
ಮುಖ್ಯವಾಗಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರ ಜೊತೆ ಜೆಪಿ ನಡ್ಡಾ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಚುನಾವಣೆಗೆ ಹತ್ತಿರ ಬರ್ತಿರೋದ್ರಿಂದ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವುದು, ರಾಜ್ಯದಲ್ಲಿ ಜನರ ವಿಶ್ವಾಸ ಗಳಿಸುವುದು, ಈ ಮೂಲಕ ಚುನಾವಣೆಗೆ ಗೆಲ್ಲುವುದರ ಬಗ್ಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ನಡ್ಡಾ ಭೇಟಿಯಿಂದ ಸಚಿವಕಾಂಕ್ಷಿಗಳಲ್ಲಿ ನಿರೀಕ್ಷೆ
ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಬರ್ತಿರೋದ್ರಿಂದ ಸಚಿವಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದೆ. ಈಗಾಗಲೇ ದೆಹಲಿಗೆ ಮುಖ್ಯಮಂತ್ರಿ ಗಳು ಹಲವು ಬಾರಿ ಹೋಗಿ ಬಂದ್ರು, ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಹಲವು ಬಾರಿ ಬಂದು ಹೋದರು ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರ ಮಾಡಿರಲಿಲ್ಲ, ಇದು ಎಲ್ಲೋ ಒಂದು ಕಡೆ ಸಚಿವ ಆಕಾಂಕ್ಷಿ ಗಳಲ್ಲಿ ಬೇಸರವನ್ನು ತರಿಸೋದ್ರ ಮೂಲಕ ನಾಯಕರ ವಿರುದ್ದ ಮುನಿಸಿಗೂ ಕಾರಣವಾಗಿತ್ತು.
ಇದನ್ನೂ ಓದಿ: Congress Protest: ನಿಮ್ಮ ಅಸ್ತಿತ್ವವೇ ಶೂನ್ಯ, ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನ; ಕೈ ಪ್ರತಿಭಟನೆಗೆ ಬಿಜೆಪಿ ತಿರುಗೇಟು
ಇದೀಗ ನಡ್ಡಾ ಆಗಮನದಿಂದ ಈ ಬಾರಿ ಆದರೂ ಸಂಪುಟ ವಿಸ್ತರಣೆ ಆಗಬಹುದು, ಇರೋ 8-3 ತಿಂಗಳಲ್ಲಿ ಮಂತ್ರಿ ಆಗಬಹುದೆಂಬ ಕನಸ್ಸನ್ನು ಸಚಿವ ಸ್ಥಾನದ ಆಕಾಂಕ್ಷಿ ಗಳು ಇಟ್ಟುಕೊಂಡಿದ್ದಾರೆ..
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ